Author: admin
ಮುಂಬಯಿಯ ಹೋಟೆಲು ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಹರೀಶ್ ಶೆಟ್ಟಿ ಪಡುಕುಡೂರು ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ.ಇವರು ಈ ಹಿಂದೆ ಪೋಷಕ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಮುಂದೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಲಯನ್ಸ್ ಜಿಲ್ಲೆ 317 ಡಿ ಪ್ರಾಂತ್ಯ 8 ವಲಯ 2ರ ಅಧ್ಯಕ್ಷರಾಗಿ ಚಂದ್ರಶೇಖರ ರೈ ನಂಜೆ ಅವರನ್ನು ಲಯನ್ಸ್ ಜಿಲ್ಲಾ ಗವರ್ನರ್ ಕುಡುಪಿ ಅರವಿಂದ ಶೆಣೈ ಅವರು ನಿಯಕ್ತಿಗೊಳಿಸಿದ್ದಾರೆ. ಸುಳ್ಯ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರು, ಸುಳ್ಯ ಪಯಸ್ಸಿನಿ ಸೀನಿಯರ್ ಛೇಂಬರ್ ನ ನಿಕಟ ಪೂರ್ವ ಅಧ್ಯಕ್ಷರು, ಸುಳ್ಯ ಪಯಸ್ಸಿನಿ ಜೀಸಿಸ್ ನ ಪೂರ್ವಾಧ್ಯಕ್ಷರು ಹಾಗೂ ಇತರ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು ಸುಳ್ಯ ಡಿಜಿ ಪ್ಲಸ್ ಮಾಲಕರು. ಲಯನ್ಸ್ ಕ್ಲಬ್ ಸುಳ್ಯ ಲಯನ್ಸ್ ಕ್ಲಬ್ ಸಂಪಾಜೆ ಹಾಗೂ ಲಯನ್ಸ್ ಕ್ಲಬ್ ಗುತ್ತಿಗಾರು ಇವರ ವ್ಯಾಪ್ತಿಯಲ್ಲಿ ಒಳಗೊಂಡಿರುತ್ತದೆ. ಚಂದ್ರಶೇಖರ ರೈ ನಂಜೆ ಅವರು ಪುತ್ತೂರು ತಾಲೂಕಿನ ಕುರಿಯ ಏಳ್ನಾಡು ಗುತ್ತು ನಂಜೆ ಮನೆತನದವರು. ಪ್ರಸ್ತುತ ಬೆಳ್ಳಾರೆಯಲ್ಲಿ ವಾಸ್ತವ್ಯವಿದ್ದಾರೆ.
ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ವತಿಯಿಂದ 2025-26ನೇ ವರ್ಷದ ‘ಪ್ರತಿಭಾ ಪುರಸ್ಕಾರ’ ಯೋಜನೆಗೆ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೈಂದೂರು ವಲಯದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 90 ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಸಿ.ಬಿ.ಎಸ್.ಸಿ. ಅಥವಾ ಐಸಿಎಸ್ಸಿ ಮಂಡಳಿ ಪರೀಕ್ಷೆಯಲ್ಲಿ ಶೇಕಡ 90 ಅಂಕ ಗಳಿಸಿದ ಬಂಟ ಸಮುದಾಯದ ವಿದ್ಯಾರ್ಥಿಗಳೂ ಸಹ ಅರ್ಜಿ ಸಲ್ಲಿಸಬಹುದು. ಪ್ರಥಮ ವರ್ಷದ ಪದವಿ ಪೂರ್ವ, ಪದವಿ ಅಥವಾ ವೃತ್ತಿಪರ ಶಿಕ್ಷಣ ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. www.bansbyndoor.com ಜಾಲ ತಾಣದಲ್ಲಿ prathiba puraskara-2025 ಲಿಂಕ್ Olympics ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಎನ್. ವಸಂತ ಹೆಗ್ಡೆ (ಸಂಚಾಲಕರು) 6361121382, 9481300846 ಇವರನ್ನು ಸಂಪರ್ಕಿಸಬಹುದು ಎಂದು ಅಧ್ಯಕ್ಷ ಸಾಲ್ಗದ್ದೆ ಶಶಿಧರ ಶೆಟ್ಟಿ ತಿಳಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಸಂಘಟನಾ ಪರ್ವ ದೇಶದಾದ್ಯಂತ ನಡೆಯುತ್ತಿದ್ದು, ಇದರ ಮುಂದುವರೆದ ಭಾಗವಾಗಿ ಕರ್ನಾಟಕ ಬಿಜೆಪಿಯು 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. ಈ ಕುರಿತು ಅಧಿಕೃತ ಪ್ರಕಟಣೆಯನ್ನು ಚುನಾವಣಾಧಿಕಾರಿ ಕ್ಯಾ. ಗಣೇಶ್ ಕಾರ್ಣಿಕ್ ಅವರು ಹೊರಡಿಸಿದ್ದು ಅದರಂತೆ ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ. ಆಯ್ಕೆಯಾದ ಹತ್ತು ನೂತನ ಅಧ್ಯಕ್ಷರಿಗೆ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಭಿನಂದನೆ ಸಲ್ಲಿಸಿದ್ದಾರೆ.
