Author: admin
ಬಂಟರ ಸಂಘ ಸಿದ್ದಕಟ್ಟೆ ವಲಯ ಇದರ ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಎಲಿಯನಡಗೋಡು ಗ್ರಾಮದ ಕೊನೆರಬೆಟ್ಟು ಗುತ್ತುವಿನ ಗದ್ದೆಯಲ್ಲಿ ನಡೆಯಿತು. ಮೀನಾಕ್ಷಿ ರಘುರಾಮ ಶೆಟ್ಟಿ ಕೊನೆರಬೆಟ್ಟು ಮತ್ತು ಸಂಜೀವ ಶೆಟ್ಟಿ ಉಮ್ಮೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ಲೋಕೇಶ್ ಶೆಟ್ಟಿ ಕುಳ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ ಅಧ್ಯಕ್ಷತೆ ವಹಿಸಿದ್ದರು. ಸಂಘದ ಮಹಿಳಾ ವಿಭಾಗದ ಕಾರ್ಯದರ್ಶಿ ಸುಮಾ ಎನ್ ಶೆಟ್ಟಿ, ತಾಲೂಕು ಸಂಘದ ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಕುಳ, ತಾಲೂಕು ಕಾರ್ಯಕಾರಿ ಸಮಿತಿ ಸದಸ್ಯ ನವೀನ್ ಚಂದ್ರ ಶೆಟ್ಟಿ ಮುಂಡಾಜೆಗುತ್ತು, ಹಿರಿಯರಾದ ನಿತ್ಯಾನಂದ ಶೆಟ್ಟಿ, ಬೊಗರಬೆಟ್ಟು, ವಕೀಲ ಸುರೇಶ್ ಶೆಟ್ಟಿ ಸಿದ್ದಕಟ್ಟೆ, ಉಪಾಧ್ಯಕ್ಷ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಪ್ರಮುಖರಾದ ಶ್ರೀಧರ ಶೆಟ್ಟಿ, ಮಂದಾರತಿ ಶೆಟ್ಟಿ, ಅರುಣ ಸುರೇಶ್ ಶೆಟ್ಟಿ, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ ಶೆಟ್ಟಿ, ಪ್ರತಿಭಾ ಶೆಟ್ಟಿ ಬದ್ಯಾರು, ಅಶ್ವಿನಿ ಶೆಟ್ಟಿ, ಸಂತೋಷ್ ಶೆಟ್ಟಿ ಕೊನೆರಬೆಟ್ಟು, ಬಾಬು ಶೆಟ್ಟಿ ಆಸಾಯಿ, ರಾಜೇಶ್ ಶೆಟ್ಟಿ ಸಿದ್ದಕಟ್ಟೆ, ಹರಿಪ್ರಸಾದ್…
ರಾಷ್ಟ್ರೀಯತೆಯನ್ನೇ ಉಸಿರಾಗಿಸಿಕೊಂಡಿದ್ದ ಡಾ| ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ, ಬಲಿದಾನದಿಂದ ಬಿಜೆಪಿ ಕಾರ್ಯಕರ್ತರು ಪ್ರೇರಣೆ ಪಡೆಯಬೇಕು. ಡಾ| ಮುಖರ್ಜಿ ಕನಸು ಪ್ರಧಾನಿ ಮೋದಿ ಅವರಿಂದ ನನಸಾಗಿದೆ. ಕಾಟಾಚಾರದ ಬದಲು ಬದ್ಧತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಜನ ಸೇವೆ, ಜನ ಜಾಗೃತಿಯಲ್ಲಿ ತೊಡಗಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಭಾರತೀಯ ಜನಸಂಘದ ಸಂಸ್ಥಾಪಕ ಡಾ| ಶಾಮಪ್ರಸಾದ್ ಮುಖರ್ಜಿ ‘ಬಲಿದಾನ ದಿವಸ್’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಡಾ| ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ಡಾ| ಶಾಮಪ್ರಸಾದ್ ಮುಖರ್ಜಿ ಅವರ ತತ್ವಾದರ್ಶಗಳು ಮತ್ತು ಬಲಿದಾನದ ಕುರಿತು ಉಪನ್ಯಾಸ ನೀಡಿದ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ, ಇಂಗ್ಲೆಂಡ್ ನಲ್ಲಿ ಬ್ಯಾರಿಸ್ಟರ್ ಪದವಿ ಪಡೆದು ವಕೀಲಿ ವೃತ್ತಿ ನಡೆಸಿದ ಡಾ| ಮುಖರ್ಜಿ ಅವರು ದೇಶ ವಿಭಜನೆಗೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರಾಗಿದ್ದರೂ ಹಿಂದೂ ಮಹಾಸಭಾದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನೆಹರೂ…
