Author: admin

ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಶೆಟ್ಟಿ ಅವರಿಗೆ ಸೆಪ್ಟೆಂಬ‌ರ್ 10 ರಂದು ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಕಲೆ, ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ಈ ಗೌರವ ಲಭಿಸಿದೆ. ಕನ್ನಡ ಚಿತ್ರರಂಗದ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗುರುಕಿರಣ್‌ ಶೆಟ್ಟಿ ಇನ್ನು ಮುಂದೆ ಡಾಕ್ಟರ್ ಗುರುಕಿರಣ್‌ ಶೆಟ್ಟಿ ಆಗಲಿದ್ದು, ಅಭಿಮಾನಿಗಳಿಗೆ ಸಂತಸ ತಂದಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ ಜಯಕರ ಶೆಟ್ಟಿ ಎಂ, ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಮಂತ್ರಿ ಡಾ. ಎಂ ಸಿ ಸುಧಾಕರ್, ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ನವದೆಹಲಿ ಯ ಅಧ್ಯಕ್ಷ ಪ್ರೊ ದೀಪಕ್ ಕುಮಾರ್ ಶ್ರಿವಾತ್ಸವರವರುಗಳು ಉಪಸ್ಥಿತರಿದ್ದರು.

Read More

ಗಣಪತಿಯು ಭಕ್ತರ ಇಷ್ಟಾರ್ಥ ಈಡೇರಿಸುವ ದೇವರು ಎಂದು ಮಾಜಿ ಸಚಿವ ಬಿ. ನಾಗರಾಜ್ ಶೆಟ್ಟಿ ಅವರು ಹೇಳಿದರು. ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು. ಯುವ ರಾಜಕೀಯ ಮುಂದಾಳು, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರು ಮಾತನಾಡಿ, ಅಪೂರ್ವ ನಾಯಕತ್ವದ ವ್ಯಕ್ತಿತ್ವ ಹೊಂದಿರುವ ಬಂಟರು ಸ್ವಾಭಿಮಾನಿಗಳಾಗಿದ್ದು, ಸಮಾಜದ ಎಲ್ಲಾ ವರ್ಗಗಳೊಂದಿಗೆ ಬೆರೆತು ಬಾಳುವವರು ಎಂದರು. ಶಾಸಕ ವೇದವ್ಯಾಸ್ ಕಾಮತ್, ಖ್ಯಾತ ವೈದ್ಯ ಡಾ. ಹನ್ಸರಾಜ್ ಆಳ್ವ, ಪುಣೆಯ ತಮನ್ನಾ ಗ್ರೂಪ್ ಆಫ್ ಹೊಟೇಲ್ಸ್ ನ ಸಿಎಂಡಿ ಪ್ರಭಾಕರ್ ಶೆಟ್ಟಿ ಅತಿಥಿಗಳಾಗಿ ಪಾಲ್ಗೊಂಡು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮ.ನ.ಪಾ. ದ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಬಂಟರ ಯಾನೆ ನಾಡವರ ಮಾತೃ…

