Author: admin

ಆಳ್ವಾಸ್ ಪುನರ್ಜನ್ಮ ಸಮಗ್ರ ವೈದ್ಯಕೀಯ ಚಿಕಿತ್ಸೆಯ ದುಶ್ಚಟ ನಿವಾರಣಾ ಕೇಂದ್ರದಲ್ಲಿ ‘ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಣಿಕೆ ತಡೆ ದಿನ’ದಂದು ಆಳ್ವಾಸ್ ಹೋಮಿಯೋಪತಿ ಕಾಲೇಜು ಸಭಾಂಗಣದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ಮೂಡುಬಿದಿರೆ ಪೋಲೀಸ್ ಠಾಣಾ ಉಪನಿರೀಕ್ಷಕಿ ಪ್ರತಿಭಾ ಮಾತನಾಡಿ, ಮಾದಕ ದ್ರವ್ಯಗಳ ವ್ಯಸನಕ್ಕೆ ಹೆಚ್ಚಾಗಿ ಯುವಕರು ಮತ್ತು ಯುವತಿಯರು ಬಲಿಯಾಗುತ್ತಿದ್ದಾರೆ. ಇವುಗಳ ಸೇವನೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಕ್ಷೀಣಿಸುತ್ತದೆ. ಇದರಿಂದ ಕೇವಲ ಸೇವಿಸುವವನಿಗೆ ಮಾತ್ರವಲ್ಲ, ಸಮಾಜಕ್ಕೂ ತೊಂದರೆಯಾಗುತ್ತಿದೆ. ಸಮಾಜದಲ್ಲಿ ನಡೆಯುವ ಅಪರಾಧ ಕೃತ್ಯಗಳಾದ ಕಳ್ಳತನ, ಕೊಲೆ, ಅತ್ಯಾಚಾರ ಇತ್ಯಾದಿಗಳಿಗೆ ತೊಡಗಿರುವ ೭೦% ಆರೋಪಿಗಳು ಮಾದಕ ದ್ರವ್ಯಗಳ ವ್ಯಸನಕ್ಕೆ ಒಳಗಾಗಿರುತ್ತಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಪುನರ್ಜನ್ಮ ವೈದ್ಯಕೀಯ ನಿರ್ದೇಶಕ ಡಾ. ವಿನಯ್ ಆಳ್ವ, ‘೨೦೧೯ರಲ್ಲಿ ಭಾರತದಲ್ಲಿ ನಡೆದ ಸಮೀಕ್ಷೆಯ ಪ್ರಕಾರ ೧೭ ಕೋಟಿ ಮದ್ಯಪಾನ, ೫.೧ ಕೋಟಿ ಓಪಿಯಂ, ೩.೨ ಕೋಟಿ ಗಾಂಜಾ ಸೇವಿಸುವವರಿದ್ದು, ಆದರೆ ಕೇವಲ ೬೧೨ ನೋಂದಾಯಿಸಲ್ಪಟ್ಟ ದುಶ್ಚಟ ನಿವಾರಣಾ ಕೇಂದ್ರಗಳಿವೆ.…

Read More

ಗಣಿತನಗರ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‍ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ. ಜೂನ್ ತಿಂಗಳ ಮೌಲ್ಯಸುಧಾ ಮಾಲಿಕೆ-37 ತಾರೀಕು 28, ಶನಿವಾರದಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ರಾಮಕೃಷ್ಣ – ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರಿನ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಜಿಯವರು ಆಗಮಿಸಲಿದ್ದು, ‘ಸ್ವನಿಯಂತ್ರಣ : ಬಂಧನವೋ? ಸ್ವಾತಂತ್ರ್ಯವೋ?’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸ ಬಹುದೆಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