ಸರಕಾರಿ ನೇಮಕಾತಿಗಳು, ಅದರಲ್ಲೂ ಅಗ್ನಿಪಥ್ ಮತ್ತು SSC GD ಸೇರಿದಂತೆ ಸಶಸ್ತ್ರ ಪಡೆಗಳಿಗೆ ತರಬೇತಿ ನೀಡುವ ಪ್ರತಿಷ್ಠಿತ ತರಬೇತಿ ಸಂಸ್ಥೆ ಭಾಗ್ಯೆಶ್ ರೈ ಮಾಲಕತ್ವದ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಸದ್ಯ SSC GD ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂಬರುವ ದೈಹಿಕ ಸದೃಢತೆಯ ಪರೀಕ್ಷೆಗೆ (physical fitness) ತಯಾರಾಗುತ್ತಿರುವವರಿಗೆ ಮತ್ತು ಅಗ್ನಿಪಥ್ ನೇಮಕಾತಿಗೆ ಮೈದಾನ ತರಬೇತಿಯನ್ನು ಉಚಿತವಾಗಿ ನೀಡಲು ಉದ್ದೇಶಿಸಲಾಗಿದೆ. ಈಗಾಗಲೇ ಅತ್ಯುತ್ತಮ ತರಬೇತಿಯ ಮೂಲಕ 26 ಯುವಕರು ವಿವಿಧ ಸಶಸ್ತ್ರ ಪಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ನಡೆಯಲಿರುವ ಈ ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಲು ಪ್ರಕಟಣೆಯು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್ , ಎಪಿಎಂಸಿ ರೋಡ್, ಪುತ್ತೂರು. 9620468869 ; 9148935808
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ, ಪತ್ರಿಕೋದ್ಯಮದಲ್ಲಿ ಕಳೆದ 38 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಅವರು ಸುರತ್ಕಲ್ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 1987 ರಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ‘ಮುಂಗಾರು’ ಕನ್ನಡ ದಿನ ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಪಾದಾರ್ಪಣೆ ಮಾಡಿದ ಬಳಿಕ ಹೊಸಸಂಜೆ, ಕರಾವಳಿ ಮಿತ್ರ, ಕರಾವಳಿ ಮಾರುತದಲ್ಲಿ ಕಾರ್ಯ ನಿರ್ವಹಿಸಿದರು. ಪ್ರಸ್ತುತ ಜಯಕಿರಣ ಕನ್ನಡ ದೈನಿಕದಲ್ಲಿ ಕಳೆದ 20 ವರ್ಷಗಳಿಂದ ಪ್ರಧಾನ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಂಗ ಚಾವಡಿ ಎಂಬ ಸಾಂಸ್ಕೃತಿಕ, ಸಾಮಾಜಿಕ ಸಂಸ್ಥೆಯನ್ನು ಕಟ್ಟಿ ಹಲವಾರು ವರ್ಷಗಳಿಂದ ಕಲಾ ಸಾಧಕರಿಗೆ ಪ್ರಶಸ್ತಿ ನೀಡುತ್ತಾ ಬರುತ್ತಿರುವ ಜಗನ್ನಾಥ ಶೆಟ್ಟಿಯವರಿಗೆ 2008 ರಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, 2017 ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ. 2018 ರಲ್ಲಿ ಅಬುದಾಭಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಪ್ರಶಸ್ತಿ ಲಭಿಸಿದೆ. 2011 ರಲ್ಲಿ ಕರ್ನಾಟಕ ತುಳು ಸಾಹಿತ್ಯ…
ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.) ಪ್ರತಿ ವರ್ಷ ಆಯೋಜಿಸುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಪ್ರಯುಕ್ತ ಈ ಸಲ ಹಮ್ಮಿಕೊಂಡಿರುವ “ಕುಂದಾಪ್ರ ಕನ್ನಡ ಹಬ್ಬ-2025” ಜುಲೈ 26, 27ರಂದು ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್ನ ನಂದಿ ಲಿಂಕ್ ಗ್ರೌಂಡ್ನಲ್ಲಿ ನಡೆಯಲಿದೆ. ಈ ಸಲದ ಕಾರ್ಯಕ್ರಮದ ವಿವರ ನೀಡುವ ಸಲುವಾಗಿ ಮಾಗಡಿ ರಸ್ತೆ ಕೊಟ್ಟಿಗೆಪಾಳ್ಯದ ‘ಸುದೀಕ್ಷಾ ಕನ್ವೆನ್ಷನ್ ಸೆಂಟರ್’ನಲ್ಲಿ ಆಯೋಜಿಸಿದ್ದ ‘ವಾಲ್ಗ’ ಸಮಾರಂಭದಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ| ದೀಪಕ್ ಶೆಟ್ಟಿ ಮಾಹಿತಿ ನೀಡಿದರು. ಎಂದಿನಂತೆ ಈ ಸಲ ಕುಂದಾಪ್ರ ಕನ್ನಡ ಹಬ್ಬವನ್ನು ಹಲವು ವಿಶೇಷತೆಗಳೊಂದಿಗೆ ಆಚರಿಸಲಿದ್ದು, ಪ್ರತಿ ಸಲದಂತೆ ಭಾರಿ ಸಂಖ್ಯೆಯಲ್ಲಿ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಅದರಲ್ಲೂ ಈ ಬಾರಿ 5 ಸಾವಿರ ಜನಕ್ಕೆ ಆಸನ ವ್ಯವಸ್ಥೆ ಮಾಡಲಾಗಿದೆ. ಎರಡು ದಿನಗಳ ಈ ಸಂಭ್ರಮದಲ್ಲಿ ದಿನವಿಡೀ ಕಾರ್ಯಕ್ರಮಗಳಿದ್ದು, ಮತ್ತೊಂದು ಅದ್ಧೂರಿಗೆ ಈ ಸಮಾರಂಭ ಸಾಕ್ಷಿಯಾಗಲಿದೆ. ಎರಡೂ ದಿನ ಕುಂದಾಪುರ ಮೂಲದ ಒಬ್ಬೊಬ್ಬರು ಅತಿಗಣ್ಯ ಸಾಧಕರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು.…
ಯಕ್ಷಗಾನ ಕಲೆಯು ನಮ್ಮ ದೇಶದ ಬಹುದೊಡ್ಡ ಕಲೆಯಾಗಿದೆ. ಕರ್ನಾಟಕ, ಕೇರಳ ರಾಜ್ಯಗಳಲ್ಲಿ ಯಕ್ಷಗಾನವನ್ನು ನಾನು ವೀಕ್ಷಿಸಿದ್ದೇನೆ. ಈ ರಾಜ್ಯಗಳಲ್ಲಿ ಯಕ್ಷಗಾನ ಕಲೆ ಆರಾಧನಾ ಕಲೆಯಾಗಿದೆ. ಈ ಕಲೆಯು ಪ್ರಪಂಚದಾದ್ಯಂತ ಪಸರಿಸಿದೆ. ಈ ಪ್ರಾಚೀನ ಕಲೆಯನ್ನು ಹೊರ ರಾಜ್ಯ ಗೋವಾದಲ್ಲಿಯೂ ಮುಂದುವರೆಸಿಕೊಂಡು ಹೋಗುವ ಕಾರ್ಯವನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಭಾರತ ಪ್ರವಾಸೋದ್ಯಮ ಮತ್ತು ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ರಾಜ್ಯ ಸಚಿವ ಶ್ರೀಪಾದ ನಾಯ್ಕ ನುಡಿದರು. ಜೂನ್ 22ರಂದು ಭಾನುವಾರ ಸಂಜೆ ಪಣಜಿಯ ಮೆನೆಜಸ್ ಬ್ರಗಾಂಜ ಸಭಾಗೃಹದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೋವಾ ಘಟಕದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಯಕ್ಷಗಾನ ಕಲೆಯ ನಮ್ಮ ಸಂಸ್ಕೃತಿ ಈ ಕಲೆಯನ್ನು ಮುಂದಿನ ಪೀಳಿಗೆಗೆ ಈ ಸಂಸ್ಕಾರವನ್ನು ಮುಂದುವರಿಸಿಕೊಂಡು ಹೋಗಬೇಕಿದೆ. ಮಕ್ಕಳಿಗೆ ಶಿಕ್ಷಣದೊಂದಿಗೆ ಇಂತಹ ಕಲೆಯನ್ನು ಕೂಡಾ ಮುಂದುವರೆಸಿಕೊಂಡು ಹೋಗುವ ಅಗತ್ಯವಿದೆ. ನಾವು ಭಾರತದ ಬೇರೆ ಬೇರೆ ರಾಜ್ಯದವರಾಗಿದ್ದರೂ ಕೂಡ ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಎಲ್ಲಾ…
