Author: admin
ಬಂಟರ ಸಂಘ ಮುಂಬಯಿ ವತಿಯಿಂದ ಜೂನ್ 07 ರಂದು ನಡೆದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ದಂಪತಿಗಳನ್ನು ಸನ್ಮಾನಿಸಿ ಗೌರವಿಸಿದರು. ಈ ಸಂಧರ್ಭದಲ್ಲಿ ಬಂಟರ ಸಂಘ ಮುಂಬಯಿಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಉಪಾಧ್ಯಕ್ಷ ಮಹೇಶ್ ಎಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್ ಕೆ ಶೆಟ್ಟಿ, ಕೋಶಾಧಿಕಾರಿ ಸಿಎ ರಮೇಶ್ ಶೆಟ್ಟಿ, ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ್ ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿಯವರು ಉಪಸ್ಥಿತರಿದ್ದರು.
ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉದಯ್ ಶೆಟ್ಟಿಯವರ ಅಭಿಮಾನಿ ಬಳಗ ಜಂಟಿಯಾಗಿ ಸಮಾಜಸೇವಕ, ಉದ್ಯಮಿ ಉದಯ್ ಶೆಟ್ಟಿ ಮುನಿಯಾಲು ಇವರ ಹುಟ್ಟುಹಬ್ಬದ ಪ್ರಯುಕ್ತ ಜೂನ್ 08 ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಿತ್ತು. ಕಾರ್ಯಕ್ರಮದಲ್ಲಿ ಕೇಮಾರು ಸಾಂದೀಪನಿ ಸಾದನಾಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹಾಗೂ ಮುಸ್ಲಿಂ ಧರ್ಮಗುರುಗಳಾದ ಮೌಲಾನ ಹಪೀಜ್, ಅತ್ತೂರು ಚರ್ಚ್ ಸಹಾಯಕ ಧರ್ಮಗಳಾದ ರೆ.ಫಾ. ರಾಬಿನ್ ಸಾಂತ್ಮಯರ್ ಹಾಗೂ ಕೆಪಿಸಿಸಿ ಸದಸ್ಯರಾದ ನೀರೆ ಕೃಷ್ಣ ಶೆಟ್ಟಿ, ಪವರ್ ಟಿವಿ ಮುಖ್ಯಸ್ಥರಾದ ರಾಕೇಶ್ ಶೆಟ್ಟಿ, ಕಾರ್ಕಳ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶುಭದ್ ರಾವ್, ಗೋಪಿನಾಥ ಭಟ್, ಜಿಲ್ಲಾ ವಕ್ತಾರರಾದ ಬಿಪಿನ್ ಚಂದ್ರಪಾಲ್ ನಕ್ರೆ, ಸುರೇಂದ್ರ ಶೆಟ್ಟಿ ಸಹನಾ, ಅಜಿತ್ ಹೆಗ್ಡೆ ಮಾಳ, ಸುಧಾಕರ ಕೋಟ್ಯಾನ್, ಸುಭಿತ್ ಎನ್.ಆರ್, ನವೀನ್ ಅಡ್ಯಾಂತಾಯ, ಉದಯ ಶೆಟ್ಟಿ…
ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ ಜೂ. 7 ರಂದು ಶಿಕ್ಷಕರಿಗೆ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು ವಿಷಯದ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಶ್ರೀ ಲಕ್ಷ್ಮೀ ಜನಾರ್ಧನ್ ಇಂಟರ್‍ನ್ಯಾಶನಲ್ ಸ್ಕೂಲ್ ಬೆಳ್ಮಣ್‍ನ ಪ್ರಾಂಶುಪಾಲರಾದ ಭುಜಂಗ ಪಿ ಶೆಟ್ಟಿ ಹಾಗೂ ಸುರತ್ಕಲ್ ನ ವಿದ್ಯಾದಾಯಿನಿ ಆಂಗ್ಲಮಾಧ್ಯಮ ಶಾಲೆಯ ಶುಭಲಕ್ಷ್ಮಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಕಾರ್ಯಾಗಾರದಲ್ಲಿ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು 2023ರ ಗುರಿ, ಉದ್ದೇಶ, ಬೋಧನಾ ಕಲಿಕಾ ವಿಧಾನ, ಪಠ್ಯವಿಷಯಗಳ ಮಾಹಿತಿಯನ್ನು ನೀಡಿ ಬೋಧನಾ ಸಾಮರ್ಥ್ಯ ವೃದ್ಧಿಯ ತರಬೇತಿಯನ್ನು ನೀಡಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಮುಗ್ಧ ಮನಸ್ಸಿನ ಮಕ್ಕಳ ಭವಿಷ್ಯವನ್ನು ರೂಪಿಸುವ ಶಿಕ್ಷಕರು ನಿರಂತರ ತಮ್ಮನ್ನು ತಾವು ಆಧುನೀಕರಿಸಿಕೊಳ್ಳಬೇಕು. ಇಲ್ಲಿ ಕಲಿತ ಕೌಶಲ್ಯಗಳನ್ನು ತರಗತಿಯಲ್ಲಿ ಅನುಷ್ಠಾನಗೊಳಿಸಬೇಕೆಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಎಲ್ಲಾ ಶಿಕ್ಷಕರು ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಕುರಿತು ಅರಿವನ್ನು ಹೊಂದಿರಬೇಕೆಂದರು. ಕಾರ್ಯಾಗಾರದಲ್ಲಿ ಸಂಸ್ಥೆಯ ಶಿಕ್ಷಕ ವೃಂದದವರು ಪ್ರಾತ್ಯಕ್ಷಿಕ ಅನುಭವವನ್ನು ಪಡೆದುಕೊಂಡರು.
ಜೂನ್: 21 ಕರ್ನಾಟಕ ಬೆಟಾಲಿಯನ್ NCC ಅಯೋಜಿಸಿದ ಹತ್ತು ದಿನಗಳ ಕಂಬೈನ್ಡ್ ಆನ್ಯುವಲ್ ಟ್ರೈನಿಂಗ್ ಕ್ಯಾಂಪ್ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಸಂಪನ್ನಗೊಂಡಿತು. ಈ ತರಬೇತಿ ಶಿಬಿರದಲ್ಲಿ 592 ಎನ್.ಸಿ.ಸಿ ಕ್ಯಾಡೆಟ್‌ಗಳು ಭಾಗಹಿಸಿದ್ದು ಸೇನಾ ತರಬೇತಿ, ಶಿಬಿರ ಜೀವನ, ದೈಹಿಕ ತರಬೇತಿ (ಕಸರತ್ತು) , ಫೈರಿಂಗ್, ಅಡೆತಡೆಗಳನ್ನೆದುರಿಸುವ ಕೋರ್ಸಿನ ತರಬೇತಿಯ ಪ್ರಯೋಜನ ಪಡೆದುಕೊಂಡರು. ಯುವ ಆಪದ ಮಿತ್ರ ಯೋಜನೆಯಡಿಯಲ್ಲಿ ಜಿಲ್ಲಾ ವಿಪತ್ತು ಪರಿಹಾರ ನಿರ್ವಹಣಾ ಪ್ರಾಧಿಕರ ಪ್ರತಿನಿಧಿಗಳಿಂದ ಆಯ್ದ ಕೆಡೆಟ್‌ಗಳಿಗೆ ವಿಪತ್ತು ಪರಿಹಾರ ನಿರ್ವಹಣೆಯ ತರಬೇತಿಯನ್ನು ನೀಡಲಾಯಿತು. ಮಂಗಳೂರಿನ ಪೋಲಿಸ್ ಕಮಿಷನರ್ (ಆಯುಕ್ತ) ಕಛೇರಿಯ ವತಿಯಿಂದ ಜೂನ್ 5,2025 ರಂದು ನಕ್ರೆಯಲ್ಲಿರುವ ಫೈರಿಂಗ್ ರೇಂಜ್‌ನಲ್ಲಿ”ಸ್ಟನ್ and ಸ್ಮೋಕ್ ಗ್ರೆನೇಡ್ ಫೈರಿಂಗ್ “ ಮತ್ತು ಗಲಭೆ ನಿಯಂತ್ರಣ ಡ್ರಿಲ್‌ಗಳ ನೇರಾ ಪ್ರಾತ್ಯಕ್ಷತೆಯನ್ನು ಕೂಡಾ ನೀಡಲಾಯಿತು.CATC ಯನ್ನು ಎನ್.ಸಿ.ಸಿ ಗ್ರೂಪ್ ಪ್ರಧಾನ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಆಯೋಜಿಸಲಾಗಿದ್ದು , ಮಂಗಳೂರು ಗ್ರೂಪ್ ಕಮಾಂಡರ್ ಕರ್ನಲ್ ವಿರಾಜ್ ಕಾಮತ್ ಕ್ಯಾಡೆಟ್‌ಗಳೊಂದಿಗೆ ಸಂವಹನ ನಡೆಸಿ…
ಅನಂತಾಡಿ ಹಿರ್ತಂದಬೈಲು ವಿಶ್ವನಾಥ ರೈ(84) ಶ್ರೀ ವಿಶ್ವನಾಥ ರೈ ಇವರು ಮೇ 30 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಶ್ರೀಯುತರು ಪುತ್ತೂರು ಸರ್ವೆ, ನೇರಳಕಟ್ಟೆ, ಅನಂತಾಡಿ ಸರಕಾರಿ ಶಾಲೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿ, ಅನಂತಾಡಿಯಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದರು. ಜನಾನುರಾಗಿ, ಪರೋಪಕಾರಿಯಾಗಿ ಜೀವನ ನಡೆಸುತ್ತಿದ್ದ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡದ್ದಿರು. ಪುತ್ರರಾದ ಶಶಿಧರ್ ರೈ ಹಾಗೂ ಬಿ.ಸಿ. ರೋಡಿನ ಪ್ರಸಿದ್ದ ದಂತ ವೈದ್ಯರಾದ ಮುರಳೀಧರ ರೈ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಆರೋಗ್ಯ ಭಾಗ್ಯ ಯೋಜನೆಯಡಿ ವಿವಿಧ ಫಲಾನುಭವಿಗಳಿಗೆ ಆರ್ಥಿಕ ನೆರವು ವಿತರಣಾ ಕಾರ್ಯಕ್ರಮ ಜೂನ್ 6 ರಂದು ಸಂಘದ ಆಡಳಿತ ಕಛೇರಿ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಿ ಮಾತನಾಡಿದ ಸಂಘದ ದಶಮ ಸಂಭ್ರಮದ ಪೋಷಕರು, ಕುಂದಾಪುರದ ಉದ್ಯಮಿಗಳಾದ ಸಟ್ವಾಡಿ ವಿಜಯ ಶೆಟ್ಟಿ, ಯುವ ಬಂಟರ ಸಂಘ ಆರೋಗ್ಯ ಭಾಗ್ಯ ಯೋಜನೆಯಡಿ ಜಾತೀಯತೆಯನ್ನು ಮೀರಿ ಎಲ್ಲಾ ಸಮುದಾಯದ ಅನಾರೋಗ್ಯ ಪೀಡಿತರಿಗೆ ಧನ ಸಹಾಯ ಮಾಡುತ್ತಿರುವುದು ಶ್ಲಾಘನೀಯ. ಇವರು ನಡೆಸಿಕೊಂಡ ಬರುತ್ತಿರುವ ಆರೋಗ್ಯ ಭಾಗ್ಯ ಯೋಜನೆಗೆ ಪ್ರತಿ ವರ್ಷ ಒಂದು ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಘದ ಪೋಷಕರು, ಸಮತಾ ಮೋಟರ್ಸ್ ನ ಮಾಲಕರಾದ ಜೆಡ್ಡಾಡಿ ವಿಜಯಕುಮಾರ್ ಶೆಟ್ಟಿ ಗಿಳಿಯಾರು ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಸಂಘ ಮಾಡಿಕೊಂಡು ಬರುತ್ತಿರುವ ಕಾರ್ಯಕ್ರಮಗಳನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಪ್ರತಿಯೊಂದು ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾದದ್ದು. ಹಾಗಾಗಿ ಸಂಘದ…
ಹಲವಾರು ಸಂಘ ಸಂಸ್ಥೆಗಳಿಗೆ ತನ್ನ ಶ್ರಮದಿಂದ ದುಡಿದ ದುಡಿಮೆಯ ಪಾಲನ್ನು ದಾನವಾಗಿ ನೀಡಿರುವ, ಸಮಾಜಮುಖಿ ಚಿಂತನೆಯ ನಿವೃತ್ತ ಅರಣ್ಯ ಉಪ ಸಂರಕ್ಷಣಾಧಿಕಾರಿ ಪ್ರಕಾಶ್ ಶೆಟ್ಟಿಯವರನ್ನು ಸಾಗರ ಬಂಟರ ಸಂಘದ ವತಿಯಿಂದ ಶಿರಸಿಯ ಸ್ವಗೃಹದಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಶೆಟ್ಟಿ ಶೆಟ್ಟಿ ಹಕ್ಲಾಡಿ, ಉಪಾಧ್ಯಕ್ಷರಾದ ರಘುಪತಿ ಶೆಟ್ಟಿ, ನಿರ್ದೇಶಕರಾದ ಸದಾನಂದ ಶೆಟ್ಟಿ, ಶ್ರೀಧರ್ ಶೆಟ್ಟಿ ಹಾಗೂ ನಾಗರಾಜ್ ಶೆಟ್ಟಿ ಉಪಸ್ಥಿತರಿದ್ದರು.
ಅತಿಯಾದ ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಮಾರಕವಾಗಿ ಪರಿಣಮಿಸಿದೆ. ಪ್ಲಾಸ್ಟಿಕ್ ಬಳಕೆ ನಿರ್ಮೂಲನೆಯಾಗದಿದ್ದರೆ ಪೃಥ್ವಿಯ ಅವನತಿಯೂ ಸನಿಹವಾಗಲಿದೆ. ಪರಿಸರ ಸಂರಕ್ಷಣೆಯಾದಲ್ಲಿ ಮಾತ್ರ ಮನುಷ್ಯನ ಆರೋಗ್ಯ ಸಂರಕ್ಷಣೆ ಸಾಧ್ಯ ಎಂದು ಪರಿಸರವಾದಿ, ಗುಜರಾತ್ ನ ಸ್ಮೃತಿ ವನದ ರೂವಾರಿ ಡಾ| ಆರ್.ಕೆ ನಾಯರ್ ಹೇಳಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಗುರುವಾರ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಯುವಜನತೆ, ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬಳಕೆ ನಿರ್ಮೂಲನೆಗೆ ಆಂದೋಲನದ ರೀತಿಯಲ್ಲಿ ಪಣ ತೊಡಬೇಕು. ರೆಡ್ ಕ್ರಾಸ್ ಸಂಸ್ಥೆ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಸ್ವಾಗತಾರ್ಹ ಎಂದರು. ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಡಾ. ಸತೀಶ್ ರಾವ್, ಖಜಾಂಜಿ ಮೋಹನ್ ಶೆಟ್ಟಿ, ನಿರ್ದೇಶಕ ಡಾ. ಸಚ್ಚಿದಾನಂದ ರೈ, ಎ.ವಿಠ್ಠಲ, ಡಾ.ಸುಮನಾ ಬೋಳಾರ್, ಸಲಹೆಗಾರರಾದ ಪ್ರಭಾಕರ ಶರ್ಮ, ಕೆ.ಎನ್. ಸುಧಾಕರ, ಸದಸ್ಯರಾದ ಭಾಸ್ಕರ ರೈ ಕಟ್ಟ, ಪುಷ್ಪರಾಜ್ ಬಿ.ಎನ್., ದ.ಕ.…