Read More

ವಿದ್ಯಾಗಿರಿ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಮಾದಕ ವ್ಯಸನ ಜಾಗೃತಿ ಸಮಿತಿಯಿಂದ ‘ವಿಶ್ವ ತಂಬಾಕು ರಹಿತ ದಿನದ’ ಅಂಗವಾಗಿ ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ವಿ ಎಸ್ ಆಚಾರ್ಯ ಸಭಾ ಭವನದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮೂಡುಬಿದಿರೆ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ಕಾಲೇಜಿನಲ್ಲಿ ಓದುವ ವಯಸ್ಸಿನಲ್ಲಿ ಕುತೂಹಲಕ್ಕಾಗಿ ಸಿಗರೇಟ್‌ನಿಂದ ಆರಂಭವಾಗುವ ಚಟಗಳು ನಿಧಾನವಾಗಿ ಮಾದಕವ್ಯಸನಗಳ ಜಾಲದಲ್ಲಿ ಬೀಳುವಂತೆ ಮಾಡುತ್ತದೆ. ಮೊದಲು ಗ್ರಾಹಕನಾಗಿರುವ ವ್ಯಕ್ತಿ ನಂತರ ಹಣದ ಆಸೆಯಿಂದ ಮಾದಕದ್ರವ್ಯಗಳ ವ್ಯಾಪಾರಕ್ಕೆ ಇಳಿಯುತ್ತಾನೆ. ಸಮಾಜದಲ್ಲಿ ಇಂತಹ ಕೃತ್ಯಕ್ಕೆ ವಿದ್ಯಾರ್ಥಿಗಳನ್ನೇ ಬಲೆ ಬೀಸಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ದೂರವಿರಬೇಕು. ಮಕ್ಕಳ ಇಂತಹ ಕೃತ್ಯದಿಂದ ತಂದೆ ತಾಯಂದಿರು ಅವಮಾನ ಎದುರಿಸುವಂತಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಯಲ್ಲಿ ನಿರತರಾಗಿರುವುದು ಹಾಗೂ ಒಳ್ಳೆಯ ಗೆಳೆಯರ ಸ್ನೇಹ ಬೆಳೆಸುವುದು ಅಗತ್ಯ ಎಂದರು. ಮೊದಲ ಬಾರಿ ಡ್ರಗ್ಸ್ ಸೇವನೆ ಮಾಡಿದವರಿಗೆ ರೂ 10,000 ದಂಡ ಅಥವಾ 6 ತಿಂಗಳು ಅಥವಾ 1…

Read More

ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರವೇಶ ಪರೀಕ್ಷೆಯಾದ IISER Aptitude Test (IAT–2025) ಫಲಿತಾಂಶವನ್ನು ಜೂನ್ 24, 2025 ರಂದು ಪ್ರಕಟಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ಕ್ಷೇತ್ರದ ಈ ಪರೀಕ್ಷಾ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಸಂಸ್ಥೆಯ ವಿದ್ಯಾರ್ಥಿ ಮೋಹಿತ್ ಎಂ ಅವರು ರಾಷ್ಟ್ರಮಟ್ಟದಲ್ಲಿ 4ನೇ ರ‍್ಯಾಂಕ್ ( ಕೆಟಗರಿ ವಿಭಾಗದಲ್ಲಿ) ಜನರಲ್ ಮೆರಿಟ್ ನಲ್ಲಿ 1845ನೇ ರ್‍ಯಾಂಕ್ ಗಳಿಸಿ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ (IISER) ಪ್ರವೇಶ ಪರೀಕ್ಷೆಯಲ್ಲಿ ದೇಶದಾದ್ಯಂತ ಸಾವಿರಾರು ವಿದ್ಯಾರ್ಥಿಗಳ ಸ್ಪರ್ಧೆಯಲ್ಲಿ ಮೋಹಿತ್ ಅವರ ಸಾಧನೆ ಸಂತೋಷದ ಸಂಗತಿಯಾಗಿದೆ. ಉಳಿದಂತೆ ಎಂ. ಮಂಜುನಾಥ್ 1457, ಚೇತನ್ ಗೌಡ ಎನ್.ಎಸ್ 1718 ( ಕೆಟಗರಿ ರ್‍ಯಾಂಕ್ 314 ), ತೇಜಸ್ ವಿ ನಾಯಕ್ 2423 ( ಕೆಟಗರಿ ರ್‍ಯಾಂಕ್ 460), ಶ್ರೀರಕ್ಷಾ 3127, ವೀರೇಂದ್ರ ಮುಟ್ಟೂರು 3960, ಹರ್ಷಿತ್ ರಾಜು ಎಚ್. ಎಂ…

