Author: admin
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ, ಕುಂದಾಪುರವು ಒಂದರ ನಂತರ ಒಂದು ಅದ್ಭುತ ಸಾಧನೆ ಮಾಡುತ್ತ ಹೊಸ ಶಕೆಯನ್ನು ನಿರಂತರ ಮಾಡುತ್ತಾ ಬಂದಿರುವ ಗ್ರಾಮೀಣ ಭಾಗದ ಹೆಗ್ಗಳಿಕೆಯ ವಿದ್ಯಾಸಂಸ್ಥೆಯಾಗಿದೆ. ಈ ವಿದ್ಯಾಸಂಸ್ಥೆಯು ‘ಜೆಇಇ’ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಾಷ್ಟ್ರವೇ ಹೆಮ್ಮೆಯಿಂದ ಗುರುತಿಸಿದ ಸಂಸ್ಥೆ, ‘ನೀಟ್’ನಲ್ಲಿಯೂ ಸಹ ಈಡೀ ರಾಜ್ಯವೇ ಗುರುತಿಸಿದ್ದು ಮಾತ್ರವಲ್ಲದೇ 35 ವಿದ್ಯಾರ್ಥಿಗಳು ಮೆಡಿಕಲ್‍ನಲ್ಲಿ ಉಚಿತ ಸೀಟ್‍ನನ್ನು ಪಡೆದಿರುವ ವಿದ್ಯಾಸಂಸ್ಥೆ, ಕರ್ನಾಟಕ ಬೋರ್ಡ್ ಪರೀಕ್ಷೆಯಲ್ಲಿ 13 ರ್ಯಾಂಕ್‍ಗಳನ್ನು ಗಳಿಸಿ ರಾಜ್ಯದ ಎಲ್ಲಾ ಜನತೆಯು ಎಕ್ಸಲೆಂಟ್ ಸಾಧನೆಯತ್ತ ನಿಬ್ಬೆರಗಾಗುವಂತೆ ಮಾಡಿದ ವಿದ್ಯಾಸಂಸ್ಥೆ, ಅಷ್ಟೆ ಅಲ್ಲದೇ ವಾಣಿಜ್ಯ ವಿಭಾಗದಲ್ಲಿಯೂ ‘ಸಿಎ’, ‘ಸಿಎಸ್’ ಎನ್ನುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ದೇಶದಲ್ಲೇ ಅತ್ಯಧಿಕ 31.58% ಉತ್ತೀರ್ಣತೆಯನ್ನು ಗಳಿಸಿ, ಪ್ರಥಮ ಹಂತದಲ್ಲಿಯೇ ಉತ್ತೀರ್ಣಗೊಂಡ ಹೆಗ್ಗಳಿಕೆಯ ಸಂಸ್ಥೆಯಾಗಿ ಈಡೀ ಶಿಕ್ಷಣವಲಯದಲ್ಲಿಯೇ ಹೊಸ ಶೈಕ್ಷಣಿಕ ಅಲೆಯನ್ನು ಸೃಷ್ಟಿಸಿದ ಒಂದು ವಿದ್ಯಾಸಂಸ್ಥೆಯಾಗಿದೆ. ಕೇವಲ ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಗುರುತಿಸಿಕೊಂಡು ಬಂದಿರುವುದು ಮಾತ್ರವಲ್ಲದೇ ಕ್ರೀಡಾಕ್ಷೇತ್ರದಲ್ಲಿ ಒಂದರ ಮೇಲೆ ಒಂದು ಸಾಧನೆಯನ್ನು ಮಾಡುತ್ತಾ ಬಂದಿರುವುದು ಗಮನಾರ್ಹ. ವಾಲಿಬಾಲ್, ಪುಟ್ಬಾಲ್,…
ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿಸೆಂಬರ್ 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷರು ಹಾಗೂ ಸಹ ಸಂಸ್ಥಾಪಕರೂ ಆಗಿರುವ ಡಾ. ತೇಜಸ್ವಿನಿ ಅನಂತಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ, ಕಾಪು ವಿಧನಾಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ.ಗ್ರೂಪ್ ನ ಆಡಳಿತ ನಿರ್ದೇಶಕರಾದ ಗೌರವ್ ಪಿ ಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದು ಎಂ.ಆರ್.ಜಿ.ಗ್ರೂಪ್ ಛೇರ್ಮನ್ ಡಾ| ಕೆ.ಪ್ರಕಾಶ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಈ ವರ್ಷ ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗುತ್ತಿದೆ. ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ, ಅವಶ್ಯ…
