Author: admin
ವಿದ್ಯಾಗಿರಿ: ವಿಶಾಲ ಬಯಲುರಂಗ ಮಂದಿರದಲ್ಲಿ ಕಂಗೊಳಿಸಿದ ದೇಶದ ಐಕ್ಯತೆಯ ಪ್ರತೀಕವಾದ ‘Alva’s, ಸೇರಿದ್ದ ೩೦ ಸಾವಿರಕ್ಕೂ ಅಧಿಕ ವಿದ್ಯಾರ್ಥಿ, ಸಿಬ್ಬಂದಿ, ಪೋಷಕರು, ಅತಿಥಿಗಳ ಕೈಯಲ್ಲಿ ಹಾರಾಡಿದ ರಾಷ್ಟ್ರ ಧ್ವಜ, ಆವರಣದ ಸುತ್ತಲೂ ತ್ರಿವರ್ಣ ಸ್ಥಂಭಗಳು, ದೇಶಪ್ರೇಮ ಮೂಡಿಸುವ ತ್ರಿವರ್ಣ ಚಿತ್ತಾರಗಳು, ತ್ರಿವರ್ಣದ ಪುರುಲಿಯೋ ಸಿಂಹಗಳು, ಜನ ಗಣ ಮನ, ವಂದೇ ಮಾತರಂ, ಕೋಟಿ ಕಂಠೋ ಸೇ… ರಾಷ್ಟ್ರ ಹಾಗೂ ದೇಶಭಕ್ತಿ ಗೀತೆಗಳು…. ಸಂವಿಧಾನ ಅನುಷ್ಠಾನದ ಭಕ್ತಿ, ಗೌರವ, ಪ್ರೀತಿಯ ದೇಶಭಕ್ತಿಯ ಕ್ಷಣಗಳು ಇಲ್ಲಿನ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ೭೬ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮೂಡಿಬಂತು.ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಕರ್ನಾಟಕ ವಿಧಾನ ಪರಿಷತ್ತಿನ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಮಾತನಾಡಿ, ‘ನಾವೆಲ್ಲರೂ ಸಂವಿಧಾನ ಬದ್ಧವಾಗಿ ಕರ್ತವ್ಯ ಹಾಗೂ ಹಕ್ಕುಗಳನ್ನು ಪಾಲಿಸುವ ಸಂಕಲ್ಪವನ್ನು ಮಾಡುವ ದಿನ ಇದಾಗಿದೆ’ ಎಂದರು. ‘ಆಳ್ವಾಸ್ ಅಂಗಣದಲ್ಲಿ ಗಣರಾಜ್ಯೋತ್ಸವವು ಐತಿಹಾಸಿಕ ವಿರಾಟ ರಾಷ್ಟ್ರೀಯ ಹಬ್ಬವಾಗಿದೆ’ ಎಂದು ಅವರು…
ಉಡುಪಿ ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರಾಂಶುಪಾಲ ರಾಮಕೃಷ್ಣ ಹೆಗಡೆಯವರು ದೇಶದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ರಕ್ಷಿಸಲು ಸಂವಿಧಾನದ ರಚನೆ ಮಾಡಲಾಯಿತು. ಪ್ರತಿಯೊಬ್ಬರಿಗೂ ನ್ಯಾಯ ಸಮ್ಮತ ಬದುಕಿಗಾಗಿ ಸಂವಿಧಾನ ಸ್ವೀಕೃತಗೊಂಡಿದೆ.ಪ್ರಜೆಗಳಾದ ನಾವು ನಮ್ಮ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಸ್ವಯಂಶಿಸ್ತು ಮತ್ತು ಪ್ರೇರಣೆಯಿಂದ ತೊಡಗಿಸಿಕೊಳ್ಳಬೇಕೆಂದು ನುಡಿದರು. ಆಡಳಿತಾಧಿಕಾರಿಗಳಾದ ಜಯಪ್ರಕಾಶ್ ಶೆಟ್ಟಿಯವರು ಗಣರಾಜ್ಯ ದಿನದ ಸಂದೇಶ ನೀಡಿ ಪ್ರತಿಯೊಬ್ಬ ವ್ಯಕ್ತಿಯೂ ಸ್ವಾತಂತ್ರದೊಂದಿಗೆ ಕರ್ತವ್ಯ ಪ್ರಜ್ಞೆ ಮೆರೆಯಬೇಕು. ಹಕ್ಕುಗಳೊಂದಿಗೆ ಕರ್ತವ್ಯದ ಪರಿಪಾಲನೆಯಾದಾಗ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳ್ಳುತ್ತದೆ ವಿದ್ಯಾರ್ಥಿಗಳಾದ ತಾವು ತಮ್ಮ ಮುಂದಿನ ಜೀವನದಲ್ಲಿ ಸಂವಿಧಾನದ ಆಶಯದೊಂದಿಗೆ ಬದುಕನ್ನು ನಡೆಸುವಂತೆ ಕರೆ ನೀಡಿದರು. ಗಣರಾಜ್ಯ ದಿನದ ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಮನೋಜ್ ಜೋಯಲ್ ಫೆರ್ನಾಂಡಿಸ್, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದ, ವಸತಿ ನಿಲಯ ಪಾಲಕರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಆದರ್ಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
76 ನೇ ಗಣರಾಜ್ಯೋತ್ಸವವನ್ನು ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸಹ ಸಂಸ್ಥಾಪಕರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಸಂವಿಧಾನವು ಈ ದೇಶದ ಎಲ್ಲ ಜನರಿಗೆ ಸಾಮಾಜಿಕ,ಶೈಕ್ಷಣಿಕ,ಮತ್ತು ಸಮಾನತೆಯ ಹಕ್ಕನ್ನು ನೀಡಿ ಸುಭದ್ರ ಜೀವನ ನಡೆಸುವಲ್ಲಿ ಸಹಕಾರಿಯಾಗಿದೆ.ದೇಶ ಸ್ವಾತಂತ್ರ್ಯಗೊಳ್ಳುವಲ್ಲಿ ಅನೇಕ ಭಾರತೀಯರ ತ್ಯಾಗ ಬಲಿದಾನವಿದೆ ಇವರ ಹೋರಾಟದ ಫಲವೇ ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವಿಸುವಂತೆ ಮಾಡಿದೆ. ದೇಶ ನನಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾನು ಏನು ಕೊಟ್ಟಿದೆ ಎನ್ನುವುದು ನಾವೆಲ್ಲರೂ ಆತ್ಮಾವಲೋಕನವನ್ನು ಮಾಡಿಕೊಳ್ಳಬೇಕು. ಸಂವಿಧಾನವನ್ನು ರಚಿಸುವಲ್ಲಿ ಶ್ರಮಿಸಿದ ಮಹನೀಯರನ್ನು ನಾವೆಲ್ಲರೂ ಗೌರವಿಸಬೇಕು.” ಎಂದು ವಿದ್ಯಾರ್ಥಿಗಳನ್ನು ಕುರಿತು ಶುಭನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು , ವಿದ್ಯಾರ್ಥಿಗಳು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೂಡುಬಿದಿರೆ: ಶಿಕ್ಷಣದ ಸ್ವರ್ಗವಾಗಿರುವ ಮೂಡುಬಿದಿರೆ, ಉತ್ಕೃಷ್ಟ ಮಟ್ಟದ ಸ್ಕೌಟ್ಸ್ ಗೈಡ್ಸ್ ಚಟುವಟಿಕೆಗಳ ಕಾಶಿಯಾಗುತ್ತಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ನುಡಿದರು. ಅವರು ಶನಿವಾರ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಬಾಗಿತ್ವದಲ್ಲಿ ಜರುಗಿದ ಮೂರು ದಿನಗಳ ‘ಜಿಲ್ಲಾ ಮಟ್ಟದ ಕ್ಯಾಂಪೋರಿ’ ಕಾರ್ಯಕ್ರಮದ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್ ಮತ್ತು ಗೈಡ್ಸ್ ಮೇಳ, ರೋವರ್ಸ್ ಮತ್ತು ರೇಂಜರ್ಸ್ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸಾವಿರಾರು ಜನರಿಗೆ ಬದುಕಿನ ಶಿಕ್ಷಣ ನೀಡುತ್ತಿರುವ ಡಾ ಎಮ್ ಮೋಹನ್ ಆಳ್ವರನ್ನು ವಿದ್ಯಾರ್ಥಿಗಳು ರೋಲ್ ಮಾಡೆಲ್ ಆಗಿ ಪರಿಗಣಿಸಬೇಕು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಾನವ ನಿರ್ಮಾಣದ ಸಂಸ್ಥೆ. ಇಂತಹ ಶಿಬಿರದಲ್ಲಿ ಕಲಿತ ಜೀವನ ಶಿಕ್ಷಣ ಮುಂದಿನ ಸುಂದರ ಬದುಕಿಗೆ ಅಡಿಪಾಯವಾಗಬಲ್ಲದು. ಶಿಸ್ತು, ಸಮಯಪಾಲನೆ ಇಲ್ಲಿ ಕಲಿಯುವಂತಾಗಬೇಕು ಎಂದರು. ಇನ್ನು ವಿದ್ಯಾರ್ಥಿಗಳು ಶಾಸ್ತ್ರೀಯ…
ಕಾರ್ಕಳ : ಧರ್ಮವನ್ನು ಮೀರಿದ ರಾಷ್ಟ್ರೀಯ ಹಬ್ಬಗಳಲ್ಲಿ ಗಣರಾಜ್ಯೋತ್ಸವವು ಒಂದು. ನಮ್ಮ ಜವಾಬ್ದಾರಿಯನ್ನು ನೆನಪಿಕೊಂಡು ಪ್ರಜಾಪ್ರಭುತ್ವದ ಘನತೆ-ಗೌರವವನ್ನು ಎತ್ತಿಹಿಡಿಯುವತ್ತ ವಿದ್ಯಾರ್ಥಿಗಳು ಚಿತ್ತಹರಿಸಬೇಕು. ಭವ್ಯ ಭಾರತವನ್ನು ಕಟ್ಟುವಲ್ಲಿ ಪ್ರಾಮಾಣಿಕವಾಗಿ ದುಡಿದು ದೇಶ ಸೇವೆಯ ಧನ್ಯತೆಯನ್ನು ಪಡೆಯಬೇಕು ಎಂದು ಸೌತ್ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ನ ಅಧ್ಯಕ್ಷರಾದ ಶ್ರೀ ಪದ್ಮಪ್ರಸಾದ್ ಜೈನ್ ನೆಲ್ಲಿಕಾರು ಹೇಳಿದರು.ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಇದೇ ಸಂದರ್ಭ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪ್ರಾಂಶುಪಾಲ ಶ್ರೀ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ಶ್ರೀಮತಿ ವಾಣಿ.ಕೆ., ಪಿ.ಆರ್.ಒ ಶ್ರೀಮತಿ ಜ್ಯೋತಿ ಪದ್ಮನಾಭ್ ಭಂಡಿ, ಪತ್ರಕರ್ತ ಶ್ರೀ ರಾಮಚಂದ್ರ ಬರೆಪ್ಪಾಡಿ, ಓಸಿಯನಿಕ್ ಇನ್ಫ್ರಾದ ಮಾಲಿಕ ಶ್ರೀ ಸಂತೋಷ್ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸ ಶ್ರೀ ಸಂತೋಷ್ ನೆಲ್ಲಿಕಾರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಹಾಗೂ ಜಿ ಎಮ್ ಗ್ಲೋಬಲ್ ಸ್ಕೂಲ್ ಜೊತೆಯಾಗಿ 76ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದವು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾರತೀಯ ಸೇನೆಯ ನಿವೃತ್ತ ಸುಬೇದಾರ್ ಉಮೇಶ್ ನಾಯಕ್ರವರು ಆಗಮಿಸಿದ್ದರು. ಅವರು ಮಾತನಾಡಿ ಇಂದಿನ ಮಕ್ಕಳು ಮುಂದಿನ ನಾಯಕರು. ಅವರು ಒಂದು ನಿರ್ದಿಷ್ಟ ಗುರಿಯೊಂದಿಗೆ ಮುಂದೆ ಸಾಗಬೇಕು. ಪೋಷಕರು ತಮ್ಮ ಮಕ್ಕಳನ್ನು ಸೇನೆಗೆ ಕಳುಹಿಸಲು ಹಿಂಜರಿಯಬಾರದು. ಇಂದು ಭಾರತದಾದ್ಯಂತ ಸಂಭ್ರಮಿಸುವ, ಶೌರ್ಯವನ್ನು ಪ್ರದರ್ಶಿಸುವ ದಿನವೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ನಮ್ಮ ದೇಶದಲ್ಲಿ ವಿವಿಧ ಧರ್ಮ, ಜಾತಿ, ಪಂಗಡಗಳಿದ್ದರೂ ನಾವೆಲ್ಲರೂ ಒಂದೇ ಗಡಿಯಲ್ಲಿ ದೇಶವನ್ನು ಕಾಯುವ ಎಲ್ಲಾ ಸೈನಿಕರಿಗೆ ಗೌರವವನ್ನು ಕೊಟ್ಟು ಸ್ಮರಿಸಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಶುಭ ಹಾರೈಸಿದರು. ನಂತರ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ಹಾಗೂ ಜಿ ಎಮ್ ಗ್ಲೋಬಲ್ ಸ್ಕೂಲ್ನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿ ಎಮ್ ಗ್ಲೋಬಲ್…
ಯುಎಇ ಬಂಟ್ಸ್ ಪ್ರೀಮಿಯರ್ ಲೀಗ್ ಸೀಸನ್- 4 ಹಾಗೂ ದಿ. ದಿವೇಶ್ ಆಳ್ವ ಸ್ಮರಣಾರ್ಥಕ ಕ್ರಿಕೆಟ್ ಪಂದ್ಯಾಟಕ್ಕೆ ಕ್ಷಣಗಣನೆ
ಯುಎಇ ಬಂಟ್ಸ್ ಪ್ರೀಮಿಯರ್ ಲೀಗ್ ಸೀಸನ್ – 4 ಹಾಗೂ ದಿ. ದಿವೇಶ್ ಆಳ್ವ ಸ್ವರಣಾರ್ಥ ಕ್ರಿಕೆಟ್ ಪಂದ್ಯಾಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲಾ ತಂಡಗಳು ತಮ್ಮ ತಮ್ಮ ಗೆಲುವಿಗಾಗಿ ರಾತ್ರಿ ಹಗಲು ತಾಲೀಮು ನಡೆಸುತ್ತಿದೆ. ಜನವರಿ 26 ರಂದು ಶಾರ್ಜಾದ ಡಿಸಿಎಸ್ ಸೆಲೆಕ್ಟೆರೇನ ರಾಹ್ಮನಿಯಾದ ಮೈದಾನದಲ್ಲಿ ಬೆಳಿಗ್ಗೆ ಏಳರಿಂದ ಸಾಯಂಕಾಲದವರೆಗೆ ಪಂದ್ಯಾಟವು ನಡೆಯಲಿದ್ದು ಕ್ರಿಕೆಟ್ ಪಂದ್ಯಾಟದ ಸಂಘಟನಾ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ದುಡಿಯುತ್ತಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಪಂದ್ಯಾಟ ಆರಂಭವಾಗಲಿದ್ದು ಬೆಳಿಗ್ಗೆ 9 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ಕರಾವಳಿಯ ಬಂಟ ಕುವರ ಗುರುಕಿರಣ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ಯುಎಇ ಬಂಟ್ಸ್ ಅಧ್ಯಕ್ಷರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ಯುಎಇ ಬಂಟ್ಸ್ ನ ಪೋಷಕರಾದ ಡಾ. ಬಿ.