Read More

ಮುಂಬಯಿಯ ಖ್ಯಾತ ಉದ್ಯಮಿಗಳಾದ ಸುಧಾಕರ್ ಶೆಟ್ಟಿ ಹಾಗೂ ಸಂತೋಷ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ. ಸೊಲ್ಯೂಷನ್ 1 ಇಂಟಿರಿಯರ್ಸ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ಪಾಲುದಾರರಾಗಿರುವ ಇವರು ಈ ಹಿಂದೆ ಪೋಷಕ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಮುಂದೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ನಿಸ್ವಾರ್ಥವಾಗಿ ದುಡಿದು ಯಕ್ಷಗಾನವನ್ನು ಈ ಮರಳುಭೂಮಿಯಲ್ಲಿ ಬೆಳೆಸಿ, ಉಳಿಸಲು ಶ್ರಮಪಡುವ ನಮ್ಮ ಗುರುಗಳಾದ ಶ್ರೀ ಶೇಖರ್ ಡಿ ಶೆಟ್ಟಿಗಾರ್, ಶ್ರೀ ಶರತ್ ಕುಡ್ಲ ಹಾಗೂ ಎಲ್ಲಾ ಕಾರ್ಯಕರ್ತರಿಗೂ, ಪೋಷಕರಿಗೂ, ಕಲಾವಿದರಿಗೂ, ಬಾಲ ಕಲಾವಿದರಿಗೂ ಶಿರಭಾಗಿ ಮಾಡುವ ನಮಸ್ಕಾರಗಳು. ಇದೀಗ ಯಕ್ಷಗಾನ ಅಭ್ಯಾಸ ಕೇಂದ್ರದ ಸಂಸ್ಥೆಗೆ ದಶಮಾನೋತ್ಸವದ ಸಡಗರ. ಹತ್ತರ ಹರುಷದ ಹೊತ್ತಿನಲ್ಲಿ ಹಿಂದೆ ತಿರುಗಿ ನೋಡಿದಾಗ, ಸಾಗಿ ಬಂದ ದಾರಿ, ಸಾಧನೆ ಸಂಭ್ರಮ ಮೂಡಿಸುತ್ತಿದೆ. ಯಕ್ಷಗಾನ ಅಭ್ಯಾಸ ಕೇಂದ್ರದ ಹೆಸರು ಯು. ಎ. ಇ. ಯ ಸರ್ವರ ಮನೆ-ಮನ ತಲುಪಿದೆ. ವಿದ್ವಜ್ಜನರ ಕೊಂಡಾಟಕ್ಕೆ ಕಾರಣವಾಗಿದೆ. ಮುಂಚೂಣಿಯಲ್ಲಿ ನಿಂತ ನಮಗೆ ಸಾರ್ಥಕ್ಯ ಭಾವ. ಮತ್ತಷ್ಟು ಸಾಧನೆಗೆಳಸುವ ಉತ್ಸಾಹ, ಹೆಚ್ಚಿದ ಹೊಣೆಯ ಅರಿವು, ಧನ್ಯತೆ ಸಮ್ಮಿಳಿತ ಭಾವಗಳಿಂದ ನಿರುತ್ತರರು. ಗುರುಗಳಾದ ಶೇಖರ್ ಡಿ ಶೆಟ್ಟಿಗಾರ್ ಚಿಂತನೆಗಳನ್ನು ಚಿಂತೆಯಾಗದಂತೆ ಕಾರ್ಯರೂಪಕ್ಕೆ ತರುವಲ್ಲಿ ಪೂರ್ಣ ಬೆಂಬಲ ಸಂಚಾಲಕ ಕೊಟ್ಟಿಂಜ ದಿನೇಶ ಶೆಟ್ಟಿಯವರದ್ದು. ದೈವಭಕ್ತರು, ನಿಸ್ವಾರ್ಥಿ, ನಿರಂತರ ಕವಲೊಡೆಯದ ನಿಷ್ಠೆಯಿಂದ ಸಂಸ್ಥೆಯ ನೇತೃತ್ವ ವಹಿಸಿ, ಮುನ್ನಡೆಸಿ, ಹೆಸರಿನಂತೆ ದಿನಮಣಿಯಾದವರು.…