ಕೋಟೇಶ್ವರ ಯಡಾಡಿ ಮತ್ಯಾಡಿ ಸುಜ್ಞಾನ ಪದವಿಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಯೋಗ ದಿನಾಚರಣೆಗೆ ಚಾಲನೆ ನೀಡಿದ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಮಾತನಾಡುತ್ತಾ “ಜಾಗತಿಕ ಲೋಕಕ್ಕೆ ಯೋಗ ಭಾರತದ ಬಹುದೊಡ್ಡ ಕೊಡುಗೆಯಾಗಿದ್ದು ಹಲವು ರೋಗಗಳಿಗೂ ಉತ್ತಮವಾದ ಔಷಧವಾಗಿ ಪರಿಣಮಿಸಿದೆ. ಪ್ರಾಚೀನ ಕಾಲದಲ್ಲಿಯೇ ಋಷಿ ಮುನಿಗಳಿಂದ ಪರಿಚಿತವಾದ ಯೋಗ ಕಲೆಯು ಇಂದು ನಮ್ಮ ಭಾರತದ ಭವ್ಯ ಸಂಸ್ಕೃತಿಯ ಒಂದು ಅಂಗವಾಗಿದೆ. ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗವು ಉತ್ತಮ ಸಾಧನವಾಗಿದ್ದು, ಪ್ರತಿನಿತ್ಯ ಯೋಗ ಮಾಡುವುದರಿಂದ ಆರೋಗ್ಯವಂತರಾಗಿ ಉತ್ತಮ ವ್ಯಕ್ತಿತ್ವ ಹೊಂದಬಹುದು. ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಯೋಗ ಅಭ್ಯಾಸ ಮಾಡುವುದರಿಂದ ಕಲಿಕೆಯಲ್ಲಿ ಏಕಾಗ್ರತೆಯನ್ನು ಕಂಡುಕೊಂಡು ಸರ್ವಾಂಗೀಣ ಪ್ರಗತಿಗೆ ಸಹಾಯವಾಗುತ್ತದೆ. ಇಂದು ಆಧುನಿಕ ವೈದ್ಯಕೀಯ ಪದ್ದತಿಯು ಗುಣಪಡಿಸಲಾಗದ ಹಲವಾರು ರೋಗಗಳಿಗೆ ಯೋಗವು ರಾಮಬಾಣವಾಗಿರುವುದರಿಂದ ವಿಶ್ವ ಮಾನ್ಯತೆಯನ್ನು ಪಡೆದಿದೆ” ಎಂದರು. ಸಂಸ್ಥೆಯ ದೈಹಿಕ ಶಿಕ್ಷಕರಾದ ಸತೀಶ್ ಕುಮಾರ್ ಮತ್ತು ಸೂರ್ಯ…
ಇವೆಂಟ್ ಮ್ಯಾನೇಜ್ ಮೆಂಟ್ ನಲ್ಲಿ ವಿಶೇಷ ಪ್ರಸಿದ್ದಿ ಮಾಡಿರುವ ಮಂಗಳೂರಿನ ಸ್ಯಾಂಡಿಸ್ ಕಂಪನಿ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ರ ನಾಲ್ಕನೇ ಆವೃತ್ತಿಯು ಮೂಲ್ಕಿಯ ಸುಂದರರಾಮ ಶೆಟ್ಟಿ ಕನ್ವೆನ್ಷನಲ್ ಸೆಂಟರ್ ಕೋಲ್ನಾಡ್ ಇಲ್ಲಿ ಬಹಳ ಅದ್ದೂರಿಯಾಗಿ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಶಾಸಕ ಉಮಾನಾಥ ಎ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ, ತುಳು ಚಿತ್ರರಂಗ ಬೆಳವಣಿಗೆಗೆ ಇಂತಹ ಕಾರ್ಯಕ್ರಮ ಅಗತ್ಯ. ಯಾವುದೇ ಸಿನಿಮಾ ರಂಗಕ್ಕೂ ಕಡಿಮೆ ಇಲ್ಲದೆ ಕಾರ್ಯಕ್ರಮ ನಡೆಯುತ್ತಿರುವುದು ಶ್ಲಾಘನೀಯ ಎಂದರು. ಶಾಸಕ ವೇದವ್ಯಾಸ ಕಾಮತ್, ಚಿತ್ರನಟ ಅಶೋಕ್ ಬೆಂಗಳೂರು, ಶಿವಧ್ವಜ್ ಶೆಟ್ಟಿ, ಸಾಹಿತಿ ರಾಮ ಎಲ್ ಅಂಚನ್, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್, ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ, ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಹರೀಶ್ ಶೇರಿಗಾರ್, ಪಮ್ಮಿ ಕೊಡಿಯಾಲ್ ಬೈಲ್, ಕ್ಯಾಟ್ಕದ ಅಧ್ಯಕ್ಷ ಲಂಚುಲಾಲ್ ಕೆಎಸ್ , ಗಿರೀಶ್ ಎಂ ಶೆಟ್ಟಿ ಕಟೀಲು, ನಿಶಾಂತ್ ಭಂಡಾರಿ, ಹರಿಪ್ರಸಾದ್ ರೈ, ಬೋಳ ಪ್ರಕಾಶ್ ಕಾಮತ್, ಶಶಿಧರ್…
