Author: admin
ಬಂಟರ ಯಾನೆ ನಾಡವರ ಸಂಘ ಹಾಗೂ ಬೈಂದೂರು ತಾಲೂಕು ಯುವ ಬಂಟರ ವೇದಿಕೆ ಜಂಟಿ ಆಶ್ರಯದಲ್ಲಿ ಸೂರು ಇಲ್ಲದ ಕುಟುಂಬಕ್ಕೆ 2 ನೇ ಮನೆ ಹಸ್ತಾಂತರ ಕಾರ್ಯಕ್ರಮ ಹೇರೂರಿನಲ್ಲಿ ನಡೆಯಿತು. ಪ್ರಥಮ ದರ್ಜೆ ಗುತ್ತಿಗೆದಾರ ಟಿ. ಎನ್. ರಘುರಾಮ್ ಶೆಟ್ಟಿ ನೂತನ ಮನೆಯನ್ನು ಉದ್ಘಾಟಿಸಿದರು. ನಾಗೂರು ಶ್ರೇಷ್ಠಪಾನಿ ಕ್ಲಿನಿಕ್ ಡಾ. ಪ್ರವೀಣ್ ಶೆಟ್ಟಿ ಅವರು ನಾಮಫಲಕ ಅನಾವರಣಗೊಳಿಸಿದರು. ಬೈಂದೂರು ಬಂಟರ ಯಾನೆ ನಾಡವರ ಸಂಘದ ಉಪಾಧ್ಯಕ್ಷ ಜಿ. ಗೋಕುಲ್ ಶೆಟ್ಟಿ ಉಪ್ಪುಂದ ದೀಪ ಬೆಳಗಿಸಿದರು. ಬಂಟ ಸಮುದಾಯದ ಕಡು ಬಡತನದ ಹೇರೂರಿನ ಜ್ಯೋತಿ ಗಣೇಶ್ ಶೆಟ್ಟಿ ಅವರಿಗೆ ಬೈಂದೂರು ತಾಲೂಕು ಯುವ ಬಂಟರ ವೇದಿಕೆಯ ಗೌರವ ಸಲಹೆಗಾರ ಸಮರ್ ಶೆಟ್ಟಿ ನೂತನ ಮನೆಯ ಕೀ ಹಾಸ್ತಾಂತರಿಸಿದರು. ಬೈಂದೂರು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಎಚ್. ವಸಂತ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಮಾಜಿ ಅಧ್ಯಕ್ಷ ನಾಕಟ್ಟೆ ಜಗನ್ನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಕುದ್ರುಕೋಡು, ಯುವ ಬಂಟರ…
ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಮತ್ತು ಯಕ್ಷಧ್ರುವ ಪಟ್ಲ ಪೌಂಡೇಶನ್ ಯು.ಎ.ಇ. ಘಟಕ ಜಂಟಿ ಸಂಯೋಜನೆಯ ವಿಶ್ವ ಪಟ್ಲ ಸಂಭ್ರಮ ಮತ್ತು ದುಬಾಯಿ ಯಕ್ಷೋತ್ಸವ 2023 ಅಂಗವಾಗಿ ನಡೆಯಲಿರುವ “ದಶಾವತಾರ” ಯಕ್ಷಗಾನ ಪ್ರಸಂಗದ ಪ್ರವೇಶ ಪತ್ರ -ಅಮಂತ್ರಣಗಳ ಬಿಡುಗಡೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ದಿನಾಂಕ 11-06-2023 ರಂದು ದುಬಾಯಿ ಕರಮದ ಶೇಖ್ ರಶೀದ್ ಅಡಿಟೋರಿಯಂನಲ್ಲಿ(ಇಂಡಿಯನ್ ಸ್ಕೂಲ್ ಕರಮ- ವೂದ್ ಮೆಹತಾ ) ನಡೆಯಲಿರುವ ಬಹು ನಿರೀಕ್ಷಿತ ವಿಶ್ವ ಪಟ್ಲ ಸಂಭ್ರಮ ಮತ್ತು ದುಬಾಯಿ ಯಕ್ಷೋತ್ಸವದ ಅಂಗವಾಗಿ ನಡೆಯಲಿರುವ ಅದ್ದೂರಿಯ ಯಕ್ಷಗಾನ ಕಾರ್ಯಕ್ರಮ ದಶಾವತಾರ ಇದರ ಆಮಂತ್ರಣ ಪತ್ರ ಮತ್ತು ಪ್ರವೇಶ ಪತ್ರದ ಬಿಡುಗಡೆ ಸಮಾರಂಭ ಇತ್ತೀಚೆಗೆ ಹೋಟೇಲ್ ಫಾರ್ಚೂನ್ ಪ್ಲಾಝದ ಬ್ಯಾಂಕ್ವೆಟ್ ಹಾಲ್ ನಲ್ಲಿ, ಪಟ್ಲ ಪೌಂಡೇಶನ್ ದುಬಾಯಿ ಘಟಕದ ಅಧ್ಯಕ್ಷರಾದ ಶ್ರೀಯುತ ಸರ್ವೋತ್ತಮ ಶೆಟ್ಟರ ಸಭಾಧ್ಯಕ್ಷತೆಯಲ್ಲಿ ನಡೆಯಿತು. ಶ್ರೀಯುತರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಕಾರ್ಯಕ್ರಮದಲ್ಲಿ ಪ್ರಮುಖ ಅಭ್ಯಾಗತರಾಗಿ ಭಾಗವಹಿಸಲಿರುವ, ಪಟ್ಲ ಟ್ರಸ್ಟ್ ನ ಗೌರವಾಧ್ಯಕ್ಷರಾದ ಸದಾಶಿವ ಶೆಟ್ಟಿ…
ಯಕ್ಷಗಾನ ಕಲೆಯನ್ನು ವೃತ್ತಿಯಾಗಿ ಅಥವಾ ಹವ್ಯಾಸವಾಗಿ ಬೆಳೆಸಿಕೊಂಡವರು ಹಲವರಿದ್ದಾರೆ. ಆದ್ಯಾತ್ಮ ಆದರೆ ಅವೆರಡನ್ನೂ ಬಿಟ್ಟು ಅಧ್ಯಾತ್ಮದ ಹಾದಿ ತುಳಿದವರು ವಿರಳ. ಅಂತಹ ವಿರಳಾತಿ ವಿರಳದಲ್ಲಿ ಸೊರ್ನಾಡು ವಿಶ್ವನಾಥ ಶೆಟ್ಟಿಯವರು ಪ್ರಮುಖರು. ಬಂಟ್ವಾಳ ತಾಲೂಕಿನ ಸುವರ್ಣನಾಡು ಶ್ರೀ ದುರ್ಗಾಂಬಿಕಾ ಸಿದ್ಧೇಶ್ವರಿ ದೇವಸ್ಥಾನದ ಸ್ಥಾಪಕರಾಗಿ ವೈರಾಗ್ಯದ ಹಾದಿ ತುಳಿದ ಅವರು ವಿಶ್ವನಾಥ ಸ್ವಾಮಿಯಾಗಿ ಪ್ರಸಿದ್ದರಾಗಿದ್ದರು. ಕುಪ್ಪೆಪದವು ಸಮೀಪದ ಕೊಂಜಿಬೆಟ್ಟು ಗುತ್ತುಮನೆ ಬಿರ್ಮಣ್ಣ ಶೆಟ್ಟಿ ಮತ್ತು ಚೆನ್ನಮ್ಮ ದಂಪತಿಯ ಐದು ಮಕ್ಕಳಲ್ಲಿ ಒಬ್ಬರಾಗಿರುವ ವಿಶ್ವನಾಥ ಶೆಟ್ಟಿ ಅರಳ ಶಾಲೆಯಲ್ಲಿ ಒಂಭತ್ತನೇ ತರಗತಿ ವರೆಗೆ ವ್ಯಾಸಂಗ ಮಾಡಿದ್ದರು. ಅವರ ಹಿರಿಯಣ್ಣ ಮೂಲ್ಕಿಯ ಹೆಸರಾಂತ ವೈದ್ಯ ಮತ್ತು ಸಮಾಜ ಸೇವಕ ದಿ. ಡಾ. ಎಂ. ಬಾಬು ಶೆಟ್ಟಿ. ಅವರು ಲಯನ್ಸ್ ಜಿಲ್ಲಾ ಗವರ್ನರ್ ಆಗಿ ಸೇವೆ ಸಲ್ಲಿಸಿದವರು. ಎಳವೆಯಲ್ಲೇ ಅಧ್ಯಾತ್ಮದತ್ತ ಹೆಚ್ಚು ಒಲವಿದ್ದ ವಿಶ್ವನಾಥ ಶೆಟ್ಟರು ಯಕ್ಷಗಾನವನ್ನು ಹವ್ಯಾಸವಾಗಿ ಸ್ವೀಕರಿಸಿದ್ದರು. ಆರಂಭದಲ್ಲಿ ಎಂಕು ಭಾಗವತರಿಂದ ಚೆಂಡೆ ಮದ್ದಳ ಅಭ್ಯಸಿಸಿದ ಅವರು ಮೂಡಬಿದ್ರೆ ವಾಸು ಅವರಿಂದ ಯಕ್ಷಗಾನದ ಕುಣಿತ ಹಾಗೂ…
ಕಟೀಲು ಸಮೂಹ ಶಿಕ್ಷಣ ಸಂಸ್ಥೆಗಳ ನುಡಿಹಬ್ಬ ಭ್ರಮರ-ಇಂಚರ ಸಮಾರೋಪ ಡಾ| ಸುರೇಶ್ ರಾವ್ಗೆ `ಕಟೀಲು-ಸಾಧಕ ಹಿರಿಯ ವಿದ್ಯಾರ್ಥಿ ಪ್ರಶಸ್ತಿ’ ಪ್ರದಾನ
ಮುಂಬಯಿ (ಆರ್‌ಬಿಐ), ಡಿ.07: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯೋಜನೆಯಲ್ಲಿ ಕಳೆದ (ಡಿ.02-04) ಆಯೋಜಿಸಲಾದ ಭ್ರಮರ-ಇಂಚರ ನಾಮದ ನುಡಿಹಬ್ಬ ಸಮಾರೋಪ ಸಮಾರಂಭ ಕಳೆದ ಭಾನುವಾರ ಸಂಜೆ ಕಟೀಲು ಪದವೀಪೂರ್ವ ಕಾಲೇಜ್‍ನ ಶ್ರೀವಿದ್ಯಾ ಸಭಾಭವನದಲ್ಲಿ ಜರುಗಿತು. ಡಾ| ಪಾದೆಕಲ್ಲು ವಿಷ್ಣು ಭಟ್ಟ ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ಜರುಗಿದ ಸಮಾರಂಭದಲ್ಲಿ ಸಂಜೀವನಿ ಟ್ರಸ್ಟ್ ಮುಂಬಯಿ ಇದರ ಕಾರ್ಯಾಧ್ಯಕ್ಷ ಡಾ| ಸುರೇಶ್ ಎಸ್.ರಾವ್ ಕಟೀಲು ಇವರಿಗೆ `ಕಟೀಲು ವಿದ್ಯಾಲಯದ ಹೆಮ್ಮೆಯ ಸಾಧಕ ಹಿರಿಯ ವಿದ್ಯಾರ್ಥಿ ಪ್ರಶಸ್ತಿ’ ಪ್ರದಾನಿಸಿ ಗೌರವಿಸಲಾಯಿತು. ಸುರೇಶ್ ರಾವ್ ಅವರ ಜನನಿದಾತೆ ಕಾತ್ಯಾಯಿನಿ ಸಂಜೀವ ರಾವ್ ಅವರೊಂದಿಗೆ ಗೌರವಿಸಲಾಗಿದ್ದು ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತ್‍ನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ದ.ಕ ಜಿಲ್ಲಾ ಮಾಜಿ ಅಧ್ಯಕ್ಷ ಪ್ರದೀಪ್‍ಕುಮಾರ್ ಕಲ್ಕೂರ, ಉದ್ಯಮಿಗಳಾದ ಬಜಪೆ ರಾಘವೇಂದ್ರ ಆಚಾರ್ಯ, ಗಿರಿಧರ ಶೆಟ್ಟಿ ಮಂಗಳೂರು, ನಮ್ಮ ಕುಡ್ಲ ಮುಖ್ಯಸ್ಥ ಲೀಲಾಕ್ಷ ಕರ್ಕೇರ, ಯುಗ ಪುರುಷ ಕಿನ್ನಿಗೋಳಿ ಇದರ ಮುಖ್ಯಸ್ಥ ಕೊಡೆತ್ತೂರುಗುತ್ತುಭುವನಾಭಿರಾಮ ಉಡುಪ, ಶ್ರೀ…
ಮುಂಬಯಿ (ಆರ್‌ಬಿಐ), ಡಿ.06: ಅಮೇರಿಕಾದ ಯುಎಸ್‍ಎ ಟೆನ್ನೆಸ್ಸೀ ಇಲ್ಲಿನ ನ್ಯಾಶ್‍ವಿಲ್ಲೆ ಇಲ್ಲಿ 2023ರ ಜುಲಾಯಿ 25-28ರ ತನಕ ಜರುಗುವ ಮಿಲಿಯನ್ ಡಾಲರ್ ರೌಂಡ್ ಟೇಬಲ್ (ಎಂಆರ್‌ಡಿಟಿ ) ಶೃಂಗಸಭೆಯ ಸಭಾಪತಿ (ಕನೆಕ್ಸಿಯಾನ್ ವಲಯದ ಭಾಷಣಕಾರ) ಆಗಿ ಮಿಲಿಯನ್ ಡಾಲರ್ ರೌಂಡ್ ಟೇಬಲ್ (ಎಂಆರ್‌ಡಿಟಿ ) ಸ್ಪೀಕರ್ ಆಗಿ ಬೃಹನ್ಮುಂಬಯಿಯಲ್ಲಿನ ಪ್ರತಿಷ್ಠಿತ ಆರ್ಥಿಕ ಮೇಧಾವಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಆರ್.ಕೆ ಶೆಟ್ಟಿ (ರಾಧಾಕೃಷ್ಣ ಕೃಷ್ಣ ಶೆಟ್ಟಿ) ನೇಮಕ ಗೊಂಡಿದ್ದಾರೆ. ಭಾರತೀಯ ಜೀವ ವಿಮಾ ನಿಗಮ (ಎಲ್‍ಐಸಿ ಆಫ್ ಇಂಡಿಯಾ) ಇದರ ಸರ್ವೋತ್ಕೃಷ್ಟ ಅಧಿಕಾರಿ ಆಗಿದ್ದು ಇತ್ತೀಚೆಗಷ್ಟೇ ಎಂಆರ್‌ಡಿಟಿ) ಇದರ ಕ್ವಾರ್ಟರ್ ಸೆಂಚುರಿ ಕ್ಲಬ್ ಸದಸ್ಯರಾಗಿ ಆಯ್ಕೆ ಆಗಿರುವ ಡಾ| ಆರ್.ಕೆ ಶೆಟ್ಟಿ ಇತ್ತೀಚೆಗಷ್ಟೇ ಜರುಗಿದ ಮಂಗಳೂರು ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣಾ ಮಂಗಳೂರು ವಿವಿ ಗೌರವಕ್ಕೂ ಪಾತ್ರರಾಗಿದ್ದರು. ಮುಂಬಯಿಯಲ್ಲಿನ ಇಸ್ಸಾರ್ ಫೈನಾನ್ಶಿಯಲ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಆರ್ ಕೆ ಶೆಟ್ಟಿ ಎಂಡ್ ಕಂಪೆನಿ ಇದರ ಆಡಳಿತ ನಿರ್ದೇಶಕರಾಗಿರುವ ಆರ್‍ಕೆಎಸ್ ಸದ್ಯ…