Read More

ತುಳು ಭಾಷಾ ಸಂಸ್ಕೃತಿಯ ಅಭ್ಯುದಯಕ್ಕಾಗಿ ಕಾಳಜಿಯ ಕಾಯಕ ನೆರವಾಗುವ ಧ್ಯೇಯೋದ್ದೀಶದಿಂದ ಅಸ್ತಿತ್ವಕ್ಕೆ ಬಂದಿರುವ ತುಳು ವರ್ಲ್ಡ್ ಫೌಂಡೇಷನ್ ಚಟುವಟಿಕೆಗಳಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಿಂದ ಚಾಲನೆಯಾಯಿತು. ಕಟೀಲು ಕ್ಷೇತ್ರದ ಅರ್ಚಕ ವೇ.ಮೂ. ಹರಿನಾರಾಯಣ ದಾಸ ಆಸ್ರಣ್ಣರ ಉಪಸ್ಥಿತಿ ಮತ್ತು ಗೌರವಾಧ್ಯಕ್ಷತೆಯ ಸಂಘಟನೆಯ ಸೃಜನಶೀಲ ಚಟುವಟಿಕೆಯ ಮುನ್ನಡೆಗೆ ಕಟೀಲು ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಚಾಲನೆ ನೀಡಲಾಯಿತು. ಈ ಸಂಬಂಧ ಕಟೀಲು ಕ್ಷೇತ್ರದಲ್ಲಿ ನಡೆದ ಫೌಂಡೇಷನ್ ಪದಾಧಿಕಾರಿಗಳ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿದ ವೇ.ಮೂ. ಹರಿನಾರಾಯಣ ದಾಸ ಆಸ್ರಣ್ಣರು “ಪಂಚ ದ್ರಾವಿಡ ಭಾಷೆಗಳಲ್ಲೇ ಪ್ರಾಚೀನವಾದ ತುಳು ಭಾಷೆಯಲ್ಲಿ ಸಾಂಸ್ಕೃತಿಕ ಶ್ರೀಮಂತಿಕೆ ಇದೆ. ಆ ಕುರಿತು ಅರಿತು ಅಭಿಮಾನ ಪಡಬೇಕು. ತುಳು ಎಂದರೆ ಕೇವಲ ಮನೋರಂಜನಾ ಪ್ರದರ್ಶನಗಳಲ್ಲ. ಅದು ಬದುಕಿನ ಸಂಸ್ಕೃತಿ. ಇದರ ರಕ್ಷಣೆಗಾಗಿ ಜಗತ್ತಿನ ತುಳುವರೆಲ್ಲರೂ ಒಂದೇ ಸೂರಿಯಡಿ ನೆರೆದು, ಒಂದೇ ಕುಟುಂಬದವರಂತೆ ದುಡಿಯಬೇಕು” ಎಂದರು. ತುಳು ವರ್ಲ್ಡ್ ಫೌಂಢೇಷನ್ ಅಧ್ಯಕ್ಷ ಅಬುದಾಬಿಯ ಸರ್ವೋತ್ತಮ ಶೆಟ್ಟಿ ಮಾತನಾಡಿ “ತುಳುವರಲ್ಲಿ ಒಗ್ಗಟ್ಟಿನ ಕೊರತೆ ಇದೆ. ತುಳು…

Read More

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಕಾನೂನು ಮಹಾವಿದ್ಯಾಲಯವನ್ನು ಆರಂಭಿಸುತ್ತಿದೆ. ಕಾನೂನು ಶಿಕ್ಷಣ ಎಲ್ಲಾ ಸ್ತರಗಳ ಹಾಗೂ ವಿವಿಧ ಜ್ಞಾನ ಶಾಖೆಗಳಿಗೆ ಪೂರಕವಾದ ವೃತ್ತಿ ಆಧಾರಿತ ಕೋರ್ಸ ಆಗಿದೆ. ಮೂಡುಬಿದಿರೆಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಇರುವ ಶೈಕ್ಷಣಿಕ ಕಾರ್ಯಕ್ರಮವನ್ನು ಪರಿಚಯಿಸಿ, ಮಧ್ಯಮ ಮತ್ತು ಕೆಳವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಸಾಧ್ಯತೆಗಳನ್ನು ಪರಿಚಯಿಸಿದ ಕೀರ್ತಿ ಆಳ್ವಾಸ್‍ಗೆ ಸಲ್ಲುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು ಅವರು ಮೂಡುಬಿದಿರೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಹೊಸ ಕಾನೂನು ಮಹಾವಿದ್ಯಾಲಯವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್‍ಎಲ್‍ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು. ಕರಾವಳಿ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಅತೀ ಹೆಚ್ಚು ಉದ್ಯೋಗ ಸಾಧ್ಯತೆ ಇರುವ 5 ವರ್ಷಗಳ ಬಿಕಾಂ ಎಲ್‍ಎಲ್‍ಬಿ ಪದವಿಯನ್ನು 60 ವಿದ್ಯಾರ್ಥಿ ಪರಿಮಿತಿಯೊಂದಿಗೆ ಹಾಗೂ 3 ವರ್ಷಗಳ ಎಲ್‍ಎಲ್‍ಬಿ…

Read More

ಬಂಟರ ಯಾನೆ ನಾಡವರ ಮಾತೃ ಸಂಘ ಕಳೆದ 18 ವರ್ಷಗಳಿಂದ ತುಳುನಾಡಿನಲ್ಲೇ ಮಾದರಿ ಎಂಬ ರೀತಿಯಲ್ಲಿ ಗಣೇಶೋತ್ಸವ ಸಂಘಟಿಸುವ ಮೂಲಕ ಸರ್ವತ್ರ ಪ್ರಶಂಸೆಗೆ ಪಾತ್ರವಾಗಿದೆ. ಸಮಾಜದ ಎಲ್ಲಾ ಜಾತಿ, ವರ್ಗಗಳೊಂದಿಗೆ ಪ್ರೀತಿ ವಿಶ್ವಾಸದೊಂದಿಗೆ ಬೆರೆಯುವ ವಿಶಾಲ ಗುಣ ಬಂಟರಲ್ಲಿರುವುದು ಆದರ್ಶನೀಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಹೇಳಿದರು. ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆಯುತ್ತಿರುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ದ್ವಿತೀಯ ದಿನದ ಧಾರ್ಮಿಕ ಸಭೆಯ ಮುಖ್ಯ ಅತಿಥಿಯಾಗಿದ್ದರು. ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಯಶಪಾಲ್ ಸುವರ್ಣ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ, ಸಿಎ ಎನ್.ಬಿ. ಶೆಟ್ಟಿ, ಬ್ಯಾಂಕ್ ಆಫ್ ಬರೋಡದ ಪ್ರಧಾನ ವ್ಯವಸ್ಥಾಪಕ ರಾಜೇಶ್ ಖನ್ನ, ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ, ಕರ್ನಾಟಕ ಧಾರ್ಮಿಕ…