ಯೋಗ ದಿನಾಚರಣೆಯ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 21 ಜೂನ್ 2025 ರಂದು ಮನಃಶಾಂತಿಗೆ ಯೋಗ ಶೀರ್ಷಿಕೆಯಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ 2 ಗಿನ್ನಿಸ್ ದಾಖಲೆ ಸೃಷ್ಟಿಸಿ, 9 ವಿಶ್ವದಾಖಲೆ ನಿರ್ಮಿಸಿದ ಅದ್ಭುತ ಪ್ರತಿಭೆ ಉಡುಪಿಯ ಸೈಂಟ್ ಸಿಸಿಲಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ತನುಶ್ರೀರವರು 'ತನು ಯೋಗ ಭೂಮಿ' ಮುಖಾಂತರ ಯೋಗ ಪ್ರದರ್ಶನವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್ ರವರು ಮಾತನಾಡಿ ಯೋಗವು ಕೇವಲ ವ್ಯಾಯಾಮವಲ್ಲ. ಅದು ಬದುಕುವ ಒಂದು ಶೈಲಿ. ನಾವು ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕರ ಮತ್ತು ಸಂತುಷ್ಟ ಜೀವನವನ್ನು ಬದುಕಬಹುದು ಎನ್ನುತ್ತಾ ಯೋಗದ ಮಹತ್ವವನ್ನು ಕುರಿತು ತಿಳಿಸಿದರು. ಕಾರ್ಯಕ್ರಮದ ಕೊನೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ತನುಶ್ರೀಯವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಬೋಧಕ – ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಮೂಡುಬಿದಿರೆ: ಅಂತರಾಷ್ಟಿಯ ಯೋಗ ದಿನಾಚರಣೆಯ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಕಾಲೇಜು, ಪುಣೆಯ ರಾಷ್ಟಿಯ ಪ್ರಕೃತಿ ಚಿಕಿತ್ಸಾ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ‘ಯೋಗ ಸಂಗಮ -2025’ ಕರ್ಯಕ್ರಮ ನಡೆಯಿತು. ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿವಿಧ ಶಿಕ್ಷಣ ಸಂಸ್ಥೆಗಳ 1500 ವಿದ್ಯಾರ್ಥಿಗಳು ಏಕಕಾಲದಲ್ಲಿ sಸಾಮಾನ್ಯ ಯೋಗ ಪ್ರೋಟೋಕಾಲನ್ನು ಅನುಸರಿಸಿ 45 ನಿಮಿಷಗಳ ಸಾಮೂಹಿಕ ಯೋಗ ಪ್ರದರ್ಶನವನ್ನು ನೀಡಿದರು. ದೇಶದ ಒಂದು ಲಕ್ಷಕ್ಕೂ ಅಧಿಕ ಭಾಗಗಳಲ್ಲಿ ಈ ಯೋಗ ಸಂಗಮ ಕರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಾದ ಅನಂತ ಕೃಷ್ಣ ಸಿ. ವಿ ಮತ್ತು ತ್ರಿಶಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ನ್ಯಾಚುರೋಪತಿ ವಿಭಾಗದ ಪ್ರಾಂಶುಪಾಲ ಡಾ. ವನಿತಾ ಶೆಟ್ಟಿ, ಆಡಳಿತಾಧಿಕಾರಿ ಡಾ. ಪ್ರಜ್ಞಾ ಆಳ್ವ, ಆಳ್ವಾಸ್ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲ ಡಾ. ರೋಶನ್ ಪಿಂಟೋ, ಆಳ್ವಾಸ್ ಆಯುರ್ವೇದ ಕಾಲೇಜಿನ ಡಾ.ಸಜಿತ್ ಎಂ, ಆಳ್ವಾಸ್ ಫಾರ್ಮಸಿ ಕಾಲೇಜಿನ ಪ್ರಾಚರ್ಯ ಡಾ.ಮಂಜುನಾಥ ಸೆಟ್ಟಿ, ಆಳ್ವಾಸ್ ದೈಹಿಕ ಶಿಕ್ಷಣ ಸ್ನಾತಕೋತ್ತರ…














