Author: admin
ವಿದ್ಯಾಗಿರಿ: ಸ್ನಾತಕೋತ್ತರ ವಾಣಿಜ್ಯ ವಿದ್ಯಾರ್ಥಿಗಳು ವಾಣಿಜ್ಯದ ಎಲ್ಲಾ ಆಯಾಮಗಳಲ್ಲಿ ನಿಪುಣತೆ ಹೊಂದುವುದು ಅವಶ್ಯಕ ಎಂದು ಲೆಕ್ಕಪರಿಶೋಧಕ ಎಂ. ಉಮೇಶ್ ರಾವ್ ಹೇಳಿದರು. ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ಸ್ನಾತಕೋತ್ತರ ವಿಚಾರಸಂಕಿರಣ ಸಭಾಂಗಣದಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಜಗ್ಗತ್ತು ಒಂದು ರಣರಂಗ. ಇದ್ದನ್ನು ಎದುರಿಸುವ ಎಲ್ಲ ಕಲೆಗಳನ್ನು ವಿದ್ಯಾರ್ಥಿ ಆಗಿದ್ದಾಗಲೇ ಸಿದ್ಧ ಪಡಿಸಿಕೊಳ್ಳಬೇಕು. ತಂತ್ರಜ್ಞಾನದ ಹೊಸ ಆವಿಷ್ಕಾರ ಕೃತಕ ಬುದ್ಧಿಮತ್ತೆ (ಏಐ) ವಾಣಿಜ್ಯ ವಿದ್ಯಾರ್ಥಿಗಳಿಗೆ ಸವಾಲಾಗಿ ರೂಪುಗೊಂಡಿದ್ದು, ನಮ್ಮ ಬುದ್ಧಿಶಕ್ತಿಯನ್ನು ವೃದ್ಧಿಸಿಕೊಂಡರೆ ಮಾತ್ರ ಇದನ್ನು ಪರಿಣಾಮಕಾರಿಯಾಗಿ ಎದುರಿಸ ಬಹುದು ಎಂದರು. ವಾಣಿಜ್ಯ ವಿದ್ಯಾರ್ಥಿಗಳು ಖಾತೆ, ತೆರಿಗೆ ಹಾಗೂ ಈ ಕ್ಷೇತ್ರದ ಇತರ ವಿಷಯಗಳ ಕುರಿತು ತಿಳಿಯುವುದು ಹಾಗೂ ವಾಣಿಜ್ಯದ ಎಲ್ಲಾ ಆಗುಹೋಗುಗಳನ್ನು ಗಮನಿಸಬೇಕು ಎಂದರು. ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಅಂತಿಮ ವರ್ಷದ ವಿದ್ಯಾರ್ಥಿಗಳ ನಿಜವಾದ ಜೀವನ ಪ್ರಾರಂಭವಾಗುತ್ತಿದೆ. ಈ ಜೀವನದಲ್ಲಿ ಯಶಸ್ಸು ಪಡೆಯಬೇಕಾದರೆ ನಿಮ್ಮ ಮೇಲಿನ ನಂಬಿಕೆಯನ್ನು…
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಕಾಮಗಾರಿಗಳ ಕುರಿತು ಚರ್ಚಿಸಿದರು. ಶಿರಾಡಿ ಘಾಟಿಯ ಮೂಲಕ ಹಾದು ಹೋಗುವ ಮಂಗಳೂರು ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆ ಮತ್ತು ಸುಗಮಗೊಳಿಸಲು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಕೇಳಿಕೊಂಡರು.
“ಕನ್ನಡದಲ್ಲಿ ಓದುಗರಿಲ್ಲ ಅನ್ನುವುದು ಸುಳ್ಳು. ಅಂಥವರನ್ನು ಹುಡುಕಿ ಪುಸ್ತಕ ಮುಟ್ಟಿಸುವುದಲ್ಲ. ಪುಸ್ತಕಗಳನ್ನು ಅವರು ಮುಟ್ಟುವ ಹಾಗೆ ಮನುಷ್ಯ ಎಲ್ಲೆಲ್ಲಿ ಓಡಾಡುತ್ತಾನೆ ಅಲ್ಲೆಲ್ಲಾ ಪುಸ್ತಕಗಳೇ ಇರಬೇಕು. ಆಗ ಅವುಗಳನ್ನು ತಗೊಳ್ಳದೆ ಜನ ಎಲ್ಲಿ ಹೋಗುತ್ತಾರೆ?” ಹೀಗೆನ್ನುತ್ತಾರೆ ಕ್ರಿಯೇಟಿವ್ ಪಿಯು ಕಾಲೇಜಿನ ಪ್ರಾಚಾರ್ಯ ಅಶ್ವಥ್. ಈ ಕಾಲೇಜು ಇರುವುದು ಕಾರ್ಕಳದ ನಡುನಾಗರಿಕ ಜಗತ್ತಿನಿಂದ ಸ್ವಲ್ಪ ದೂರದ ಹಸಿರು ಪರಿಸರದಲ್ಲಿ. ಕರ್ನಾಟಕದ ಪಿಯು ಕಾಲೇಜುಗಳಿಗೆ ಅದರಲ್ಲೂ ಕರಾವಳಿಯ ಕಾಲೇಜುಗಳಿಗೆ ಸಾಮಾನ್ಯವಾಗಿ ಇರುವುದು ಒಂದೇ ಪ್ರಭೆ. ಅದು ವಿಜ್ಞಾನ ಮತ್ತು ಲೆಕ್ಕಕೇಂದ್ರಿತ ಪ್ರಖರತೆ. ಡಾಕ್ಟರ್ ಇಂಜಿನಿಯರ್ ಶ್ರೇಣಿಗೆ ಸುಲಭದಲ್ಲಿ ಮಕ್ಕಳನ್ನು ಎತ್ತಿ ಹಾಕುವ ಹತ್ತಾರು ಕಾಲೇಜುಗಳು ನಮ್ಮ ಕರಾವಳಿಯಲ್ಲಿವೆ. ಪಿಯು ಫಲಿತಾಂಶಗಳು ಪ್ರಕಟವಾಗುವ ಹೊತ್ತಿಗೆ ಕರಾವಳಿಯ ಅಡ್ಡಡ್ಡ ರಸ್ತೆಗಳಲ್ಲಿ ಒಮ್ಮೆ ಓಡಾಡಿ ನೋಡಿ. ಗೆದ್ದ ಮಕ್ಕಳ ಫೋಟೋಗಳಡಿಯಲ್ಲಿ ಅವರು ಪಡೆದ ಅಂಕಗಳ ಪಟ್ಟಿ ರಾರಾಜಿಸುತ್ತವೆ. ವಿಚಿತ್ರ ಎಂದರೆ ಆ ಮಗುವಿನ ಚಿತ್ರದಡಿಯಲ್ಲಿ ಭಾಗಶ: ಸೈನ್ಸ್ ಮ್ಯಾಕ್ಸ್ ಸಬ್ಜೆಕ್ಟ್ ಗಳ ಅಂಕಗಳಿರುತ್ತವೆ ಹೊರತು ಕನ್ನಡ ಭಾಷೆಯಲ್ಲಿ ಮಗು ಪಡೆದ…
ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯಾರಾದ “ಧರ್ಮದೈವ” ಸಿನಿಮಾದ ಪೋಸ್ಟರನ್ನು ವಿಧಾನ ಸಭಾ ಸ್ಪೀಕರ್ ಯು ಟಿ ಖಾದರ್ ಅವರು ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆಗೊಳಿಸಿದರು. ತುಳುನಾಡಿನ ಆರಾಧನೆ, ಭಕ್ತಿ ಶಕ್ತಿಯನ್ನು ಒಳಗೊಂಡ ದೈವಾರಾಧನೆಯ ಬಗ್ಗೆ ಜನರಿಗೆ ಅಪಾರ ಆಸಕ್ತಿ ನಂಬಿಕೆ ಇದೆ. ಕಾಂತಾರದ ಬಳಿಕ ದೈವಕ್ಕೆ ಮಹತ್ವ ನೀಡುವ ಮತ್ತು ದೈವದ ಕಾರಣಿಕವನ್ನು