ಬಂಟರ ಯಾನೆ ನಾಡವರ ಮಾತೃ ಸಂಘ ಪುತ್ತೂರು ತಾಲೂಕು ಸಮಿತಿಯಿಂದ ಪುತ್ತೂರು ಬಂಟರ ಸಂಘದ ಅಧ್ಯಕ್ಷ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ 60ನೇ ಹುಟ್ಟುಹಬ್ಬ ಆಚರಣೆ ಮತ್ತು ಚಾವಡಿ ಸನ್ಮಾನ ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದ ಬಂಟರ ಚಾವಡಿಯಲ್ಲಿ ಡಿಸೆಂಬರ್ 21ರಂದು ಜರಗಿತು. ಕಾವು ಹೇಮನಾಥ ಶೆಟ್ಟಿಯವರನ್ನು ಬಂಟರ ಯಾನೆ ನಾಡವರ ಮಾತೃ ಸಂಘ ಪುತ್ತೂರು ತಾಲೂಕು ಸಮಿತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಹೇಮನಾಥ ಶೆಟ್ಟಿಯವರು ಕೇಕ್ ಕತ್ತರಿಸಿದರು. ಬಳಿಕ ಮಾತನಾಡಿದ ಹೇಮನಾಥ ಶೆಟ್ಟಿಯವರು ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈಯವರ ಆಶಯದಂತೆ ಬಂಟರ ಭವನದ ಬಂಟೆರೆ ಚಾವಡಿಯ ಪ್ರಥಮ ಕಾರ್ಯಕ್ರಮದಲ್ಲಿ ನನ್ನ ಹುಟ್ಟುಹಬ್ಬದ ಆಚರಣೆ ಮತ್ತು ಸನ್ಮಾನ ದೊರೆತಿರುವುದು ತುಂಬಾ ಸಂತೋಷ ತಂದಿದೆ. ಮಾತೃ ಸಂಘದ ಪುತ್ತೂರು ಸಂಚಾಲಕರಾಗಿರುವ ಕುಂಬ್ರ ದುರ್ಗಾಪ್ರಸಾದ್ ರೈಯವರನ್ನು ನಾನು ಬಹಳ ವರ್ಷದಿಂದ ಬಲ್ಲೆ. ಅವರ ಯೋಚನೆ ಮತ್ತು ಯೋಜನೆ…
ಕುಂದಾಪುರ ತಾಲೂಕು ಯುವ ಬಂಟರ ಸಂಘದಿಂದ 90 ರ ಸಂಭ್ರಮದಲ್ಲಿರುವ ನಾಡಿನ ಗಣ್ಯಮಾನ್ಯರಾದ ಬಸ್ರೂರು ಅಪ್ಪಣ್ಣ ಹೆಗ್ಡೆಯವರನ್ನು ಅವರ ಸ್ವಗ್ರಹದಲ್ಲಿ ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲ ದಯಾನಂದ ಶೆಟ್ಟಿ, ಸಂಘದ ಪೋಷಕರಾದ ವಿಜಯ ಶೆಟ್ಟಿ ಸಟ್ಟಾಡಿ ಮತ್ತು ಸಂಘದ ಸ್ಥಾಪಕಾಧ್ಯಕ್ಷರು ಮತ್ತು ದಶಮ ಸಂಭ್ರಮದ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರು ಸನ್ಮಾನಿಸಿ ಗೌರವಿಸಿದರು. ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಸುಕೇಶ ಶೆಟ್ಟಿ ಹೊಸ್ಮಠ, ಸುನಿಲ್ ಶೆಟ್ಟಿ ಹೇರಿಕುದ್ರು, ಕೋಶಾಧಿಕಾರಿ ಭರತ್ ಶೆಟ್ಟಿ ಜಾಂಬೂರು, ಉಪಾಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಸುರೇಶ ಶೆಟ್ಟಿ ಕಾರಿಬೈಲ್ ಜೆಡ್ಡು, ಸುಕುಮಾರ ಶೆಟ್ಟಿ ಹೇರಿಕುದ್ರು, ದಿನಕರ ಶೆಟ್ಟಿ ಹರ್ಕಾಡಿ, ಸುರೇಂದ್ರ ಶೆಟ್ಟಿ ಗುಳ್ವಾಡಿ, ರೋಷನ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷರಾದ ಡಾ| ಚೇತನ ಕುಮಾರ್ ಶೆಟ್ಟಿ ಕೊವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದಶಮ ಸಂಭ್ರಮದ ಕೋಶಾಧಿಕಾರಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ…
