Author: admin
ಮಂಗಳೂರಿನ ಖ್ಯಾತ ಹೋಟೆಲ್ ಉದ್ಯಮಿ, ಶ್ರೀದೇವಿ ವಿದ್ಯಾ ಸಮೂಹ ಸಂಸ್ಥೆಗಳ ಮುಖ್ಯಸ್ಥ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಸ್ಥಾಪಕಧ್ಯಕ್ಷ, ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಅಧ್ಯಕ್ಷ ಶ್ರೀ ಎ. ಸದಾನಂದ ಶೆಟ್ಟಿ ಅವರ ಧರ್ಮಪತ್ನಿ ಮೂಲ್ಕಿ ಕುಬೆವೂರು ದೊಡ್ಡಮನೆ ಮೈನಾ ಎಸ್ ಶೆಟ್ಟಿ (75 ವರ್ಷ) ಅವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ರಾತ್ರಿ 8 ಕ್ಕೆ ನಿಧನರಾದರು. ಮೃತರು ಶ್ರೀದೇವಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿಯಾಗಿದ್ದು ಶ್ರೀದೇವಿ ಸಮೂಹ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದವರು. ಮಂಗಳೂರಿನ ಕ್ವಾಲಿಟಿ-ಕುಡ್ಲ ಹೋಟೆಲ್ ಸಮೂಹಗಳನ್ನು ತನ್ನ ಕ್ರಿಯಾಶೀಲತೆಯಿಂದ ಬೆಳೆಸಿ, ರಾಜ್ಯದ ಪ್ರತಿಷ್ಠಿತ ಕೇಟರಿಂಗ್ ಸಂಸ್ಥೆಯಾಗಿ ರೂಪುಗೊಳ್ಳುವಲ್ಲಿ ಶ್ರಮಿಸಿದವರು. ಜಿಲ್ಲೆಯ ಹಲವಾರು ಪ್ರತಿಷ್ಠಿತ ಕೇಟರಿಂಗ್, ಹೋಟೆಲ್ ಉದ್ಯಮಿಗಳಿಗೆ ಮಾರ್ಗದರ್ಶಿಯಾಗಿದ್ದರು. ಬೆಂಗಳೂರು, ಮಂಗಳೂರಿನಲ್ಲಿ ನಡೆದಿದ್ದ ಚಾರಿತ್ರಿಕ ವಿಶ್ವ ಬಂಟರ ಸಮ್ಮೇಳನದ ಊಟೋಪಚಾರದ ಸಂಪೂರ್ಣ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದವರು. ಸರಳ ಸಜ್ಜನಿಕೆಯಿಂದ ಎಲ್ಲರ ಪ್ರೀತಿ ಗೌರವಗಳಿಗೆ ಪಾತ್ರರಾಗಿದ್ದರು. ಮೂಲ್ಕಿ ಕುಬೆವೂರು ದೊಡ್ಡಮನೆಯ…
ಬಂಟರ ಸಂಘ ಪಿಂಪ್ರಿ ಚಿಂಚ್ವಾಡ್ ಇದರ ವಾರ್ಷಿಕ ಕ್ರೀಡಾಕೂಟವು ಮದನ್ ಲಾಲ್ ಡಿಂಗ್ರಾ ಮೈದಾನ ನಿಗ್ಡಿ ಇಲ್ಲಿ ಸಂಘದ ಅಧ್ಯಕ್ಷ ರಾಕೇಶ್ ಶೆಟ್ಟಿ ಬೆಳ್ಳಾರೆ ಇವರ ಅಧ್ಯಕ್ಷತೆಯಲ್ಲಿ ನಡೆದಿದ್ದು ಈ ಸಂದರ್ಭ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಅಕ್ಷತ್ ಶೆಟ್ಟಿ ನೇತೃತ್ವದ “ಎರ್ಮಾಳ್ ಬಂಟ್ಸ್ ” ತಂಡವು ಪ್ರಶಸ್ತಿಯನ್ನು ಜಯಿಸಿತು. ವೈಷ್ಣವಿ ತಂಡ ದೇಹು ರೋಡ್ ತಂಡ ರನ್ನರ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ “ಎರ್ಮಾಳ್ ಬಂಟ್ಸ್” ತಂಡ ಇಲ್ಲಿ ಜಯವನ್ನು ದಾಖಲಿಸಿರುವುದು ವಿಶೇಷತೆಯಾಗಿದೆ. ಪುಣೆಯ ಹವ್ಯಾಸಿ ವಾಲಿಬಾಲ್ ಆಟಗಾರ ಅಕ್ಷತ್ ಶೆಟ್ಟಿಯವರು “ವಾಲಿಬಾಲ್ ಅಕ್ಷತ್” ಎಂದೇ ಕರೆಯಲ್ಪಡುತ್ತಿದ್ದು ಪುಣೆಯಲ್ಲಿ ನಡೆಯುವ ವಿವಿಧ ಸಂಘ ಸಂಸ್ಥೆಗಳ ಕ್ರೀಡಾಕೂಟದಲ್ಲಿ ತನ್ನ ಉತ್ಸಾಹಿ ಆಟಗಾರರ ತಂಡದೊಂದಿಗೆ ಸಕ್ರಿಯರಾಗಿ ಪಾಲ್ಗೊಳ್ಳುವ ಹವ್ಯಾಸವನ್ನು ಬೆಳೆಸಿಕೊಂಡಿದ್ದು ಅನ್ಯ ಆಟಗಾರರಿಗೆ ಸ್ಫೂರ್ತಿ ತುಂಬುತ್ತಿದ್ದಾರೆ. ಪುಣೆಯ ವಿವಿಧ ಸಂಘ ಸಂಸ್ಥೆಗಳ ಕ್ರೀಡಾ ಕೂಟದಲ್ಲಿಯೂ ಭಾಗವಹಿಸಿ ತಂಡವನ್ನು ಮುನ್ನಡೆಸಿ ಯಶಸ್ವಿ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಸಂಘದ ಅಧ್ಯಕ್ಷರಾದ ರಾಕೇಶ್ ಶೆಟ್ಟಿ ಬೆಳ್ಳಾರೆ,…
ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ದೈಹಿಕ, ಮಾನಸಿಕ, ಬೌದ್ಧಿಕ, ಸಾಮಾಜಿಕ, ಸಾಂಸ್ಕೃತಿಕ ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರಿಯಲ್ಲಿ ಆಯೋಜಿಸಲಾಗಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ದೇಶದ ಸಾವಿರಾರು ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್‌ಗಳು, ವಿದ್ಯಾರ್ಥಿಗಳು ಮತ್ತು ಘಟಕದ ನಾಯಕರು ಮತ್ತು ವಿದೇಶಗಳ ವಿದ್ಯಾರ್ಥಿಗಳು ಹಾಗೂ ನಾಗರೀಕರೂ ಕೂಡ ಭಾಗವಹಿಸಿದ್ದಾರೆ. ಡಿಸೆಂಬರ್ 21 ರಿಂದ 7 ದಿನಗಳವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶ ಮತ್ತು ರಾಜ್ಯದ ಶ್ರೀಮಂತ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅನೇಕ ಕಲಾವಿದರು ಪ್ರದರ್ಶಿಸುತ್ತಿರುವುದು