Read More

ಯಕ್ಷ ಕಲಾರಂಗ (ರಿ) ಕಾರ್ಕಳ ಮತ್ತು ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಹಯೋಗದೊಂದಿಗೆ ಯಕ್ಷ ಶಿಕ್ಷಣ ಅಭಿಯಾನ 2025 – 26 ಯೋಜನೆಯ ಮೂಲಕ ಕಲಿಕಾಸಕ್ತ ವಿದ್ಯಾರ್ಥಿಗಳಿಗಾಗಿ ನಡೆಸಲಾಗುವ ಉಚಿತ ಯಕ್ಷಗಾನ ನಾಟ್ಯ ತರಬೇತಿ ತರಗತಿ ಆರಂಭ ಮಾಡಲಾಯಿತು. ಕಾಂತವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಭಾಕರ ಕುಲಾಲ್ ಬೇಲಾಡಿ ಇವರು ದೀಪ ಬೆಳಗಿಸಿ ನಾಟ್ಯ ತರಬೇತಿ ತರಗತಿಯನ್ನು ಉದ್ಘಾಟಿಸಿ, ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯಪೂರ್ಣ ಕಲೆ ಯಕ್ಷಗಾನ ಎಂದು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಯಕ್ಷ ಕಲಾರಂಗ (ರಿ) ಕಾರ್ಕಳ ಇದರ ಕಾರ್ಯದರ್ಶಿ ಶ್ರೀ ಮಹಾವೀರ ಪಾಂಡಿ ಈ ಯಕ್ಷ ಶಿಕ್ಷಣ ಅಭಿಯಾನದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಯಕ್ಷಗಾನ ಮಹತ್ವದ ಬಗ್ಗೆ ಹೇಳಿದರು. ಯಕ್ಷಕಲಾರಂಗ ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಉದ್ಯಮಿ ಇವರು ಈ ಸಂದರ್ಭದಲ್ಲಿ ಮಕ್ಕಳಿಗೆ ಶುಭ ಹಾರೈಸಿ ಯೋಜನೆಯ ಸದುಪಯೋಗ ಮಾಡಿಕೊಳ್ಳಿ ಎಂದು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಸಂಚಾಲಕರಾದ ಶ್ರೀ ಕೆ ಶ್ರೀಪತಿ ರಾವ್ ಅದ್ಯಕ್ಷತೆ…

Read More

ಸಮಾನತೆ ಸರ್ವರ ಹಕ್ಕು. ಮೇಲು ಕೀಳು ಎಂಬ ಜಾತಿ ಭೇದವಿಲ್ಲದೆ ಆತ್ಮಗೌರವದಿಂದ ಒಂದು ಸಮಾಜದಲ್ಲಿ ಬಾಳುವ ಅಧಿಕಾರ ಎಲ್ಲರಿಗೂ ಇದೆ. ಬುದ್ಧ, ಬಸವ, ಗಾಂಧಿ, ಅಂಬೇಡ್ಕರಾದಿಯಾಗಿ ಎಲ್ಲರೂ ಇದನ್ನು ಪ್ರತಿಪಾದಿಸುತ್ತಲೇ ಬಂದರು. ಸಮತೆಯಿಲ್ಲದೆ ನ್ಯಾಯ ಸಾಧ್ಯವಿಲ್ಲ. ಜಾತಿ, ಧರ್ಮ, ಲಿಂಗ, ವರ್ಗದ ಆಧಾರದಲ್ಲಿ ಯಾವುದೇ ವಿಭಜನೆಯಿಲ್ಲದೆ ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಎಂಬುದೇ ಸಮಾನತೆಯ ತತ್ತ್ವ. ಆದರೆ ಜಾತಿ, ವರ್ಗದ ಆಧಾರದಲ್ಲಿ ಮೇಲು ಕೀಳೆಂಬ ವರ್ಗೀಕರಣವು ನಡೆದು ಕೆಳವರ್ಗದ ಜನರು ಅಸಮಾನತೆಯ, ಅಪಮಾನದ ನೋವನ್ನು ಅನುಭವಿಸುವಂತಾಯಿತು. ಶೋಷಿತ ವರ್ಗ ಇದರ ವಿರುದ್ಧ ಅನಿವಾರ್ಯವಾಗಿ ಸಿಡಿದೇಳುವಂತಾಯಿತು. ಕನ್ನಡದಲ್ಲಿ ‘ದಲಿತ ಬಂಡಾಯ ಸಾಹಿತ್ಯ’ ಎಂಬ ರೂಪದಲ್ಲಿ ಒಂದು ಸಾಹಿತ್ಯ ಚಳುವಳಿಯೇ ಆರಂಭವಾಯಿತು. ದಲಿತ ಸಾಹಿತ್ಯವೆನ್ನುವುದು ಅನುಭವಸಿದ್ಧ ಸಾಹಿತ್ಯ. ಭಾರತೀಯ ದಲಿತ ಸಾಹಿತ್ಯಕ್ಕೆ ಅಂಬೇಡ್ಕರ್ ಸಾಹಿತ್ಯವು ಬುನಾದಿಯಾಗಿದೆ ಎನ್ನಬಹುದು. ಕನ್ನಡ ಸಾಹಿತ್ಯದಲ್ಲಿ ಕ್ರಾಂತಿ ಮಾಡಿದ ವಚನ ಸಾಹಿತ್ಯವೂ ‘ಮನುಷ್ಯ ಜಾತಿ ತಾನೊಂದೇ ವಲಂ’ ಎಂಬ ಪಂಪನ ಮಾತನ್ನೇ ಮಂತ್ರವಾಗಿಸಿತ್ತು. ಆಧುನಿಕ ಕನ್ನಡ ಸಾಹಿತ್ಯದಲ್ಲಿ ‘ದಲಿತ ಬಂಡಾಯ…

Read More

ವರುಷ ಸುಮಾರು ಮೂವತ್ತು ದಾಟಿದರೂ ಮದುವೆ ಆಗಿಲ್ಲ, ಕಂಕಣ ಭಾಗ್ಯ ಕೂಡಿ ಬಂದಿಲ್ಲ, ರಾಶಿ ನಕ್ಷತ್ರ ಸಮನಾಗಿಲ್ಲ, ತಲೆಯ ಕೂದಲೆಲ್ಲಾ ಬೆಳ್ಳಗಾತ್ತಿದೆ ಎಂಬ ಮಾತುಗಳು ಕೇಳಿ ಬಂದರೂ ಇದಕ್ಕಿಂತ ಹೆಚ್ಚಾಗಿ ಈಗಿನ ಕಾಲದಲ್ಲಿ ಹುಡುಗಿ ಸಿಕ್ತಿಲ್ಲ, ಸಿಕ್ಕಿದ್ರೂ ಮದುವೆಗೆ ಒಪ್ಪಲಿಲ್ಲ ಅನ್ನೋ ಮಾತು ಅಚ್ಚರಿಯಂತೆ ಪ್ರಸ್ತುತ ಸಮಾಜದಲ್ಲಿ ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಕಾಲ ಬದಲಾದಂತೆ ಹುಡುಗಿಯರ ಡಿಮ್ಯಾಂಡ್ಗಳು ಏರುತ್ತಿದೆ. ಹುಡುಗ ಊರಿನಲ್ಲಿ ಕೃಷಿ ಮಾಡಿಕೊಂಡಿದ್ದರೆ, ತನ್ನದೇ ಅಂಗಡಿ ಇಟ್ಟರೆ, ದೇಶ ಸೇವೆ ಮಾಡಲೇಂದು ಸೇನೆಗೆ ಸೇರಿದರೆ ಈಗಿನ ಕಾಲದಲ್ಲಿ ಯಾವ ಹುಡುಗಿ ತಾನೆ ಒಪ್ಪಿಕೊಂಡಾಳು? ಮದುವೆ ಮಾತುಕತೆ ಮುಂಚೆಗೆ ಹುಡುಗಿ ತನ್ನ ಡಿಮ್ಯಾಂಡ್ ಗಳನ್ನ ಇಟ್ಟು ಬಿಡುತ್ತಾಳೆ. ಒಬ್ಬನೇ ಮಗನಿರಬೆಕು, ಸ್ವಂತ ಕಾರು ಇರಬೇಕು, ಮನೆ ಎರಡು ಅಂತಸ್ತಿನದ್ದು ಆಗಿರಬೇಕು, ಅಪ್ಪ ಅಮ್ಮ, ಒಡ ಹುಟ್ಟಿದವರು ಇಲ್ಲದೆ ಇದ್ದರೆ ಇನ್ನೂ ಉತ್ತಮ ಎಂಬ ಹತ್ತಾರು ನಿಯಮಗಳಿವೆ. ವರದಕ್ಷಿಣೆ ಇಲ್ಲದೆ ಎಲ್ಲಾ ಖರ್ಚನ್ನು ಹುಡುಗನ ಕಡೆಯವರೆ ಹಾಕಿಕೊಂಡು ಮದುವೆ ಮಾಡಿಕೊಳ್ಳುತ್ತೇನೆ ಎಂದು ಹುಡುಗನೆ…