ಆರ್ ಶೆಟ್ಟಿ, ಯುಎಇ ಬಂಟ್ಸ್ ಮಹಾ ಪೋಷಕರಾದ ಸರ್ವೋತ್ತಮ ಶೆಟ್ಟಿ ಹಾಗೂ ಯುಎಇ ಬಂಟ್ಸ್ ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿರುವರು.ಗುಣಶೀಲ್ ಶೆಟ್ಟಿಯವರ ಎಸಿಇ ಅವೇಂಜರ್ಸ್, ರವಿ…
ಕುಂದಾಪುರ ತಾಲೂಕು ಯುವ ಬಂಟರ ಸಂಘದ ಪೋಷಕರು, ಗೋವಾ ಬಂಟರ ಸಂಘದ ರಜತ ಸಂಭ್ರಮದ ಅಧ್ಯಕ್ಷರಾದ ಕಾವಡಿ ಸದಾಶಿವ ಶೆಟ್ಟಿ ದಂಪತಿಯವರನ್ನು ಕುಂದಾಪುರ ಯುವ ಬಂಟರ ಸಂಘದ ಪರವಾಗಿ ಸಂಘದ ಮಹಾ ನಿರ್ದೇಶಕರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಮೈಸೂರಿನ ಜ್ಞಾನ ಸರೋವರ ರೆಸಿಡೆನ್ಸಿಯಲ್ ಸ್ಕೂಲ್ ನ ಆಡಳಿತ ನಿರ್ದೇಶಕರಾದ ಸುಧಾಕರ ಶೆಟ್ಟಿ, ಡಾ| ಗಣನಾಥ ಶೆಟ್ಟಿ ಎಕ್ಕಾರು, ಉಳ್ತೂರು ಮೋಹನದಾಸ್ ಶೆಟ್ಟಿ, ಯುವ ಬಂಟರ ಸಂಘದ ಪೋಷಕರಾದ ಗಿಳಿಯಾರು ಬಡಾಮನೆ ರತ್ನಾಕರ ಜಿ ಶೆಟ್ಟಿ, ಚಲನಚಿತ್ರ ನಟರಾದ ದಯಾನಂದ ಶೆಟ್ಟಿ, ಹರೀಶ್ ವಾಸು ಶೆಟ್ಟಿ, ಯುವ ಬಂಟರ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ, ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು, ಉಪಾಧ್ಯಕ್ಷರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಮಾಜಿ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಕೊಡ್ಲಾಡಿ, ಕಂದಾವರ ರತ್ನಾಕರ ಶೆಟ್ಟಿ, ಹರ್ಷ ಶೆಟ್ಟಿ, ಕಾವಡಿ, ಪ್ರವೀಣ್ ಶೆಟ್ಟಿ ಕಾವಡಿ, ಪ್ರಕಾಶ್ ಶೆಟ್ಟಿ ಆನಗಳ್ಳಿ, ಶರತ್…
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಅತ್ಯದ್ಭುತವೆಂಬಂತೆ ಬಾಗಲಕೋಟೆಯ ಇಳಕಲ್ ಶಿಲೆಯಲ್ಲಿ ನವ ನಿರ್ಮಾಣಗೊಳ್ಳುತ್ತಿದ್ದು ದೇಶ ವಿದೇಶಗಳಲ್ಲಿ ನೆಲೆಸಿರುವ ಭಕ್ತರ ಕೂಡುವಿಕೆಯಿಂದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅತ್ಯಂತ ವಿಜೃಂಭಣೆಯಿಂದ ಜರಗಲಿದೆ. ಫೆಬ್ರವರಿ 25 ರಿಂದ ಮೊದಲ್ಗೊಂಡು ಮಾರ್ಚ್ 5 ರವರೆಗೆ ನವ ದಿನಗಳ ಪರ್ಯಂತ ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ನವದುರ್ಗಾ ಲೇಖನ ಮತ್ತು ನವ ಚಂಡೀಯಾಗದ ಕುರಿತು ಮಾಹಿತಿ ನೀಡಲು ಮತ್ತು ಸ್ವರ್ಣ ಗದ್ದುಗೆ ಸಮರ್ಪಣೆ, ರಜತ ರಥ ಸಮರ್ಪಣೆ, ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಸ್ವರ್ಣ ಮುಖ ಹಾಗೂ ಹಸಿರು ಹೊರೆ ಕಾಣಿಕೆ ಮತ್ತು ಪ್ರತಿಷ್ಠಾದಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಲು 18 ದೇಶಗಳ ವಿಶೇಷ ಸಭೆಯನ್ನು ಜೂಮ್ ಮೀಟಿಂಗ್ ನಲ್ಲಿ ಆಯೋಜಿಸಲಾಗಿತ್ತು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಂತರಾಷ್ಟ್ರೀಯ ಸೇವಾ ಸಮಿತಿಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಅಬುದಾಬಿ, ಕಾರ್ಯಾಧ್ಯಕ್ಷ ಶಶಿಧರ್ ಶೆಟ್ಟಿ…
ತುಳನಾಡ ಬಂಟ ಕುವರ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಟೈಟಲ್ ಹಾಗೂ ಸ್ಯಾಂಪಲ್ಸ್ ಮೂಲಕ ಈಗಾಗಲೇ ನಿರೀಕ್ಷೆ ಹೆಚ್ಚಿಸಿದೆ. ಕರಾವಳಿಯ ಸಂಸ್ಕೃತಿಯಾದ ಹುಲಿ ಕುಣಿತ, ಯಕ್ಷಗಾನ, ದೈವರಾಧನೆ ಹಾಗೂ ಆಟಿ ಕಳಂಜ ಸೇರಿದಂತೆ ಹಲವು ವಿಚಾರಗಳುಳ್ಳ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಲ್ಲಿ ರೂಪೇಶ್ ಖಾಕಿ ತೊಟ್ಟು ಖದರ್ ತೋರಿಸಿದ್ದಾರೆ. ಫೆಬ್ರವರಿ 7ರಂದು ಚಿತ್ರ ತೆರೆಗೆ ಬರ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಂಡಿತ್ತು. ಈ ವೇಳೆ ಇಡೀ ಚಿತ್ರತಂಡ ಹಾಜರಾಗಿತ್ತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಚಯನ್ ಶೆಟ್ಟಿ, ಅಧಿಪತ್ರ ಸಿನಿಮಾ ಫೆಬ್ರವರಿ 7ರಂದು ತೆರೆಗೆ ಬರ್ತಿದೆ. ಈ ಸಿನಿಮಾ ಒಂದೊಳ್ಳೆ ಕಂಟೆಂಟ್ ಆಗಲಿದೆ ಎಂಬ ನಂಬಿಕೆ ಇದೆ. ಈ ಒಳ್ಳೆ ಕಂಟೆಂಟ್ ಆಗಲು ನಮ್ಮ ಟೆಕ್ನಿಷಿಯಲ್ ಟೀಂ, ನಿರ್ಮಾಪಕರು, ಇಡೀ ತಾರಾಬಳಗದ ಬೆಂಬಲ ತುಂಬಾನೇ ಇದೆ. ಇದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಇದರ ಜೊತೆಗೆ ಕರಾವಳಿ ಭಾಗದ ಆಟಿ ಕಳಂಜ ಸಂಸ್ಕೃತಿಯನ್ನು ಅಧಿಪತ್ರ ಸಿನಿಮಾದಲ್ಲಿ ಕಟ್ಟಿಕೊಡಲಾಗಿದೆ.…