Read More

ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಶಿಕ್ಷಕ ದಂಪತಿಗಳಿಗೆ ಸನ್ಮಾನಿಸುವ ಮೂಲಕ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಿಕ್ಷಕ ದಂಪತಿಗಳಾದ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ದಿನಕರ್ ಆರ್ ಶೆಟ್ಟಿ ಮತ್ತು ಅವರ ಪತ್ನಿ ನಿವೃತ್ತ ಶಿಕ್ಷಕಿ ಶ್ರೀಮತಿ ಸವಿತಾ ಶೆಟ್ಟಿ ಅವರನ್ನು ಬಸ್ರೂರಿನ ಅವರ ಸ್ವಗೃಹದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಶ್ರೀ ನಿತೀಶ್ ಶೆಟ್ಟಿ ಬಸ್ರೂರು ಸನ್ಮಾನಿಸಿದರು. ಈ ಸಂದರ್ಭ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀಧರ ಶೆಟ್ಟಿ ಹುಯ್ಯಾರು, ಖಜಾಂಚಿ ಭರತರಾಜ್ ಶೆಟ್ಟಿ ಜಾಂಬೂರು, ಉಪಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಸುಕುಮಾರ್ ಶೆಟ್ಟಿ ಹೇರಿಕುದ್ರು ಉಪಸ್ಥಿತರಿದ್ದರು. ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ ಪ್ರಸ್ತಾವಿಸಿದರು. ಅಕ್ಷಯ್ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

Read More

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.) ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಬೆಳ್ಮಣ್ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಿ ದಾನಿಗಳಿಗೆ ಅಭಿನಂದನೆ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿಯ ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್, ಕಾಪು ಪುರಸಭೆಯ ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರೇಷ್ಮಾ ಶೆಟ್ಟಿ, ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಅವಿನಾಶ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಕಾನೂನು ಮಹಾವಿದ್ಯಾಲಯವನ್ನು ಆರಂಭಿಸುತ್ತಿದೆ. ಕಾನೂನು ಶಿಕ್ಷಣ ಎಲ್ಲಾ ಸ್ತರಗಳ ಹಾಗೂ ವಿವಿಧ ಜ್ಞಾನ ಶಾಖೆಗಳಿಗೆ ಪೂರಕವಾದ ವೃತ್ತಿ ಆಧಾರಿತ ಕೋರ್ಸ ಆಗಿದೆ. ಮೂಡುಬಿದಿರೆಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಇರುವ ಶೈಕ್ಷಣಿಕ ಕಾರ್ಯಕ್ರಮವನ್ನು ಪರಿಚಯಿಸಿ, ಮಧ್ಯಮ ಮತ್ತು ಕೆಳವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಸಾಧ್ಯತೆಗಳನ್ನು ಪರಿಚಯಿಸಿದ ಕೀರ್ತಿ ಆಳ್ವಾಸ್‍ಗೆ ಸಲ್ಲುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ತಿಳಿಸಿದರು ಅವರು ಮೂಡುಬಿದಿರೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಹೊಸ ಕಾನೂನು ಮಹಾವಿದ್ಯಾಲಯವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್‍ಎಲ್‍ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು. ಕರಾವಳಿ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಅತೀ ಹೆಚ್ಚು ಉದ್ಯೋಗ ಸಾಧ್ಯತೆ ಇರುವ 5 ವರ್ಷಗಳ ಬಿಕಾಂ ಎಲ್‍ಎಲ್‍ಬಿ ಪದವಿಯನ್ನು 60 ವಿದ್ಯಾರ್ಥಿ ಪರಿಮಿತಿಯೊಂದಿಗೆ ಹಾಗೂ 3 ವರ್ಷಗಳ ಎಲ್‍ಎಲ್‍ಬಿ…