ವಿದ್ಯಾಗಿರಿ: ಪ್ರಾಚೀನ ಮತ್ತು ಆಧುನಿಕ ವೈದ್ಯಕೀಯ ಪದ್ಧತಿಗಳಲ್ಲಿ ಹೃದಯಕ್ಕೆ ಕೇಂದ್ರ ಸ್ಥಾನವನ್ನು ನೀಡಲಾಗಿದೆ ಎಂದು ಆಳ್ವಾಸ್ ಫಾರ್ಮಾಸಿ ಕಾಲೇಜಿನ ಪ್ರಾಂಶುಪಾಲ ಡಾ. ಎಮ್. ಮಂಜುನಾಥ್ ಶೆಟ್ಟಿ ಹೇಳಿದರು. ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ವತಿಯಿಂದ ಶನಿವಾರ ನಡೆದ ‘ಜ್ಞಾನಚಕ್ಷು-2024′- ‘ಈಸಿಜಿಯ ಮೂಲಭೂತ ಅಂಶಗಳು ಹಾಗೂ ಅದರ ವ್ಯಾಖ್ಯಾನಗಳು’ ವಿಷಯದ ರಾಷ್ಟ್ರ ಮಟ್ಟದ ಕಾರ್ಯಗಾರದಲ್ಲಿ ಮಾತನಾಡಿದರು. ಆಯುರ್ವೇದದಲ್ಲಿ ಹೃದಯವನ್ನು ಪ್ರಜ್ಞೆ ಮತ್ತು ಜೀವಿಯ ಪ್ರಮುಖ ಅಂಗವೆಂದು ಪರಿಗಣಿಸಲಾಗಿದೆ. ಆಯುರ್ವೇದ ತಜ್ಞರಿಗೆ ಹೃದಯದ ಬಗ್ಗೆ ಹೆಚ್ಚಿನ ಜ್ಞಾನಗಳಿಸಲು ಎಲೆಕ್ಟ್ರೋಕಾರ್ಡಿಯೋಗ್ರಫಿ ಅಥವಾ ಇಸಿಜಿ ಉಪಯುಕ್ತವಾಗಿದೆ. 1901ರಲ್ಲಿ ಡಚ್‌ನ ವಿಲ್ಲೆಮ್ ಐಂಥೋವನ್ ಇಸಿಜಿಯನ್ನು ಕಂಡು ಹಿಡಿದರು. ಅವರ ಈ ಆವಿಷ್ಕಾರಕ್ಕಾಗಿ 1924ರಲ್ಲಿ ನೊಬೆಲ್ ಪ್ರಶಸ್ತಿಯು ಲಭಿಸಿತು. ಈ ಕಾರ್ಯಾಗಾರವು ಇಸಿಜಿಯ ತಾಂತ್ರಿಕ ಅಂಶಗಳನ್ನು ತಿಳಿದುಕೊಳ್ಳುವುದರ ಜೊತೆಗೆ ಆಯುರ್ವೇದ ವೈದ್ಯರಿಗೆ ತಮ್ಮ ವೃತ್ತಿಯಲ್ಲಿ ನಾವೀನ್ಯತೆಯನ್ನು ಪಡೆಯಲು ಸಹಕಾರಿಯಾಗಿದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಡಾ ವಿನಯ್ ಆಳ್ವ ಮಾತನಾಡಿ, ನಮ್ಮ ದೃಷ್ಟಿಕೋನ ಬದಲಾಯಿಸಿಕೊಂಡರೆ ಎಲ್ಲವೂ ವಿಶೇಷವಾಗಿ ಕಾಣಿಸುತ್ತದೆ.…
ಮೂಡುಬಿದಿರೆ: ಚೊಚ್ಚಲ ವಿಶ್ವ ಧ್ಯಾನ ದಿನದ ಪ್ರಯುಕ್ತ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನವತಿಯಿಂದ ಧ್ಯಾನ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ಬಿ ತಲ್ಲಿಕೇರಿ ಹಾಗೂ ಗೌರವ ಅತಿಥಿಯಾಗಿ ಖ್ಯಾತ ಯೋಗ ಮತ್ತು ಜಲಚಿಕಿತ್ಸಕ ಡಾ ಗುಲಾಬ್ ರೈ ತೆವಾನಿ ಮತ್ತು ರಿಸರ್ಚ್ ಆಫೀಸರ್ ಡಾ ನಿತೇಶ್ ಆಗಮಿಸಿದ್ದರು. ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಡಾ ವನಿತಾ ಎಸ್ ಶೆಟ್ಟಿ ಹಾಗೂ ಕಾಲೇಜಿನ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ೨೦೦ ಕ್ಕೂ ಅಧಿಕ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಳ್ವಾಸ್ ಆರೋಗ್ಯಧಾಮದ ಸಾಧಕರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಭಟ್ಕರ್ ಸಾಕ್ಷಿ ಸಂಜು ನಿರೂಪಿಸಿದರು.
ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ತೊಂಬತ್ತು ವರ್ಷಗಳ ಅರ್ಥಪೂರ್ಣ ಹಾಗೂ ದಣಿವರಿಯದ ಜೀವನ ಪಯಣದ ಯಶೋಗಾಥೆಯನ್ನು ಸಂಭ್ರಮಿಸುವ ಸಲುವಾಗಿ ಅವರ ತೊಂಬತ್ತನೇ ಜನ್ಮ ದಿನಾಚರಣೆಯನ್ನು ಅವರ ಆಪ್ತರು, ಅಭಿಮಾನಿಗಳು ಸಾರ್ವಜನಿಕ ರೀತಿಯಲ್ಲಿ ಆಚರಿಸುವ ಉದ್ಧೇಶದಿಂದ ಇದೇ ಬರುವ ಡಿಸೆಂಬರ್ 24 ಮಂಗಳವಾರ ಸಂಜೆ 5 ಗಂಟೆಗೆ ಗುರುಕುಲ ಶಿಕ್ಷಣ ಸಮುಚ್ಚಯ ವಕ್ವಾಡಿ ಇಲ್ಲಿ ಬಿ.ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ವತಿಯಿಂದ ಆಯೋಜಿಸಲಾಗಿದೆ. ಆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಡಾ| ವಿರೇಂದ್ರ ಹೆಗ್ಡೆಯವರು ಕಾರ್ಯಕ್ರಮ ಉದ್ಘಾಟಿಸಿ, ಬಸ್ರೂರು ಅಪ್ಪಣ್ಣ ಹೆಗ್ಡೆ ಕುರಿತಂತೆ ಅಭಿನಂದನೆಯ ನುಡಿಗಳನ್ನಾಡಲಿದ್ದಾರೆ. ರಸೋಲ್ಲಾಸ ಕಾರ್ಯಕ್ರಮದಲ್ಲಿ ಅಪ್ಪಣ್ಣ ಹೆಗ್ಡೆ ಜತೆಗಿನ ಸಂವಾದ, ಅವರ ಜೀವನ ಯಾತ್ರೆಯ ರಸ ನಿಮಿಷಗಳ ಕುರಿತಂತೆ ಅವರ ಅಭಿಮಾನಿಗಳು ಅಪ್ಪಣ್ಣ ಹೆಗ್ಡೆ ಅವರನ್ನು ಮಾತನಾಡಿಸಲಿದ್ದಾರೆ. ಡಾ. ಎಂ ಮೋಹನ ಆಳ್ವರವರು ಅಧ್ಯಕ್ಷ ಸ್ಥಾನದಲ್ಲಿ ಉಪಸ್ಥಿತರಿರುವ ಕಾರ್ಯಕ್ರಮದಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆ ಅವರಿಂದ ಬಸ್ರೂರು ಅಪ್ಪಣ್ಣ ಹೆಗ್ಡೆ ಶಿಕ್ಷಣ ಪ್ರಶಸ್ತಿಯನ್ನು ಡಾ|ಬಿ.ಎ. ವಿವೇಕ ರೈಯವರು ಸ್ವೀಕರಿಸಲಿದ್ದಾರೆ. ಅಪ್ಪಣ್ಣ ಹೆಗ್ಡೆ…
ಡಿಸೆಂಬರ್ 21 ರಂದು ಪುತ್ತೂರಿಗೆ ಸರಕಾರಿ ಕಾರ್ಯಕ್ರಮದ ಪ್ರಯುಕ್ತ ಆಗಮಿಸಿದ ಕರ್ನಾಟಕ ಸರಕಾರದ ಆರೋಗ್ಯ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಧ್ಯಾಹ್ನದ ಭೋಜನಕ್ಕಾಗಿ ಪ್ರವಾಸಿ ಬಂಗಲೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಚಾಲಕ ಕಾವು ಹೇಮನಾಥ್ ಶೆಟ್ಟಿಯವರಿಗೆ ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಪೇಟ ತೊಡಿಸಿ, ಹೂಗುಚ್ಚ ನೀಡಿ 60 ನೇ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ಕೋರಿದರು. ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಇಸಾಕ್ ಸಾಲ್ಮರ, ರಂಜಿತ್ ಬಂಗೇರ ಮತ್ತಿತರರು ಜೊತೆಗಿದ್ದರು.
ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಅವರ 35 ವರುಷಗಳ ಯಕ್ಷಯಾನದ ಸಂಭ್ರಮಾಚರಣೆ “ಯಕ್ಷದ್ಯುತಿ”ಯ ಆಮಂತ್ರಣ ಪತ್ರಿಕೆಯನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸುರತ್ಕಲ್ ನಲ್ಲಿ ಶಕುಂತಲಾ ರಮಾನಂದ ಭಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಾರಿಂಜೇಶ್ವರ ದೇವಸ್ಥಾನ ಕಾರಿಂಜದ ಅರ್ಚಕರಾದ ಮಿಥುನ್ ರಾಜ್ ನಾವಡ, ಯಕ್ಷಪೂರ್ಣಿಮಾ ಬಿರುದಾಂಕಿತೆ ಪೂರ್ಣಿಮಾ ಯತೀಶ್ ರೈ, ಯಕ್ಷದ್ಯುತಿ ಅಭಿನಂದನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಭಟ್, ಉಪಾಧ್ಯಕ್ಷರುಗಳಾದ ಲೀಲಾಧರ್ ಶೆಟ್ಟಿ ಕಟ್ಲ, ಗಂಗಾಧರ ಪೂಜಾರಿ ಚೇಳ್ಯಾರು, ಸಂಚಾಲಕರಾದ ಸಾಯಿಸುಮಾ ನಾವಡ, ಕಾರ್ಯದರ್ಶಿ ಅನಂತಮೂರ್ತಿ, ಕೋಶಾಧಿಕಾರಿ ಪೂರ್ಣಿಮಾ ಶಾಸ್ತ್ರಿ, ಜೊತೆ ಕಾರ್ಯದರ್ಶಿಗಳಾದ ಸಹನಾ ರಾಜೇಶ್ ರೈ, ರೇವತಿ ನವೀನ್ ಮೊದಲಾದವರು ಉಪಸ್ಥಿತರಿದ್ದರು.
ಕರಾವಳಿಗರಿಗೆ ತಮ್ಮ ಜೀವನ ಶೈಲಿಯನ್ನು ಪ್ರಪಂಚದ ಎಲ್ಲಾ ಭಾಗಕ್ಕೂ ಕೊಂಡೊಯ್ಯುವ ಶಕ್ತಿ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ ಅಭಿಪ್ರಾಯಪಟ್ಟರು. ನಯನ ಸಭಾಂಗಣದಲ್ಲಿ ದಕ್ಷಿಣ ಕನ್ನಡಿಗರ ಸಂಘದಿಂದ ಭಾನುವಾರ ನಡೆದ ‘ಕರಾವಳಿ ರತ್ನ’ ಪ್ರಶಸ್ತಿ ಮತ್ತು ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರಾವಳಿಗರು ವಿವಿಧ ಉದ್ಯಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದಲ್ಲದೇ, ಪ್ರತೀ ಕ್ಷೇತ್ರದಲ್ಲಿಯೂ ತಮ್ಮದೇ ಛಾಪು ಮೂಡಿಸುತ್ತಾರೆ. ಸಮಾಜದ ಸಾಮರಸ್ಯಕ್ಕೆ ಹಾಗೂ ಒಗ್ಗಟ್ಟಿಗೆ ಸದಾ ಬೆಂಬಲವಾಗಿ ನಿಂತು, ವಿವಿಧ ಸಂಘ ಸಂಸ್ಥೆಗಳನ್ನು ಸ್ಥಾಪಿಸಿ ಸಮಾಜಕ್ಕೆ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ. ಈ ಮೂಲಕ ಕರಾವಳಿಯು ಕೇವಲ ಸಮೃದ್ಧವಾದ ಪ್ರದೇಶ ಮಾತ್ರವಲ್ಲದೇ, ಅಲ್ಲಿನವರ ಮನಸ್ಸು ಪರಿಶುದ್ಧವಾಗಿದೆ ಎಂದು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು. ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ ಮಾತನಾಡಿ, ಸಮಾಜ ಮುಖಿ ಕಾರ್ಯಗಳನ್ನು ಅಭಿನಂದಿಸುವ ಜವಾಬ್ದಾರಿ ಸಮಾಜದ್ದು. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡಿಗರ ಸಂಘವು ಕಾರ್ಯೋನ್ಮುಖವಾಗಿದೆ. ಸಮಾಜದಲ್ಲಿನ ಉತ್ತಮ ಕಾರ್ಯವನ್ನು ಅಭಿನಂದಿಸುವ ಮನಸ್ಥಿತಿ ರೂಢಿಸಿಕೊಳ್ಳಬೇಕು…