ರಂಗಚಾವಡಿ ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆಯ ವರ್ಷದ ಹಬ್ಬ-ರಂಗಚಾವಡಿ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಹಿರಿಯ ರಂಗಕರ್ಮಿ, ಚಲನ ಚಿತ್ರ ನಿರ್ಮಾಪಕ, ಡಾ ಸಂಜೀವ ದಂಡೆಕೇರಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ರಂಗ ಚಾವಡಿ ಸಂಘಟನೆ ಕಳೆದ 23 ವರ್ಷಗಳಿಂದ ನಿರಂತರವಾಗಿ ಕಲೆ ಸಾಹಿತ್ಯ, ಸಾಂಸ್ಕೃತಿಕ ರಂಗಕ್ಕೆ ಸೇವೆ ಸಲ್ಲಿಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಅದೆಷ್ಟೋ ಹಿರಿಯ, ಕಿರಿಯ ಕಲಾವಿದರಿಗೆ ಸಂಘಟನೆ ಆಸರೆಯಾಗಿ ಬೆಳೆಸಿದೆ. ಸಂಘಟನೆಯು ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ನೇತೃತ್ವದಲ್ಲಿ ಯಶಸ್ವಿಯಾಗಿ ಮುನ್ನಡೆಯಲಿ” ಎಂದು ಅವರು ಶುಭ ಹಾರೈಸಿದರು. ವೇದಿಕೆಯಲ್ಲಿ ಹಿರಿಯ ಸಾಹಿತಿ, ಜಾನಪದ ಸಂಶೋಧಕ ಮುದ್ದು ಮೂಡುಬೆಳ್ಳೆ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಮುದ್ದು ಮೂಡುಬೆಳ್ಳೆ ಅವರು, “ಎಲ್ಲ ಪ್ರಯತ್ನಗಳೂ ಯಶಸ್ಸು ತಂದುಕೊಡುತ್ತದೆ ಎಂದು ಹೇಳಲಾಗುವುದಿಲ್ಲ. ಆದರೆ ಪ್ರಯತ್ನದ ಬೆನ್ನಿಗೆ ಮತ್ತೊಂದು ಪ್ರಯತ್ನ ನಿರಂತರವಾಗಿ ನಡೆಸುತ್ತಲೇ ಇರಬೇಕು. ಅದು ಮುಂದೊಂದು ದಿನ ನಮಗೆ…
ಮಂಗಳೂರು: ಅಂತಾರಾಷ್ಟ್ರೀಯ ಯೂತ್ ಯೋಗಿಕ್ ಸೈನ್ಸ್ ಫೆಡರೇಷನ್ ಮತ್ತು ವರ್ಷಿಣಿ ಯೋಗ ಎಜುಕೇಷನ್ ಸಂಸ್ಥೆಗಳು, ಗವರ್ನಮೆಂಟ್ ಆಫ್ ಆಯುಷ್ ಆ್ಯಂಡ್ ಯೂತ್ ಸ್ಪೋರ್ಟ್ಸ್ ಸರ್ವಿಸಸ್ ಸಹ ಭಾಗಿತ್ವದೊಂದಿಗೆ ಆಯೋಜಿಸಿದ ರಾಷ್ಟ್ರೀಯ ಮಟ್ಟದ ಎಂಟನೇ ಯೋಗಾಸನ ಸ್ಪರ್ಧೆ 2022ರಲ್ಲಿ ದಿನಾಂಕ 15/04/2022 ರಂದು ಗೋವಾದಲ್ಲಿ ಜರುಗಿದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ 8 ರಿಂದ 10 ವರ್ಷದೊಳಗಿನ ವಯೋಮಾನ ವಿಭಾಗದಲ್ಲಿ ಭಾಗವಹಿಸಿದ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿಯ 5ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶಿವಾನಿ ಶೆಟ್ಟಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಈಕೆ ಬೇಳಂಜೆ ಶಿವಾನಂದ ಶೆಟ್ಟಿ ಹಾಗೂ ಹೆಬ್ರಿ ಶ್ರೀಮತಿ ಸುಜಾತ ಶೆಟ್ಟಿ ದಂಪತಿಗಳ ಸುಪುತ್ರಿಯಾಗಿದ್ದು, ಯೋಗ ಗುರು ಕೆ ನರೇಂದ್ರ ಕಾಮತ್ ಕಾರ್ಕಳ ಇವರ ಶಿಷ್ಯೆಯಾಗಿರುತ್ತಾಳೆ. ಈ ಮೊದಲು ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿಯೂ ಹಾಗೂ ಇತ್ತೀಚೆಗೆ ನಡೆದ ಮಲೇಷಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜರುಗಿದ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನಿಯಾಗಿ ಪುರಸ್ಕೃತಳಾಗಿದ್ದಾಳೆ.ಇವಳ ಈ ಸಾಧನೆಯನ್ನು ಮೆಚ್ಚಿ ಹಲವಾರು ಸಂಘ…
ಮೊಬೈಲ್ ಹಾಗೂ ಇತರ ವಸ್ತುಗಳನ್ನು ದರೋಡೆ ಮಾಡಿ ಪರಾರಿಯಾಗಲು ಯತ್ನಿಸಿದ ಅರೋಪಿಗಳನ್ನು ಪತ್ತೆ ಹಚ್ಚಿ ಅವರಲ್ಲಿದ್ದ ಸೊತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಶ್ಲಾಘನೀಯ ಕರ್ತವ್ಯವನ್ನು ನಿರ್ವಹಿಸಿರುವ ಶ್ರೀ ವರುಣ್ ಆಳ್ವ ARSI
ಮೊಬೈಲ್ ಹಾಗೂ ಇತರ ವಸ್ತುಗಳನ್ನು ದರೋಡೆ ಮಾಡಿ ಪರಾರಿಯಾಗಲು ಯತ್ನಿಸಿದ ಅರೋಪಿಗಳನ್ನು ಮಂಗಳೂರು ಪೊಲೀಸ್ ಕಮೀಷನರ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ವರುಣ್ ಆಳ್ವ ARSI ಇವರು ಬೆನ್ನಟ್ಟಿ, ಆರೋಪಿಗಳನ್ನು ಪತ್ತೆ ಹಚ್ಚಿ ಅವರಲ್ಲಿದ್ದ ಸೊತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಶ್ಲಾಘನೀಯ ಕರ್ತವ್ಯವನ್ನು ನಿರ್ವಹಿಸಿರುವ ನಿಮಗೆ ಸಮಸ್ತ ಬಂಟ ಸಮಾಜದ ಪರವಾಗಿ ಅಭಿನಂದನೆಗಳು.