Read More

ಎಚ್‌ಪಿಆರ್ ಫಿಲ್ಮ್ಸ್, ಪುಳಿಮುಂಚಿ ಚಿತ್ರ ತಂಡದ, ಹರಿಪ್ರಸಾದ್ ರೈ ನಿರ್ಮಾಣದ, ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರದ ಚಿತ್ರೀಕರಣದ ಮೂಹೂರ್ತ ಕಾರ್ಯಕ್ರಮ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು. ಐವನ್ ಡಿ ಸೋಜಾ ಕ್ಲ್ಯಾಪ್ ಮಾಡಿದರು. ಪ್ರಕಾಶ್ ಪಾಂಡೇಶ್ವರ್ ಕ್ಯಾಮರ ಚಾಲನೆ ನೀಡಿದರು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ ಉದ್ಘಾಟಿಸಿದರು. ಜಿಲ್ಲೆಯಲ್ಲಿ ಬಹಳಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಕಲಾವಿದರಿಗೆ ಅವಕಾಶ ದೊರೆತು ಅವರು ಸಮಾಜದ ಎದುರು ಬರಲಿ.‌ ತುಳು ಸಿನಿಮಾಗಳನ್ನು ಎಲ್ಲಾ ಧರ್ಮದ ಪ್ರೇಕ್ಷಕರು ನೋಡಿ ಪ್ರೋತ್ಸಾಹಿಸ ಬೇಕೆಂದರು. ತುಳು ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳು ಭಾಷೆ ವಿಶ್ವದ ಎಲ್ಲೆಡೆ ಪಸರಿಸಿದೆ. ಇವತ್ತು ಭಾಷೆ ಉಳಿಯುವಲ್ಲಿ ತುಳು ನಾಟಕ, ತುಳು ಸಿನಿಮಾದ ಕೊಡುಗೆ ದೊಡ್ಡದಿದೆ. ತುಳು ಭಾಷೆಯ ರಾಯಭಾರಿಯಾಗಿ ನಾಟಕ, ಸಿನಿಮಾಗಳು ಕೆಲಸ ಮಾಡುತ್ತಿದೆ ಎಂದರು. ಕೊಂಕಣಿ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಳ್ವರಿಸ್ ಮಾತನಾಡಿ, ಹಾಸ್ಯ ಸಿನಿಮಾದ ಜೊತೆಗೆ ಸದಭರುಚಿಯ ಸಮಾಜಕ್ಕೆ…

Read More

ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ಸೆ.7ರಿಂದ 9ರ ವರೆಗೆ ನಡೆಯುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನಾ ಸಮಾರಂಭ ಜರಗಿತು. ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ 115 ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಬಂಟರ ಮಾತೃ ಸಂಘದ ನೇತೃತ್ವದಲ್ಲಿ ಕಳೆದ 18 ವರ್ಷಗಳಿಂದ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುತ್ತಿರುವ ಇಲ್ಲಿನ ಗಣೇಶೋತ್ಸವ ಇನ್ನಷ್ಟು ಸಮಾಜಮುಖಿ ಕಾರ್ಯಗಳಿಗೆ ಪ್ರೇರಣೆ ನೀಡಿ ಎಲ್ಲರಿಗೂ ಶುಭ ತರಲಿ ಎಂದು ಹಾರೈಸಿದರು. ಬುದ್ಧಿವಂತರ ಜಿಲ್ಲೆ ಎಂದೇ ಖ್ಯಾತಿಯುಳ್ಳ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪ್ರಕೃತಿಗೆ ಹೆಚ್ಚಿನ ಮಹತ್ವ ನೀಡುವವರಾಗಿದ್ದು, ಗಣೇಶೋತ್ಸವದ ಸಂದರ್ಭದಲ್ಲಿ ತೆನೆ ವಿತರಣೆ ಮಾಡುವ ಮೂಲಕ ದೇವರ ಆರಾಧನೆ ಜೊತೆಗೆ ಪ್ರಕೃತಿಯೊಂದಿಗೆ ನಮ್ಮ ಬದುಕನ್ನು ಜೋಡಿಸಿಕೊಂಡಿರುವುದು ಪ್ರಶಂಸನೀಯವಾಗಿದೆ ಎಂದರು. ಸಾಂಕೇತಿಕ ತೆನೆ ವಿತರಿಸಿದ ಮೋಹನ್ ದೇವ ಆಳ್ವ ಅವರು ಮಾತನಾಡಿ,…

Read More