ಮೂಡುಬಿದಿರೆ: ದಕ್ಷಿಣಕೊರಿಯಾದ ಗುಮಿಯಲ್ಲಿ ನಡೆದ 26ನೇ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಆಳ್ವಾಸ್ ಸ್ಪೋರ್ಟ್ಸ್ಕ್ಲಬ್ನ ಆರು ಕ್ರೀಡಾಪಟುಗಳ ಭಾಗವಹಿಸಿ 3 ಚಿನ್ನ ಹಾಗೂ 3 ಬೆಳ್ಳಿಯ ಪದಕದೊಂದಿಗೆ ಆರು ಪದಕಗಳನ್ನು ಪಡೆದಿದ್ದಾರೆ. ಸ್ನೇಹಎಸ್ – 4*100ಮೀ ರಿಲೇ (ಚಿನ್ನ), ಶುಭ ಬಿ – 4*400ಮೀ ರಿಲೇ (ಬೆಳ್ಳಿ) ಮತ್ತು 4*400 ಮಿಕ್ಸ್ಡ್ರಿಲೇ (ಚಿನ್ನ), ಸಚಿನ್ – ಜಾವೆಲಿನ್ ತ್ರೋ (ಬೆಳ್ಳಿ), ಸಂತೋಷ್ಕುಮಾರ್ – 4*400 ಮಿಕ್ಸ್ಡ್ರಿಲೇ (ಚಿನ್ನ), ರಿನ್ಸ್ಜೋಸೆಫ್ – 4*400 ರಿಲೇ (ಬೆಳ್ಳಿ), ಪ್ರವೀಣ್ – ತ್ರಿವಿಧ ಜಿಗಿತದಲ್ಲಿ (ಬೆಳ್ಳಿ) ಪದಕವನ್ನು ಪಡೆದಿದ್ದಾರೆ. ಈ ಆರು ಕ್ರೀಡಾಪಟುಗಳು ಆಳ್ವಾಸ್ ಸ್ಪೋರ್ಟ್ಸ್ಕ್ಲಬ್ನ ದತ್ತು ಸ್ವೀಕಾರದ ಕ್ರೀಡಾಪಟುಗಳಾಗಿದ್ದು ಹಿಂದೆ ನಡೆದಿರುವಂತಹ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ, ಪದಕ ವಿಜೇತರಾಗಿ, ಸಂಸ್ಥೆಗೆ ಕೀರ್ತಿತಂದಿರುತ್ತಾರೆ. ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-2025 ಜರ್ಮನಿಯ ರಿಯಾನ್-ರೋಹೂರ್ನಲ್ಲಿ ಜುಲೈ 16ರಿಂದ 27ರ ವರೆಗೆ ನಡೆಯಲಿರುವ ವರ್ಲ್ಡ್ಯುನಿವರ್ಸಿಟಿ ಗೇಮ್ಸ್ 2025(ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-2025)ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾದತ್ತು ಯೋಜನೆಯ 11…
ಅಬುಧಾಬಿ ಹಿಂದೂ ಮಂದಿರದಲ್ಲಿ ಶ್ರೀ ಬಿ. ಕೆ. ಗಣೇಶ್ ರೈಯವರಿಗೆ “ಸಂಸ್ಕೃತಿ ಶಿಲ್ಪಕಲಾ ರತ್ನ ಪ್ರಶಸ್ತಿ” ಪ್ರದಾನ
ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಮೊದಲಬಾರಿಗೆ ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿ ಬಿ.ಎ.ಪಿ.