Author: admin
ಮುಂಬೈ: ಮುಂಬೈ ವಿದ್ಯಾಲಯ, ಕನ್ನಡ ವಿಭಾಗವು ಶೈಕ್ಷಣಿಕ ಸೇವೆಯೊಂದಿಗೆ ಮುಂಬಯಿನ ಅನೇಕ ಸಂಘ ಸಂಸ್ಥೆಗಳೊಂದಿಗೆ ಕೈಜೋಡಿಸಿ ವಿಭಿನ್ನ ಕಾರ್ಯಕ್ರಮಗಳನ್ನು ಮಾಡುತ್ತಾ ಬರುತ್ತಿದೆ ಎನ್ನಲು ಸಂತೋಷವಾಗುತ್ತದೆ. ವಿಭಾಗವು ಎಲ್ಲರ ಜೊತೆ ಸೇರಿ ಕನ್ನಡವನ್ನು ಕಟ್ಟುವ ಕೆಲಸವನ್ನು ಮಾಡುತ್ತಿದೆ. ಮುಂಬೈಯಲ್ಲಿರುವ ಸಂಘ -ಸಂಸ್ಥೆಗಳು ತಮ್ಮನ್ನು ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ದೇಶದ ಯಾವುದೇ ಭಾಗದಲ್ಲಿ ಈ ಪ್ರಕ್ರಿಯೆ ಇಲ್ಲ. ಮುಂಬೈಯ ಸಂಘ –ಸಂಸ್ಥೆಗಳು ಮಾಡುತ್ತಿರುವ ಕಾರ್ಯಗಳು ಅಪೂರ್ವವಾದುದು. ಮುಂಬೈಯಲ್ಲಿ ಈಗ ಶತಕೋತ್ತರ ಸಂಭ್ರಮದಲ್ಲಿರುವ ಸಂಸ್ಥೆಗಳನ್ನು ಗೌರವಿಸಲು ಸಂತೋಷವಾಗುತ್ತದೆ. ಸುಮಾರು 147 ವರ್ಷಗಳಷ್ಟು ಹಳೆಯದಾದ ಶ್ರೀಮದ್ಭಾರತ ಮಂಡಳಿ, ಶತ ಸಂಭ್ರಮದಲ್ಲಿರುವ ಬಿ. ಎಸ್. ಕೆ .ಬಿ ಅಸೋಸಿಯೇಷನ್, ದೇವಾಡಿಗ ಸಂಘ, ಮೈಸೂರು ಅಸೋಸಿಯೇಷನ್, ಬಂಟರ ಸಂಘ ಈ ಸಂಸ್ಥೆಗಳನ್ನು ಗೌರವಿಸುವುದು ಸಂತೋಷವನ್ನು ನೀಡಿದೆ. ಮುಂಬಯಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸುವ ಪ್ರಕ್ರಿಯೆಯನ್ನು ವಿಭಾಗ ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ. ಇಂದು ಈ ಕಾರ್ಯಕ್ರಮವನ್ನು ಅಸೀಮ ಸಾಧಕ, ತಾರಾ…
ಗಣಿತನಗರ: ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಉಡುಪಿಯ ವಿ-ರೀಚ್ ಅಕಾಡೆಮಿಯ ಮುಖ್ಯಸ್ಥ ಸಿ.ಎಸ್ ಸಂತೋಷ್ ಪ್ರಭು ಇವರಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಜರುಗಿತು. ಪ್ರಸ್ತುತ ವಾಣಿಜ್ಯ ಕ್ಷೇತ್ರದಲ್ಲಿ ಇರುವ ವಿಪುಲ ಅವಕಾಶಗಳ ಬಗ್ಗೆ ತಿಳಿಸುತ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿಕೊಟ್ಟರು. ಇದೇ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಸಾಹಿತ್ಯ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀ ಶೈಲೇಶ್ ಉಪಸ್ಥಿತರಿದ್ದರು.
ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ವತಿಯಿಂದ 5ನೇ ವರ್ಷದ ಶ್ರೀ ಶಾರದಾ ಪೂಜೆಯು ಕಾಲೇಜಿನ ಜಸ್ಟಿಸ್ ಕೆ. ಎಸ್. ಹೆಗ್ಡೆ ಕೇಂದ್ರ ಗ್ರಂಥಾಲಯದಲ್ಲಿ ನೆರವೇರಿತು. ಕಾರ್ಯಕ್ರಮದ ಅಂಗವಾಗಿ ಗ್ರಂಥಾಲಯವನ್ನು ಮೈಸೂರು ದಸರಾ ಶೈಲಿಯ ಗೊಂಬೆಗಳಿಂದ ಅಲಂಕರಿಸಲಾಗಿತ್ತು. ಬಗೆ ಬಗೆಯ ದೀಪಗಳು, ಆಯುರ್ವೇದ ಗ್ರಂಥಗಳು, ಫಲಪುಷ್ಪ ಹಾಗೂ ರಂಗೋಲಿಗಳಿಂದ ಇಡೀ ವಾತವರಣವನ್ನು ಹಬ್ಬದ ಆಚರಣೆಗಾಗಿ ಸಜ್ಜುಗೊಳಿಸಲಾಗಿತ್ತು. ಮುದ್ದು ಮಕ್ಕಳ ಕಲರವ ಮತ್ತು ವಿದ್ಯಾರ್ಥಿಗಳ ಸಾಂಪ್ರದಾಯಿಕ ವೇಷಭೂಷಣವು ಕಾರ್ಯಕ್ರಮಕ್ಕೆ ಹೊಸ ಮೆರುಗು ನೀಡಿತು. ಪೂಜಾ ವಿಧಿಯಲ್ಲಿ ದೇವಿ ಸ್ತೋತ್ರ ಪಾರಾಯಣ, ಭಜನೆ, ಕುಂಕುಮಾರ್ಚನೆ, ಶಾರದಾ ಪೂಜೆ, ವಾಚನ-ಪ್ರವಚನ, ರಸಪ್ರಶ್ನೆ, ಸಂಖ್ಯಾ ಬಂಧ (ಸುಡೋಕು), ಅಷ್ಟಾವಧಾನ ಸೇವೆ ಹಾಗೂ ಪ್ರಸಾದ ವಿತರಣೆ, ವಂದೇ ಮಾತರಂ ನಡೆಯಿತು. ಆಳ್ವಾಸ್ ಪದವಿ ಕಾಲೇಜು, ಅಂತೆಯೇ ಆಳ್ವಾಸ್ ಪದವಿ ಕಾಲೇಜಿನ ಗ್ರಂಥಾಲಯದಲ್ಲಿ ನೂತನ ಶಾರದಾ ಬಿಂಬದ ಪ್ರತಿಷ್ಠಾಪನೆಯೊಂದಿಗೆ ಶಾರದಾ ಪೂಜೆ ನಡೆಯಿತು. ಅನಂತ ಪದ್ಮನಾಭ ಅಸ್ರಣ್ಣರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.…
ಬಂಟರ ಸಂಘ ಮುಂಬಯಿ ಮೀರಾ ಭಯಂದರ್ ಪ್ರಾದೇಶಿಕ ಸಮಿತಿ : ಅ. 2 ರಂದು ಯುವ ವಿಭಾಗದ ವತಿಯಿಂದ ದಾಂಡಿಯಾ ರಾಸ್ ಮತ್ತು ಗರ್ಬಾ ನೈಟ್ ಕಾರ್ಯಕ್ರಮ
ಬಂಟರ ಸಂಘ ಮುಂಬಯಿ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಗುತ್ತಿನಾರ್ ರವೀಂದ್ರ ಶೆಟ್ಟಿ ಕೊಟ್ರಪಾಡಿಯವರ ನೇತೃತ್ವದಲ್ಲಿ ಹಾಗೂ ಯುವ ವಿಭಾಗದ ಕಾರ್ಯಾಧ್ಯಕ್ಷ ವೃಷಭ್ ಶೆಟ್ಟಿಯವರ ಮುಂದಾಳತ್ವದಲ್ಲಿ ದಾಂಡಿಯಾ ರಾಸ್ ಹಾಗೂ ಗರ್ಬಾ ನೈಟ್ ಮತ್ತು ವಿವಿಧ ರೀತಿಯ ಕಾರ್ಯಕ್ರಮಗಳು ಇದೇ ಬರುವ ಅಕ್ಟೋಬರ್ 2 ರ ಗುರುವಾರದಂದು ಸಂಜೆ 7 ಗಂಟೆಯಿಂದ ಭಯಂದರ್ ಗೊಲ್ಡನ್ ನೆಸ್ಟ್ ಸರ್ಕಲ್ ಸಮೀಪದ ದಿ ಕ್ರೌನ್ ಬ್ಯುಸಿನೆಸ್ ಹೊಟೇಲ್ ಇಲ್ಲಿ ನಡೆಯಲಿದೆ. ಪ್ರಾದೇಶಿಕ ಸಮಿತಿಯ ಯುವ ವಿಭಾಗದ ವತಿಯಿಂದ ಅದ್ದೂರಿಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ 7 ವರ್ಷ ಕೆಳಗಿನ ವಯೋಮಿತಿಯ ಪುಟಾಣಿಗಳಿಗೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು. ದಾಂಡಿಯಾ ರಾಸ್ ಹಾಗೂ ಗರ್ಬಾ ನೈಟ್ ನಲ್ಲಿ ಭಾಗವಹಿಸುವ ಪುರುಷ ಹಾಗೂ ಮಹಿಳೆಯರಿಗೆ ರಮಣೀಯವಾಗಿ ಧರಿಸುವ ಬಟ್ಟೆಗಳ ಆಧಾರದ ಮೇಲೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಮತ್ತು ಪುರುಷ ಹಾಗೂ ಮಹಿಳಾ ವಿಭಾಗದ ನೃತ್ಯಗಾರರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಪ್ರಾಶಸ್ತ್ಯದ ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಗುವುದು.…