ಶ್ಲಾಘನೀಯ ಎಂದರು. ಜವಾಬ್ದಾರಿಯುತ ನಾಗರಿಕರಾಗಿ ದೇಶದ ಸೇವೆ ಮತ್ತು ಸಾರ್ವಜನಿಕ ಹಿತಾಸಕ್ತಿಯಲ್ಲಿ ಕೊಡುಗೆ ನೀಡಬಹುದು. ಕರ್ನಾಟಕ ರಾಜ್ಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ವೇಗವಾಗಿ ಹೆಚ್ಚುತ್ತಿವೆ.…
ಏರ್ಯ ಲಕ್ಷ್ಮೀ ನಾರಾಯಣ ಆಳ್ವರು ಎಂದರೆ ನಮಗೆ ನೆನಪಾಗೋದು ಅವರ ಸಾಹಿತ್ಯ, ಜನಪದ ಜ್ಞಾನ. ಸಾಹಿತಿಯಾಗಿ, ಅತ್ಯುತ್ತಮ ಸಂಘಟನಾ ಪಟುವಾಗಿ, ಸಮಾಜಸೇವಕರಾಗಿ ಅವರು ನೀಡಿದ ಕೊಡುಗೆ ಅಪಾರ ಮತ್ತು ಅನನ್ಯ. ತುಳು ಬರಹಗಾರರಾಗಿ ಅವರು ತುಳುನಾಡಿನ ಪರಂಪರೆ ಶ್ರೇಷ್ಠತೆಗಳನ್ನು ಎತ್ತಿ ಹಿಡಿಯುವ ಕಾಯಕವನ್ನು ಜೀವನದುದ್ದಕ್ಕೂ ಮಾಡಿಕೊಂಡು ಬಂದಿದ್ದಾರೆ. ಅಂಕಣಕಾರರಾಗಿದ್ದರು, ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ, ಅನೇಕ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳ ರೂವಾರಿಯೂ ಅವರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೊಡಂಕಾಪುವಿನಲ್ಲಿ 1926ರ ಮಾರ್ಚ್ 19ರಂದು ಲಕ್ಶ್ಮೀನಾರಾಯಣ ಆಳ್ವರು ಜನಿಸಿದರು, `ಏರ್ಯ ಬೀಡು’ ಎಂಬ ಪ್ರತಿಷ್ಠಿತ ಮಾತೃ ಮೂಲ ಪದ್ಧತಿಯ, ದೈವಾರಾಧನೆಯ, ಕೃಷಿ ಪ್ರಧಾನ ಬಂಟ ಮನೆತನಕ್ಕೆ ಸೇರಿದವರು. ತಾಯಿ ಸೋಮಕ್ಕ ಮತ್ತು ತಂದೆ ಸುಬ್ಬಯ್ಯ ಆಳ್ವ. ಅವರ ಪ್ರಾಥಮಿಕ ವಿದ್ಯಾಭ್ಯಾಸ ನಡೆದದ್ದು ಬಂಟ್ವಾಳದಲ್ಲಿ. ಅವರು ಹೈಸ್ಕೂಲು ಓದಿದ್ದು ಕೆನರಾ ಹೈಸ್ಕೂಲು ಮಂಗಳೂರಿನಲ್ಲಿ. ಸ್ವಾತಂತ್ರ್ಯ ಹೋರಾಟಗಳು ತೀವ್ರವಾಗಿದ್ದ ಕಾಲದಲ್ಲಿ ಹುಟ್ಟಿದ್ದರಿಂದ ಸ್ವಾತಂತ್ರ್ಯಪೂರ್ವದ ಆದರ್ಶಗಳನ್ನು ಅವರು ಮೈಗೂಡಿಸಿಕೊಂಡಿದ್ದರು. ಹೋರಾಟಗಾರರ ಚಿಂತನೆಗಳು ಮತ್ತು…