ಯುವ ಬಂಟರ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ, ಬಂಟರ ಸಂಘ ಪುತ್ತೂರು ತಾಲೂಕು ಇದರ ಮಾರ್ಗದರ್ಶನದಲ್ಲಿ, ಮಹಿಳಾ ಬಂಟರ ಸಂಘ ಪುತ್ತೂರು ತಾಲೂಕು, ವಿದ್ಯಾರ್ಥಿ ಬಂಟರ ಸಂಘ ಪುತ್ತೂರು ತಾಲೂಕು ಇದರ ಸಹಕಾರದೊಂದಿಗೆ ಪುತ್ತೂರ್ದ ಬಂಟ ಜವನೆರೆ ಗೊಬ್ಬು ಬಂಟ್ಸ್ ಪ್ರೀಮಿಯರ್ ಲೀಗ್ 2024 ಜನವರಿ 06 ಮತ್ತು 07 ರಂದು ಪುತ್ತೂರು ತಾಲೂಕು ಕ್ರೀಡಾಂಗಣ ಕೊಂಬೆಟ್ಟುವಿನಲ್ಲಿ ನಡೆಯಲಿದ್ದು ಕ್ರಿಕೆಟ್ ಆಟದ ಟೀಮ್ ಹರಾಜು ಪ್ರಕ್ರಿಯೆಯು ಆಸ್ಮಿ ಕಂಫರ್ಟ್ ಬೈಪಾಸ್ ರೋಡ್ ಪುತ್ತೂರಿನಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷರಾದ ಕಾವು ಹೇಮಾನಾಥ ಶೆಟ್ಟಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಂಟರ ಸಂಘ ಪುತ್ತೂರು ತಾಲೂಕು ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ, ನಿವೃತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ, ಕಾರ್ಯಕ್ರಮದ…
ಕನ್ನಡವನ್ನು ಹೆಚ್ಚು ಬಳಕೆ ಮಾಡುವ ಮೂಲಕ ಅದರ ಬೆಳವಣಿಗೆಗೆ ಪಣ ತೊಡಬೇಕಾಗಿದೆ ಎಂದು ಹಿರಿಯ ಸಾಹಿತಿ ಡಾ. ಇಂದಿರಾ ಹೆಗ್ಡೆ ಹೇಳಿದರು. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಶಾರದಾ ವಿದ್ಯಾಲಯದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ರಾಜ್ಯೋತ್ಸವ ಸಂದೇಶ ನೀಡಿ, ಭಾಷಾ ವಾತ್ಸಲ್ಯವನ್ನು ರೂಢಿಸಿಕೊಳ್ಳುವುದು ಅಗತ್ಯ ಎಂದರು. ಇದೇ ಸಂದರ್ಭ ಹಿರಿಯ ನಾಟ್ಯಗುರು, ಶಾಂತಲಾ ಪ್ರಶಸ್ತಿ ಪುರಸ್ಕೃತ ನಾಟ್ಯಚಾರ್ಯ ಉಳ್ಳಾಲ ಮೋಹನ್ ಕುಮಾರ್ ಅವರಿಗೆ ರಾಜ್ಯೋತ್ಸವ ಗೌರವ ಪ್ರಧಾನ ಮಾಡಿ ಅಭಿನಂದಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ನಿಕಟಪೂರ್ವ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು. ಶಾರದಾ ವಿದ್ಯಾಲಯದ ಮುಖ್ಯಸ್ಥ ಪ್ರೊ ಎಂ.ಬಿ ಪುರಾಣಿಕ್, ಕರಾವಳಿ ಲೇಖಕಿ ವಾಚಕಿಯರ ಸಂಘದ ಅಧ್ಯಕ್ಷೆ ಡಾ. ಜ್ಯೋತಿ ಚೇಳ್ಯಾರ್, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಡಾ. ಅಣ್ಣಯ್ಯ ಕುಲಾಲ್, ಅಕ್ಕಮಹಾದೇವಿ ವೀರಶೈವ ಮಹಿಳಾ ಸಂಘದ ಅಧ್ಯಕ್ಷೆ ಸುಮಾ ಮಾನ್ವಿ, ದುಬೈ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಗೌರವಾಧ್ಯಕ್ಷ ಅಬ್ದುಲ್ಲಾ…