ಯಕ್ಷಗಾನದ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ಪಟ್ಲ ದಶಮ ಸಂಭ್ರಮ – 2025 ರಾಷ್ಟ್ರೀಯ ಕಲಾ ಸಮ್ಮೇಳನವು ಜೂನ್ 1ರಂದು ಮಂಗಳೂರು ಅಡ್ಯಾರ್ ಗಾರ್ಡನ್ ನಲ್ಲಿ ಯಶಸ್ವಿಯಾಗಿ ನಡೆಯಿತು. ದಶಮ ಸಂಭ್ರಮದ ವೈಭವ ಮೂರು ವೇದಿಕೆಗಳಲ್ಲಿ ಪ್ರಸ್ತುತಗೊಂಡಿದ್ದು ಭರತನಾಟ್ಯ, ಓಡಿಸ್ಸಿ, ಕಥಕ್, ಮೋಹಿನಿಯಾಟ್ಟಂ ಸಹಿತ ದೇಶದ ಎಂಟು ವಿಧದ ಶಾಸ್ತ್ರೀಯ ನೃತ್ಯ ಪ್ರಕಾರಗಳ ಪ್ರದರ್ಶನ, ಭಾರತೀಯ ಕಲೆಗಳ ಛಾಯಾಚಿತ್ರಗಳ ಪ್ರದರ್ಶನ ನಡೆಯಿತು. ಯಕ್ಷಗಾನ ಸ್ಪರ್ಧೆಯಲ್ಲಿ ತೆಂಕು ಮತ್ತು ಬಡಗು ತಿಟ್ಟಿನ ಯುವ ಕಲಾವಿದರ 8 ತಂಡಗಳು ಭಾಗವಹಿಸಿದ್ದವು. ವಿವಿಧ ತಂಡಗಳಿಂದ ಭರತನಾಟ್ಯ ಪ್ರದರ್ಶನ ನಡೆಯಿತು. ಕುಣಿತ ಭಜನೆ ಸ್ಪರ್ಧೆ ಆಯೋಜನೆಗೊಂಡಿತು. ವಿವಿಧ ಕ್ಷೇತ್ರದ ಸುಮಾರು 3,500 ಕಲಾವಿದರಿಗೆ ಅಪಘಾತ ವಿಮಾಯೋಜನೆಗೆ ನೋಂದಣಿ ನಡೆಯಿತು. ವೈದ್ಯಕೀಯ ಆರ್ಥಿಕ ನೆರವು ನೀಡಲಾಯಿತು. ಯಕ್ಷಾಶ್ರಯ ಯೋಜನೆಯ ಫಲಾನುಭವಿಗಳಿಗೆ ಚೆಕ್ ವಿತರಿಸಿ ವಿವಿಧ ಸಾಧಕರಿಗೆ ಯಕ್ಷದ್ರುವ ಕಲಾ ಗೌರವ ಪ್ರಧಾನಿಸಲಾಯಿತು. ಯಕ್ಷಧ್ರುವ ಪಟ್ಲ ದಶಮ ಸಂಭ್ರಮದ…
ಶಿವಮೊಗ್ಗದ ಪ್ರಖ್ಯಾತ ಉದ್ಯಮಿ ಪಿಂಗಾರ ಹೋಟೆಲ್ ಮಾಲೀಕರಾದ ಕೊಡುಗೈ ದಾನಿ ರಾಜಮೋಹನ್ ಹೆಗ್ಡೆ ಅವರು ಸಾಗರ ಬಂಟರ ಸಂಘದ ಕಟ್ಟಡ ನಿರ್ಮಾಣಕ್ಕೆ 1 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದರು. ಈ ಸಂದರ್ಭದಲ್ಲಿ ಸಾಗರ ಬಂಟರ ಸಂಘದ ವತಿಯಿಂದ ರಾಜಮೋಹನ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ರಘುಪತಿ ಶೆಟ್ಟಿ, ನಿರ್ದೇಶಕರಾದ ಸದಾನಂದ ಶೆಟ್ಟಿ ಹಾಗೂ ಆನಂದ್ ಶೆಟ್ಟಿಯವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.