ತುಳುನಾಡಿನ ಕಾರ್ಕಳ ಸೀಮೆಯ ಒಂದು ಹಳ್ಳಿಯಲ್ಲಿ ಕಲ್ಲು ಕುಟಿಗ ಜನಾಂಗದ ಶಿಲ್ಪಿಗಳ ತುಂಬು ಸಂಸಾರವೊಂದಿತ್ತು. ಮನೆಯ ಯಜಮಾನ ಶಂಬು ಕಲ್ಕುಡ ಅಪ್ರತಿಮ ಶಿಲ್ಪಿಯಾಗಿದ್ದನು. ಶ್ರವಣ ಬೆಳಗೋಳದಲ್ಲಿ ಸುಂದರವಾದ ಬಾಹುಬಲಿ ಮೂರ್ತಿಗೆ ಜನ್ಮ ನೀಡಿದ ಶಂಬು ಕಲ್ಕುಡ ಅಲ್ಲಿಯ ಅರಸರ ಚದುರಂಗದ ಆಟದಿಂದ ಹೊರ ಬರಲಾರದೆ ಕೀರ್ತಿಶೇಷನಾಗುತ್ತಾನೆ. ಮುಂದೆ ಇಂತಹ ಮೂರ್ತಿ ಇನ್ನೆಲ್ಲಿಯೂ ತಲೆ ಎತ್ತಬಾರದು ಅನ್ನುವ ಅಸೂಯ ಭಾವನೆ ಶಂಬು ಕಲ್ಕುಡನ ಸಾವಿನಲ್ಲಿ ಅಂತ್ಯಗೊಂಡಿತ್ತು. ತಾನು ಕೆತ್ತಿದ ಮೂರ್ತಿಯಿಂದಲೇ ತನಗೆ ಮರಣವಾಯಿತು ಇನ್ನೆಂದಿಗೂ ನಮ್ಮ ಮಕ್ಕಳನ್ನು ಹಣ ಅಥವಾ ಕೀರ್ತಿಯ ಆಸೆಗೆ ಮಕ್ಕಳನ್ನು ಅರಸರ ಬಳಿಗೆ ಮೂರ್ತಿ ಕೆತ್ತಲು ಕಳುಹಿಸದಂತೆ ಸಾಯುವ ಕಾಲಕ್ಕೆ ತನ್ನ ಹೆಂಡತಿಯಾದ ಈರಮ್ಮಳಿಗೆ ಚಾರನ ಕೈಯಲ್ಲಿ ಹೇಳಿ ಕಳುಹಿಸಿದ್ದ. ತುಂಬು ಸಂಸಾರ. ಬಡತನ ಮನೆಯಲ್ಲಿ ಸೆರಗು ಹಾಕಿ ಮಲಗಿಕೊಂಡಿತ್ತು. ಮನೆಯ ಆಧಾರ ಸ್ತಂಬ ಕಳಚಿ ಬಿದ್ದಾಗ ಒಪ್ಪತ್ತಿನ ಊಟಕ್ಕೂ ತಾತ್ವರ ಉಂಟಾಗುತ್ತದೆ. ಆರನೆ ಮಗ ಬೀರನಿಗೆ ಅಪ್ಪ ಶಂಬು ಕಲ್ಕುಡ ತನ್ನೆಲ್ಲಾ ಶಿಲ್ಪಿ ವಿದ್ಯೆಯನ್ನು ಧಾರೆಯೆರೆದು ತನ್ನ…
ಮುಲ್ಕಿ ತಾಲ್ಲೂಕಿನ ಕರ್ನಿರೆ ಗ್ರಾಮದ ಕಾರ್ಣಿಕದ ದೈವ ಕ್ಷೇತ್ರವಾಗಿರುವ ಶ್ರೀ ಜಾರಂದಾಯ ದೈವಕ್ಕೆ ಗ್ರಾಮಸ್ಥರ ಸೇವಾ ರೂಪದ ಬಂಗಾರದ ಮೊಗವನ್ನು ವಿಜೃಂಭಣೆಯಿಂದ ಮೆರವಣಿಗೆಯಲ್ಲಿ ತಂದು ಶ್ರೀ ಜಾರಂದಾಯ ಸ್ಥಾನಕ್ಕೆ ಸಮರ್ಪಣೆ ಮಾಡಿದರು. ಕರ್ನಿರೆ ಧರ್ಮ ದೈವ ಜಾರಂದಾಯ ದೈವದ ಬಂಗಾರದ ಮುಗವನ್ನು ಗ್ರಾಮ ದೇವರು ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಪೂಜೆ ಮಾಡಿ, ದೈವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಗ್ರಾಮದ ಮುಖ್ಯಸ್ಥರಾದ ಬಿಲ್ಲವ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ನ ನಿರ್ದೇಶಕ ಗಂಗಾಧರ ಎನ್ ಅಮೀನ್ ಕರ್ನಿರೆ, ಹರೀಶ್ಚಂದ್ರ ಶೆಟ್ಟಿ ಕರ್ನಿರೆ, ವಾಸುದೇವ ಶೆಟ್ಟಿ ಕರ್ನಿರೆ ಮತ್ತು ಊರ ಹತ್ತು ಸಮಸ್ತರ ಸಮ್ಮುಖದಲ್ಲಿ ಮೆರವಣಿಗೆ ಮೂಲಕ ದೈವಸ್ಥಾನಕ್ಕೆ ಮುಗವನ್ನು ಅರ್ಪಿಸಲಾಯಿತು. ಜಾರಂದಾಯ ದೈವದ ಮುಗವನ್ನು ಬಂಗಾರದ ಮುಗವನ್ನಾಗಿ ಪರಿವರ್ತಿಸುವುದು ಊರಿನ ಪ್ರಮುಖರು ಹಾಗೂ ಊರಿನ ಸಮಸ್ತ ದೈವ ಭಕ್ತರ ಇಚ್ಛೆಯಾಗಿತ್ತು. ಇದುವರೆಗೆ ಮುಗಕ್ಕೆ ನಾಲಗೆ, ಕಿವಿ ಮತ್ತು ಸತ್ತಿಗೆಯನ್ನು ಬಂಗಾರದಿಂದ…
ಬೆಂಗಳೂರು ದೂರದರ್ಶನದ ಚಂದನ ವಾಹಿನಿಯಲ್ಲಿ ಭಾಸ್ಕರ ರೈ ಕುಕ್ಕುವಲ್ಲಿ ಅವರು ಸಂಯೋಜಿಸಿದ ‘ತುಳುನಾಡ ಆಟಿದ ಕೂಟ’ ಪಟ್ಟಾಂಗ ಕಾರ್ಯಕ್ರಮ ಇದೇ ಜುಲೈ 29 ರಂದು ಶನಿವಾರ ಬೆಳಿಗ್ಗೆ 9.30 ರಿಂದ ಪ್ರಸಾರಗೊಳ್ಳಲಿದೆ. ಇದರಲ್ಲಿ ತುಳುನಾಡಿನ ಆಟಿ ತಿಂಗಳ ವಿಶೇಷತೆ, ಆಟಿ ಮತ್ತು ಆಷಾಢಕ್ಕಿರುವ ವ್ಯತ್ಯಾಸ, ಆಟಿಯ ಆಚರಣೆಗಳು, ತಿಂಡಿ – ತಿನಿಸು, ಪಾಲೆ ಕಷಾಯ, ಆಟಿ ಕಳೆಂಜ, ಚೆನ್ನೆಮಣೆ ಮತ್ತಿತರ ಆಟಗಳ ಕುರಿತು ಸ್ವಾರಸ್ಯಕರ ಚರ್ಚೆ ಹಾಗೂ ಪ್ರಾತ್ಯಕ್ಷಿಕೆ ನಡೆಯಲಿದೆ. ಸಂವಾದದಲ್ಲಿ ಕನ್ನಡ ಹಾಗೂ ತುಳು ಎರಡೂ ಭಾಷೆಗಳನ್ನು ಬಳಸಲಾಗಿದೆ. ಮಾತುಕತೆಯಲ್ಲಿ ಜಾನಪದ ತಜ್ಞ ಹಾಗೂ ಲೇಖಕ ಡಾ. ಗಣನಾಥ ಶೆಟ್ಟಿ ಎಕ್ಕಾರ್, ಲೇಖಕಿಯರಾದ ವಿಜಯಲಕ್ಷ್ಮೀ ಕಟೀಲ್, ಅಕ್ಷತಾ ರಾಜ್ ಪೆರ್ಲ ಹಾಗೂ ಜನಪದ ಗಾಯಕಿ ಅಕ್ಷತಾ ಕುಡ್ಲ ಭಾಗವಹಿಸಿದ್ದಾರೆ. ಮಾಧ್ಯಮ ಸಂಯೋಜಕ ಮತ್ತು ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸಂವಾದವನ್ನು ನಡೆಸಿಕೊಡುವರು. ಜುಲೈ 22 ರಂದು ಬೆಂಗಳೂರು ದೂರದರ್ಶನದ ಸ್ಟುಡಿಯೋದಲ್ಲಿ ಕಾರ್ಯಕ್ರಮದ ಚಿತ್ರೀಕರಣ ನಡೆದಿದೆ. ಹಿರಿಯ ಕಾರ್ಯಕ್ರಮ ನಿರ್ಮಾಪಕಿ…