Read More

ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ, ಹೌಸ್ ಹಾಗೂ ವಿವಿಧ ಸಂಘಗಳ ನಾಯಕರ ಪದಗ್ರಹಣ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲೆಯ ಸ್ಕೌಟ್ ಮತ್ತು ಗೈಡ್ಸ್‍ನ ಮುಖ್ಯ ಆಯುಕ್ತ ಲಯನ್ ಜಯಕರ ಶೆಟ್ಟಿ ಇಂದ್ರಾಳಿಯವರು ಆಗಮಿಸಿದ್ದರು. ಅವರು ಜ್ಯೋತಿಯನ್ನು ಬೆಳಗಿಸಿ ಮಾತನಾಡಿ ಮಕ್ಕಳೆಲ್ಲರೂ ಪ್ರತಿಭಾವಂತರು. ಎಲ್ಲರೂ ಶಾಲೆಯಲ್ಲಿ ಜ್ಞಾನವನ್ನು ಪಡೆದು ಪರಿಪೂರ್ಣ ವಿಚಾರ ಹೊಂದಿದ ವಿದ್ಯಾರ್ಥಿಗಳಾಗಬೇಕು. ಅದನ್ನು ಮುಂದಿನ ಜೀವನದಲ್ಲಿ ಅಳವಡಿಸಿಕೊಂಡಾಗ ಶ್ರೇಷ್ಟ ವ್ಯಕ್ತಿಗಳಾಗುತ್ತೀರಿ. ಜೀವನದಲ್ಲಿ ಶಿಸ್ತು, ಸಂಸ್ಕಾರ, ದೇವರ ಮೇಲಿನ ನಂಬಿಕೆ ಇರಬೇಕು. ಪ್ರತಿಯೊಬ್ಬರ ಮೇಲಿನ ಕಾಳಜಿ ಉತ್ತಮ ನಾಯಕತ್ವದ ಗುಣವೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ವಿವಿಧ ಹುದ್ದೆಗಳಿಗೆ ಆಯ್ಕೆಗೊಂಡ ಎಲ್ಲಾ ನಾಯಕರುಗಳು ಹೆಚ್ಚಿನ ಜವಾಬ್ದಾರಿಯನ್ನು ಹೊಂದಿದ್ದೀರಿ. ಶಾಲೆಯ ಇತರ ವಿದ್ಯಾರ್ಥಿಗಳಿಗೆ ನೀವು ಮಾದರಿಯಾಗಿದ್ದೀರಿ. ಜಿ ಎಮ್‍ನಲ್ಲಿ ವಿವಿಧ ಸಂಘಗಳಿದ್ದು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜೀವನಕ್ಕಾಗಿ ಶಿಕ್ಷಣವನ್ನು ನೀಡುತ್ತಿದೆ. ಮಕ್ಕಳು ತಮಗೆ ಸಿಕ್ಕ…

Read More