ಬಾಂಬೆ ಬಂಟ್ಸ್ ಅಸೋಸಿಯೇಷನ್ ನ ಮಹಿಳಾ ವಿಭಾಗದ ವತಿಯಿಂದ ಸೆಪ್ಟೆಂಬರ್ 26 ರಂದು ಮಹಿಳಾ ಕಾರ್ಯಾಧ್ಯಕ್ಷೆ ಶಾಂತ ಎನ್ ಶೆಟ್ಟಿಯವರ ಮುತಾಲಿಕೆಯಲ್ಲಿ ಲಲಿತ ಸಹಸ್ರನಾಮ, ಭಜನೆ ಹಾಗೂ ದಸರಾ ಮಹೋತ್ಸವದ ಅಂಗವಾಗಿ ಕೀರ್ತನೆ ಮತ್ತು ದಾಂಡಿಯ ನೃತ್ಯ ಕಾರ್ಯಕ್ರಮ ನಡೆಯಿತು. ಬಾಂಬೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿಯವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಸಂಸ್ಥೆಯ ಮಹಿಳೆಯರ ಉತ್ಸಾಹದ ಲವಲವಿಕೆಯನ್ನು ಕಂಡು, ನಮ್ಮ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸಿ ನಮ್ಮ ಕರ್ತವ್ಯವನ್ನು ನಾವು ಮಾಡುತ್ತಿರಬೇಕು. ಇದು ನಮ್ಮ ಮುಂದಿನ ಪೀಳಿಗೆಗೆ ಮಾದರಿ ಆಗಬೇಕು ಎಂದು ನುಡಿದರು. ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಹಿರಿಯ ಮಹಿಳಾ ಸದಸ್ಯೆ ವಸಂತಿ ಸಿ ಶೆಟ್ಟಿಯವರು ಆಗಮಿಸಿದ್ದರು. ಅಲ್ಲದೇ ಉಪಾಧ್ಯಕ್ಷರಾದ ಐಕಳ ಕಿಶೋರ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಅಡ್ವೊಕೇಟ್ ಶೇಖರ್ ಆರ್ ಶೆಟ್ಟಿ, ಸಮಿತಿ ಸದಸ್ಯರಾದ ರತ್ನಾಕರ ಶೆಟ್ಟಿ ಐಕಳ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯವರಾದ ಶೈಲಜಾ ಎ.ಶೆಟ್ಟಿ, ಶಾರದಾ ಎಸ್…
ಮೈಸೂರು ದಸರಾ ಪ್ರಯುಕ್ತ ನಡೆದ ರಾಜ್ಯ ಮಟ್ಟದ ದಸರಾ ಸಿಎಂ ಕಪ್ 2025 ರಲ್ಲಿ ಆಳ್ವಾಸ್ ತಂಡವು ಹಲವು ಪ್ರಶಸ್ತಿ ಮತ್ತು ಪದಕಗಳನ್ನು ಪಡೆದುಕೊಂಡಿದೆ. ತಂಡ ವಿಭಾಗದ ಕ್ರೀಡೆಗಳಾದ ಪುರುಷರ ಕಬಡ್ಡಿಯಲ್ಲಿ ಆಳ್ವಾಸ್ ತಂಡ ಬೆಂಗಳೂರು ಸಿಟಿಯ ವಿರುದ್ಧ 13 ಅಂಕಗಳ ಅಂತರದಿಂದ ಜಯಶಾಲಿಯಾದರೆ, ಮಹಿಳೆಯರ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಆಳ್ವಾಸ್ ತಂಡ ಬೆಂಗಳೂರು ಗ್ರಾಮಾಂತರ ತಂಡದ ವಿರುದ್ಧ 30-08, 35-20 ನೇರ ಸೆಟ್‌ಗಳಿಂದ ಸೋಲಿಸಿ ಪ್ರಥಮ ಸ್ಥಾನವನ್ನು ಪಡೆಯಿತು. ಅಂತೆಯೇ ಮಹಿಳಾ ಕಬಡ್ಡಿ, ಪುರುಷರ ಖೋ-ಖೋ, ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಆಳ್ವಾಸ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಅಥ್ಲೇಟಿಕ್ಸ್ ನಲ್ಲಿ ಆಳ್ವಾಸ್‌ನ ನಾಗ್ರೇಂದ್ರ ಡಿಸ್ಕಸ್ ಥ್ರೋನಲ್ಲಿ ನೂತನ ಕೂಟ ದಾಖಲೆ ನಿರ್ಮಿಸಿದರೆ, 800 ಮೀ ಓಟದಲ್ಲಿ ಆಳ್ವಾಸ್‌ನ ರೇಖಾ ಬಸಪ್ಪ ನೂತನ ಕೂಟ ದಾಖಲೆ ನಿರ್ಮಿಸಿದ್ದಾರೆ. ವೈಯಕ್ತಿಕ ವಿಭಾಗದ ಅಥ್ಲೆಟಿಕ್ಸ್ ನಲ್ಲಿ ಪುರುಷ ಮತ್ತು ಮಹಿಳಾ ವಿಭಾಗದ ಒಟ್ಟು ಕ್ರೀಡಾಕೂಟದಲ್ಲಿ 6 ಚಿನ್ನ, 2 ಬೆಳ್ಳಿ, 2 ಕಂಚಿನ ಪದಕವನ್ನು, ವೇಯ್ಟ್ ಲಿಫ್ಟಿಂಗ್‌ನಲ್ಲಿ…
ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಸಾಹಿತಿ ಹಾಗೂ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಎಂಟನೇ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ತಲೆಮಾರಿಗೆ ತುಳು ಭಾಷೆಯನ್ನು ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ವಿದ್ಯಾರ್ಥಿಗಳಲ್ಲಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬ್ರಹ್ಮಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ. ದಯಾಕರ್ ಅವರು ಮಾತನಾಡಿ, ತುಳು ಭಾಷೆ, ಸಾಹಿತ್ಯದ ಸಂಸ್ಕ್ರತಿ ಬಗ್ಗೆ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಕಾರ್ಯಕ್ರಮ ಒಂದು ವಿಶಿಷ್ಟ ಪರಿಕಲ್ಪನೆಯ ಕಾರ್ಯಕ್ರಮ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಾತನಾಡಿ, ತುಳು…
ಶ್ರಮಯೇವ ಜಯತೆ ಎನ್ನುವ ಧ್ಯೇಯದೊಂದಿಗೆ ದೇಶದಲ್ಲಿ ಅತೀ ಹೆಚ್ಚು ಸದಸ್ಯರ ಸಂಘಟನೆ ಎನ್. ಎಸ್. ಎಸ್. ಅಂತಹ ಸುಭದ್ರ ತಳಹದಿಯ ಸಂಘಟನೆ ಸದಸ್ಯರಾಗಿರುವುದೇ ಹೆಮ್ಮೆಯ ವಿಷಯ. ಯುವಜನತೆಗೆ ವಿಧ್ಯಾಭ್ಯಾಸದ ಜೊತೆಗೆ ಸಾಮಾಜಿಕ ಜವಾಬ್ದಾರಿ ಸೇವಮಾನೋಭಾವನೆ ರೂಢಿಸಲು ಸೃಷ್ಟಿಯಾದ ಎನ್.ಎಸ್.ಎಸ್. ಕ್ರಾಂತಿಕಾರಿ ಸಾಧನಾ ಪಥದಲ್ಲಿ ಸಾಗುತ್ತಾ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುತ್ತಿದೆ. ಎಂದು ಕರ್ನಾಟಕ ಸರಕಾರ (ಎನ್.ಎಸ್.ಎಸ್ ಕೋಶ)ದ ನಿಕಟಪೂರ್ವ ರಾಜ್ಯ ಎನ್.ಎಸ್.ಎಸ್ ಅಧಿಕಾರಿ ಡಾ. ಗಣನಾಥ ಎಕ್ಕಾರ್ ಅಭಿಪ್ರಾಯಪಟ್ಟಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಹೊಸ ಘಟಕ ಉದ್ಘಾಟಿಸಿ ಮಾತನಾಡಿದರು. ಎನ್.ಎಸ್.ಎಸ್. ಇತಿಹಾಸ ಹಾಗೂ ಪ್ರಸಕ್ತ ಸಾಧನೆಗಳ ವಿವರಣೆ ನೀಡಿ ಮಣಿಪಾಲ ಜ್ಞಾನಸುಧಾ ಹೊಸ ಎನ್.ಎಸ್.ಎಸ್. ಘಟಕಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಮಂಗಳೂರು ವಿಭಾಗದ ಎನ್.ಎಸ್.ಎಸ್. ವಿಭಾಗಾಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ನುಡಿಗಳನ್ನಾಡಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾರ್ಕಳ ಜ್ಞಾನಸುಧಾ…
ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ ಹಾಗೂ ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ವಾಕಥಾನ್ ಹೃದಯ ದಿನಾಚರಣೆಯ ಅವಾರ್ಡ್ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಗರಿಷ್ಠ ವಿದ್ಯಾರ್ಥಿಗಳ ಭಾಗವಹಿಸುವಿಕೆಯಲ್ಲಿ ಪ್ರಥಮ ಸ್ಥಾನ, ಅತ್ಯಂತ ಶಿಸ್ತಿನ ತಂಡಕ್ಕೆ ಪ್ರಥಮ ಸ್ಥಾನ, ಘೋಷಣೆ ಕೂಗುವಿಕೆಯಲ್ಲಿ ಪ್ರಥಮ, ಸ್ಕಿಟ್ ಸ್ಪರ್ಧೆಯಲ್ಲಿ ದ್ವಿತೀಯ, ಫ್ಲಕಾರ್ಡ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗದವರು ಪ್ರಶಂಸಿಸಿದ್ದಾರೆ.
ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಿರುವ ಪ್ರತಿಷ್ಠಿತ ‘ಯುವ ದಸರಾ’ ವೇದಿಕೆಯಲ್ಲಿ ಕುಂದಾಪುರದ ಸುಜ್ಞಾನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ‘ಪರಿಸರ ಸಂರಕ್ಷಣೆ’ ವಿಷಯ ಆಧರಿಸಿ ನೃತ್ಯ ಪ್ರದರ್ಶನ ನೀಡಿ ನೆರೆದಿದ್ದ ಸುಮಾರು 50 ಸಾವಿರಕ್ಕೂ ಹೆಚ್ಚು ಮಂದಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಾರೆ. ಈ ಸ್ಪರ್ಧೆಗೆ ರಾಜ್ಯದ ವಿವಿಧೆಡೆಯ ಒಟ್ಟು 700 ಕಾಲೇಜುಗಳು ಭಾಗವಹಿಸಿದ್ದವು. ಅತ್ಯುತ್ತಮ ಪ್ರದರ್ಶನಕ್ಕಾಗಿ ಕೇವಲ 8 ಕಾಲೇಜುಗಳು ಆಯ್ಕೆಯಾಗಿದ್ದವು. ಅದರಲ್ಲಿ ಸುಜ್ಞಾನ ಪಿಯು ಕಾಲೇಜು ಕೂಡಾ ಒಂದಾಗಿರುವುದು ಕಾಲೇಜಿಗೆ ಮತ್ತು ಕುಂದಾಪುರಕ್ಕೆ ಹೆಮ್ಮೆಯ ವಿಷಯವಾಗಿದೆ.ಸುಜ್ಞಾನ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೆಪ್ಟೆಂಬರ್ 14ರಂದು ಯುವ ಸಂಭ್ರಮದಲ್ಲಿ ಮೊದಲು ನೃತ್ಯ ಪ್ರದರ್ಶನ ನೀಡಿದ್ದರು. ಈ ಸಂದರ್ಭದಲ್ಲಿ ಉತ್ತಮ ಪ್ರದರ್ಶನ ನೀಡಿ, ಆಯ್ಕೆಯಾದ ನಂತರ ಸೆಪ್ಟೆಂಬರ್ 24ರಂದು ಯುವ ದಸರಾದ ಮುಖ್ಯ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿದರು. ಈ ನೃತ್ಯ ಪ್ರದರ್ಶನಕ್ಕೆ Zee ಕನ್ನಡ ವಾಹಿನಿಯ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ನ ರವಿ ಮಾಸ್ಟರ್ ಪರಿಕಲ್ಪನೆ ನೀಡಿದ್ದು, ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ನ ರೋಶನ್ ಮಾಸ್ಟರ್…