ಋತು ಬದಲಾದಂತೆ ಆ ಋತುವಿಗೆ ತಕ್ಕಂತೆ ಜೀವನ ಶೈಲಿ ಬದಲಾಯಿಸಿಕೊಳ್ಳಬೇಕು. ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳದೇ ಇದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದೀಗ ಮಳೆಗಾಲ ಆರಂಭವಾಗಿದೆ. ಚಳಿಗಾಲ, ಬೇಸಗೆ ಕಾಲಕ್ಕಿಂತಲೂ ಹೆಚ್ಚಿನ ಕಾಳಜಿ ಮಳೆಗಾಲದಲ್ಲಿ ಅಗತ್ಯವಿದೆ. ಮಳೆಯನ್ನು ಸಂಭ್ರಮಿಸುವುದರೊಂದಿಗೆ ಆರೋಗ್ಯದ ಕಡೆಗೂ ಗಮನಹರಿಸಬೇಕು. ಸಾಮಾನ್ಯವಾಗಿ ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳೂ ಹೆಚ್ಚು. ಈ ವೇಳೆ ತೇವಾಂಶದ ಪ್ರಮಾಣ ಹೆಚ್ಚಾಗಿರುವುದರಿಂದ ದೇಹದ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ. ನೀರಿನಿಂದ ಹರಡುವ ರೋಗಗಳಾದ ಡಯೇರಿಯಾ, ಕಾಲರಾ, ಜಠರ ಸಮಸ್ಯೆ, ಭೇದಿ ಹಾಗೂ ಸಾಮಾನ್ಯ ಶೀತ, ಜ್ವರ ಮತ್ತು ಸೊಳ್ಳೆಗಳಿಂದ ಉಂಟಾಗುವ ಡೆಂಘೀ ಮತ್ತು ಮಲೇರಿಯಾ ಮಳೆಗಾಲದ ಸಾಮಾನ್ಯ. ಹೀಗಾಗಿ ಆರೋಗ್ಯ ಸಮಸ್ಯೆಗಳಾಗಿವೆ. ಮಳೆಗಾಲದ ಸೋಂಕಿನಿಂದ ದೂರವಿರಲು ಮುನ್ನೆಚ್ಚರಿಕೆ ಕ್ರಮ ಅತೀ ಮುಖ್ಯವಾಗಿದೆ. ಪರಿಸರ ಸ್ವಚ್ಛವಾಗಿಡಿ ಸುತ್ತಮುತ್ತಲಿನ ಪರಿಸರ ನಮ್ಮ ಆರೋಗ್ಯವನ್ನು ಕೆಡಿಸುತ್ತದೆ. ನಾವು ಇರುವಲ್ಲಿ ನೀರು ನಿಂತಿದ್ದರೆ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುವುದು. ಸೊಳ್ಳೆಗಳಿಂದ ರೋಗಗಳು ಹರಡುತ್ತವೆ. ಪರಿಸರದಲ್ಲಿ ನೀರು ನಿಲ್ಲದಂತೆ ಕಾಳಜಿವಹಿಸ ಬೇಕಾಗುತ್ತದೆ. ಮನೆಯ…
ಬಂಟರ ಯಾನೆ ನಾಡವರ ಸಂಘ ಹಾಗೂ ಬೈಂದೂರು ತಾಲೂಕು ಯುವ ಬಂಟರ ವೇದಿಕೆ ಜಂಟಿ ಆಶ್ರಯದಲ್ಲಿ ಸೂರು ಇಲ್ಲದ ಕುಟುಂಬಕ್ಕೆ 2 ನೇ ಮನೆ ಹಸ್ತಾಂತರ ಕಾರ್ಯಕ್ರಮ ಹೇರೂರಿನಲ್ಲಿ ನಡೆಯಿತು. ಪ್ರಥಮ ದರ್ಜೆ ಗುತ್ತಿಗೆದಾರ ಟಿ. ಎನ್. ರಘುರಾಮ್ ಶೆಟ್ಟಿ ನೂತನ ಮನೆಯನ್ನು ಉದ್ಘಾಟಿಸಿದರು. ನಾಗೂರು ಶ್ರೇಷ್ಠಪಾನಿ ಕ್ಲಿನಿಕ್ ಡಾ. ಪ್ರವೀಣ್ ಶೆಟ್ಟಿ ಅವರು ನಾಮಫಲಕ ಅನಾವರಣಗೊಳಿಸಿದರು. ಬೈಂದೂರು ಬಂಟರ ಯಾನೆ ನಾಡವರ ಸಂಘದ ಉಪಾಧ್ಯಕ್ಷ ಜಿ. ಗೋಕುಲ್ ಶೆಟ್ಟಿ ಉಪ್ಪುಂದ ದೀಪ ಬೆಳಗಿಸಿದರು. ಬಂಟ ಸಮುದಾಯದ ಕಡು ಬಡತನದ ಹೇರೂರಿನ ಜ್ಯೋತಿ ಗಣೇಶ್ ಶೆಟ್ಟಿ ಅವರಿಗೆ ಬೈಂದೂರು ತಾಲೂಕು ಯುವ ಬಂಟರ ವೇದಿಕೆಯ ಗೌರವ ಸಲಹೆಗಾರ ಸಮರ್ ಶೆಟ್ಟಿ ನೂತನ ಮನೆಯ ಕೀ ಹಾಸ್ತಾಂತರಿಸಿದರು. ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಎಚ್. ವಸಂತ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಮಾಜಿ ಅಧ್ಯಕ್ಷ ನಾಕಟ್ಟೆ ಜಗನ್ನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಕುದ್ರುಕೋಡು, ಯುವ ಬಂಟರ…
ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಮತ್ತು ಯಕ್ಷಧ್ರುವ ಪಟ್ಲ ಪೌಂಡೇಶನ್ ಯು.ಎ.ಇ. ಘಟಕ ಜಂಟಿ ಸಂಯೋಜನೆಯ ವಿಶ್ವ ಪಟ್ಲ ಸಂಭ್ರಮ ಮತ್ತು ದುಬಾಯಿ ಯಕ್ಷೋತ್ಸವ 2023 ಅಂಗವಾಗಿ ನಡೆಯಲಿರುವ “ದಶಾವತಾರ” ಯಕ್ಷಗಾನ ಪ್ರಸಂಗದ ಪ್ರವೇಶ ಪತ್ರ -ಅಮಂತ್ರಣಗಳ ಬಿಡುಗಡೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ದಿನಾಂಕ 11-06-2023 ರಂದು ದುಬಾಯಿ ಕರಮದ ಶೇಖ್ ರಶೀದ್ ಅಡಿಟೋರಿಯಂನಲ್ಲಿ(ಇಂಡಿಯನ್ ಸ್ಕೂಲ್ ಕರಮ- ವೂದ್ ಮೆಹತಾ ) ನಡೆಯಲಿರುವ ಬಹು ನಿರೀಕ್ಷಿತ ವಿಶ್ವ ಪಟ್ಲ ಸಂಭ್ರಮ ಮತ್ತು ದುಬಾಯಿ ಯಕ್ಷೋತ್ಸವದ ಅಂಗವಾಗಿ ನಡೆಯಲಿರುವ ಅದ್ದೂರಿಯ ಯಕ್ಷಗಾನ ಕಾರ್ಯಕ್ರಮ ದಶಾವತಾರ ಇದರ ಆಮಂತ್ರಣ ಪತ್ರ ಮತ್ತು ಪ್ರವೇಶ ಪತ್ರದ ಬಿಡುಗಡೆ ಸಮಾರಂಭ ಇತ್ತೀಚೆಗೆ ಹೋಟೇಲ್ ಫಾರ್ಚೂನ್ ಪ್ಲಾಝದ ಬ್ಯಾಂಕ್ವೆಟ್ ಹಾಲ್ ನಲ್ಲಿ, ಪಟ್ಲ ಪೌಂಡೇಶನ್ ದುಬಾಯಿ ಘಟಕದ ಅಧ್ಯಕ್ಷರಾದ ಶ್ರೀಯುತ ಸರ್ವೋತ್ತಮ ಶೆಟ್ಟರ ಸಭಾಧ್ಯಕ್ಷತೆಯಲ್ಲಿ ನಡೆಯಿತು. ಶ್ರೀಯುತರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಕಾರ್ಯಕ್ರಮದಲ್ಲಿ ಪ್ರಮುಖ ಅಭ್ಯಾಗತರಾಗಿ ಭಾಗವಹಿಸಲಿರುವ, ಪಟ್ಲ ಟ್ರಸ್ಟ್ ನ ಗೌರವಾಧ್ಯಕ್ಷರಾದ ಸದಾಶಿವ ಶೆಟ್ಟಿ…