ಎಸ್. ಹಿಂದೂ ದೇವಾಲಯದಲ್ಲಿ ಮೇ 31ಮೇ 2025 ರಂದು ಗುರುವಂದನಾ ಸಂಸ್ಕೃತಿ ಸಿಂಚನ ಕಾರ್ಯಕ್ರಮ ನಡೆಯಿತು. ಸನಾತನ ಸಾಂಸ್ಕೃತಿ, ಕಲಾ ಆಧ್ಯಾತ್ಮಿಕ, ಗುರು ಪರಂಪರೆಯ ಕಾರ್ಯಕ್ರಮಕ್ಕೆ ಭಾರತದ ವಿವಿಧ ಭಾಗಗಳಿಂದ ಆಗಮಿಸಿದ್ದ ಪರಮ ಪೂಜ್ಯ ಮಠಾಧಿಪತಿಗಳು ಹಾಗೂ ಗಣ್ಯಾತಿ ಗಣ್ಯರು, ವಿವಿಧ ಕ್ಷೇತ್ರಗಳ ಸಾಧಕರುಗಳನ್ನು ಸುಮಂಗಲೆಯರಿಂದ ಪೂರ್ಣ ಕುಂಭ, ವೇದಘೋಷ, ಪಂಚವಾದ್ಯಗಳೊಂದಿಗೆ ಬಿ.ಎ.ಪಿ.ಎಸ್. ಹಿಂದೂ ಮಂದಿರದ ಅವರಣದಲ್ಲಿರುವ ಪ್ರಮುಖ್ ಸಭಾಂಗಣಕ್ಕೆ ಮೆರವಣಿಗೆಯ ಮೂಲಕ ಬರ ಮಾಡಿಕೊಳ್ಳಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರುಗಳನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಬುಧಾಬಿ ಹಿಂದೂ ಮಂದಿರದ ಮುಖ್ಯಸ್ಥರು ಪರಮ ಪೂಜ್ಯ ಶ್ರೀ ಬ್ರಹ್ಮವಿಹಾರಿ ದಾಸ್ ಸ್ವಾಮೀಜಿಯವರು, ಬೆಳಗಾವಿ ನಿಡಸೊಸಿ ಶ್ರೀ ಜಗದ್ಗುರು ದುರುದುಂಡೆಶ್ವರ ಮಠದ ಸ್ವಾಮಿಜಿ ಶ್ರೀ ಶ್ರೀ ಶ್ರೀ ನಿಜಲಿಂಗೇಶ್ವರ ಸ್ವಾಮಿಜಿ ಮತ್ತು ಗೋವಾ ರಾಜ್ಯದ ಶ್ರೀ ದತ್ತ ಪದ್ಮನಾಭ ಪೀಠದ ಪದ್ಮಶ್ರೀ ಪುರಸ್ಕೃತ ಪೂಜ್ಯ ಶ್ರೀ ಶ್ರೀ ಸದ್ಗುರು ಬ್ರಹ್ಮೇಶನಂದನಾಚಾರ್ಯ ಸ್ವಾಮಿಜಿ, ಸ್ವಾಮಿಜಿ…
ನಾವೆಲ್ಲರೂ ಪ್ರಕೃತಿಯ ಆರಾಧಕರು. ನಮಗರಿವಿಲ್ಲದೇ ಪ್ರಕೃತಿಯಿಂದ ಸಿಗುವ ಗಾಳಿ, ನೀರು, ಮರ, ಬೆಳಕು, ಮಣ್ಣಿನ ಆರಾಧಕರಾಗಿ ಪ್ರಕೃತಿಯನ್ನು ನಾವು ಪೂಜಿಸುತ್ತೇವೆ. ಜೀವ ಪೋಷಕ ಜೀವ ರಕ್ಷಕ ಇದೆಲ್ಲದರ ಮಹತ್ವ ಇಂದಿಗೂ ಮುಂದೆಯೂ ಎಂದೆಂದಿಗೂ ಇದ್ದೆ ಇರುತ್ತದೆ. ಭೂಮಿಯಲ್ಲಿನ ತೇವಾಂಶ ಭರಿತ ಜಾಗವನ್ನು ರಕ್ಷಣೆ ಪೋಷಣೆ ನೀಡಿದರೆ ಅರಣ್ಯ ಸಂಪತ್ತು ಯತೇಚ್ಛವಾಗಿ ಬೆಳೆಯಲು ಸಾದ್ಯ. ಇದಕ್ಕೆ ಪ್ರಾಮಾಣಿಕ ಬದ್ದತೆ ಬೇಕು. ಪ್ರಕೃತಿ ರಕ್ಷಣೆ ಕೂಡಾ ಹಾಗೂ ದೇಶ ರಕ್ಷಣೆ ಕೂಡಾ ನಮ್ಮಿಂದಲೇ ಆಗಬೇಕು. ನಮ್ಮ ಬಂಟರ ಸಂಘದ ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿನಂದನ್ ಶೆಟ್ಟಿ ಮತ್ತು ಯುವ ವಿಭಾಗದ ಸದಸ್ಯರಿಂದ ಪ್ರಕೃತಿಯ ಸಾಮಾನ್ಯ ಚಿಂತನೆಯಿಂದ ಅರ್ಥ ಪೂರ್ಣವಾದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಪ್ರಕೃತಿಗೆ ಕೊಡುಗೆ ನೀಡಲು ಪ್ರತಿಯೊಬ್ಬರೂ ತಮ್ಮ ಶಕ್ತಿ ಮತ್ತು ಉದಾತ್ತ ಮನೋಭಾವದಿಂದ ಒಗ್ಗೂಡಿ ತಮ್ಮ ಕರ್ತವ್ಯವನ್ನು ಮಾಡಿ ತೋರಿಸಿದ್ದಾರೆ. ಭವಿಷ್ಯದ ಪೀಳಿಗೆಗೆ ಪ್ರಕೃತಿಯನ್ನು ಕಾಪಾಡುವ ಕಡೆಗೆ ನಮ್ಮ ಸಾಮೂಹಿಕ ಜವಾಬ್ದಾರಿಯನ್ನು ತೋರಿಸೋಣ. ವನ ಮಹೋತ್ಸವ ಎಂದರೆ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮ…
ಸಾಂಸ್ಕೃತಿಕ ನಗರಿ ಪುಣೆಯ ಕನ್ನಡಿಗರ ಹಿರಿಮೆಯ ಸಂಸ್ಥೆ 73ರ ಹರೆಯದ ಪುಣೆ ಕನ್ನಡ ಸಂಘವು ಶೈಕ್ಷಣಿಕವಾಗಿ, ಸಾಹಿತ್ಯಕವಾಗಿ, ಸಾಂಸ್ಕೃತಿಕವಾಗಿ ಕನ್ನಡ ಸೇವೆಗೈಯುತ್ತಾ ಕನ್ನಡ ಅಭಿಮಾನಿಗಳಿಗೆಲ್ಲರಿಗೂ ಮಾತೃ ಸಂಸ್ಥೆಯಾಗಿ ಬೆಳೆದು ನಿಂತಿದೆ. 1952 ರಲ್ಲಿ ಸ್ಥಾಪನೆಗೊಂಡ ಕನ್ನಡ ಸಂಘವು ಮೊದಲು ಕನ್ನಡ ಮಾಧ್ಯಮ ಶಾಲೆಯನ್ನು ಆರಂಭಿಸಿತ್ತು. ಬಳಿಕದ ದಿನಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದ್ದು, ಪ್ರಾಥಮಿಕ ಶಿಕ್ಷಣದಿಂದ ಉಚ್ಚ ಶಿಕ್ಷಣದವರೆಗೆ ಪ್ರಸ್ತುತ ಕನ್ನಡ ಸಂಘದ ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂಬತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. 500ಕ್ಕೂ ಹೆಚ್ಚು ಶಿಕ್ಷಕರು ಮತ್ತು ಶಿಕ್ಷಕೇತರ ಸಿಬಂದಿ ಸಂಸ್ಥೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳು : ನಗರದ ಬಾಣೇರ್, ಕೇತ್ಕರ್ ರೋಡ್, ಗಣೇಶ್ ನಗರ, ಲೋಹ್ ಗಾಂವ್ ನಲ್ಲಿ ಕ್ಯಾಂಪಸ್ ಗಳನ್ನು ಹೊಂದಿರುವ ಕನ್ನಡ ಸಂಘದ ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಗಳು ಪುಣೆಯ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲೊಂದಾಗಿ ಗುರುತಿಸಿಕೊಂಡಿರುವುದು ಸಂಘದ ಹೆಗ್ಗಳಿಕೆಯಾಗಿದೆ. ಸಾಹಿತ್ಯ ಕ್ಷೇತ್ರಕ್ಕೂ ಬಹಳಷ್ಟು ಕೊಡುಗೆ ನೀಡುತ್ತಿರುವ ಪುಣೆ ಕನ್ನಡ ಸಂಘವು…
ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕ ಇದರ ಪದಾಧಿಕಾರಿಗಳ ಸಭೆಯು ಅಧ್ಯಕ್ಷರಾದ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ ಇವರ ಅಧ್ಯಕ್ಷತೆಯಲ್ಲಿ ಬಿ.ಸಿ ರೋಡಿನ ಹೋಟೆಲ್ ರಂಗೋಲಿಯಲ್ಲಿ ಜರಗಿತು. ಮುಂದಿನ ಅವಧಿಗೆ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ, ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಪರಾರಿಗುತ್ತು, ಪ್ರಧಾನ ಕಾರ್ಯದರ್ಶಿಯಾಗಿ ಬಿ ದೇವದಾಸ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ಸಭೆಯಲ್ಲಿ ಜಗನ್ನಾಥ ಚೌಟ ಬದಿಗುಡ್ಡೆ, ಸದಾನಂದ ಶೆಟ್ಟಿ ರಂಗೋಲಿ, ಸಂಕಪ್ಪ ಶೆಟ್ಟಿ ಸಂಚಯಗಿರಿ, ಸೇಸಪ್ಪ ಮಾಸ್ಟರ್, ಸಂಜೀವ ಶೆಟ್ಟಿ ಬೋಳಂತೂರು, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಪ್ರಕಾಶ್ ಜಕ್ರಿಬೆಟ್ಟು, ದೇವದಾಸ್ ಶೆಟ್ಟಿ, ಮೋಹನ್ ದಾಸ್ ಕೊಟ್ಟಾರಿ, ಶಂಕರ ಶೆಟ್ಟಿ ಪರಾರಿಗುತ್ತು, ದಿವಾಕರ ಶೆಟ್ಟಿ ಪರಾರಿಗುತ್ತು, ಸತೀಶ್ ಶೆಟ್ಟಿ ಮೊಡಂಕಾಪು ಉಪಸ್ಥಿತರಿದ್ದರು.
ವಿದ್ಯಾಗಿರಿ: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ, ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವರ್ಷದ ಮೂರನೇ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಶಿಬಿರದ ಉದ್ಘಾಟನಾ ಕ್ರಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ, ಕಳೆದ ಬಾರಿ ವಿವಿಧ ಸಮುದಾಯಗಳ ಸಹಯೋಗದಲ್ಲಿ 9 ಉಚಿತ ನೇತ್ರ ತಪಾಸಣಾ ಶಿಬಿರಗಳನ್ನು ನಡೆಸಲಾಗಿತ್ತು. ಇದರಲ್ಲಿ 1478 ಜನರು ಪಾಲ್ಗೊಂಡು, 784 ಜನರಿಗೆ ಉಚಿತ ಕನ್ನಡಕ ಹಾಗೂ 109 ಜನರಿಗೆ ಶಸ್ತ್ರ ಚಿಕಿತ್ಸೆಯನ್ನು ಕೈಗೊಳ್ಳಲಾಗಿದೆ ಎಂದರು. ಜೂನ್ 16ಕ್ಕೆ ಮುಂದಿನ ಹಂತದ ಉಚಿತ ನೇತ್ರ ತಪಾಸಣಾ ಶಿಬಿರವು ನಡೆಯಲಿದೆ ಎಂದು ತಿಳಿಸಿದರು. ಈ ಬಾರಿಯ ಒಟ್ಟು ಮೂರು ಹಂತದ ಶಿಬಿರಗಳಲ್ಲಿ 348 ಮಂದಿ ಭಾಗಿಯಾಗಿ 178 ಜನರು ಉಚಿತ ಕನ್ನಡಕ ಪಡೆಯಲು ಹಾಗೂ 39 ಜನರು ಶಸ್ತç ಚಿಕಿತ್ಸೆಯನ್ನು ಪಡೆಯಲು ಹೆಸರು ನೋಂದಾಯಿಸಿಕೊ0ಡರು.ಕಾರ್ಯಕ್ರಮದಲ್ಲಿ…