ಪ್ರತಿಬಿಂಬಿಸುವ “ಧರ್ಮದೈವ” ಸಿನಿಮಾ ಜುಲೈ 5ರಂದು ತೆರೆ ಕಾಣಲಿದೆ. ತುಳುನಾಡಿನ ಕತೆ, ದೈವದ ಕತೆ, ಇದು ತುಳುವರ ನಂಬಿಕೆಯನ್ನು ಉಳಿಸಿ ಭಕ್ತಿಭಾವದ ಕತೆ. ಇದನ್ನು ಮನೆಮಂದಿ ವೀಕ್ಷಿಸಬಹುದಾಗಿದೆ. ಈಗಾಗಲೇ ಸಿನಿಮಾದ ಟೀಸರ್ ನೋಡಿದೆ. ಕಾಂತಾರದ ಬಳಿಕ ದೈವಭಕ್ತಿಯ ಧರ್ಮದೈವ ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು ಪ್ರೋತ್ಸಾಹಿಸಿ ಎಂದು ಯುಟಿ ಖಾದರ್ ತಿಳಿಸಿದರು. ಈ ಸಂದರ್ಭದಲ್ಲಿ ಸಿನಿಮಾದ ನಿರ್ದೇಶಕ ನಿತಿನ್ ರೈ ಮತ್ತು ನಿರ್ಮಾಪಕ ರಾಕೇಶ್ ಶೆಟ್ಟಿಯವರನ್ನು ಅಭಿನಂದಿಸಿ ಸಿನಿಮಾಕ್ಕೆ…
ಚದುರಂಗ ಆಟಗಾರರ ಮೆದುಳನ್ನು ಜಾಗೃತಿಗೊಳಿಸುವ, ಬುದ್ಧಿಮತ್ತೆಯನ್ನು ಹೆಚ್ಚಿಸುವ ಕ್ರೀಡೆಯಾಗಿದೆ ಎಂದು ಪಡುಬಿದ್ರಿಯ ಆಸ್ಟ್ರಿನ್ ಇನ್ಫ್ರಾ ಪ್ರೈವೇಟ್ ಲಿ. ಸಂಸ್ಥೆಯ ಮಹಾಪ್ರಬಂಧಕ ಅಶೋಕ್ ಕುಮಾರ್ ಶೆಟ್ಟಿ ಹೇಳಿದರು. ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಉಡುಪಿ ಮತ್ತು ಕಾಪು ಇವರ ಆಶ್ರಯದಲ್ಲಿ ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನದ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ರಾಷ್ಟ್ರ ಮಟ್ಟದ ಫಿಡೆ ರೇಟೆಡ್ ರ್ಯಾಪಿಡ್ ಚೆಸ್ -22ನೇ ಶ್ರೀ ನಾರಾಯಣ ಗುರು ಟ್ರೋಫಿ ಚೆಸ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಪು ಶ್ರೀ ಹಳೆ ಮಾರಿಗುಡಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಶ್ರೀಧರ್ ಶೆಣೈ ಪಂದ್ಯಾಟ ಉದ್ಘಾಟಿಸಿದರು. ಮಂಗಳೂರು ಎಫಿಲೆನ್ಸ್ ಟೆಕ್ನಾಲಜೀಸ್ ಡಿಜಿಟಲ್ ಮಾರ್ಕೆಟಿಂಗ್ ಕಂಪನಿಯ ಸ್ಥಾಪಕ ಅವಿನಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆಸ್ಟ್ರಿನ್ ಇನ್ಫ್ರಾ ಪ್ರೈವೇಟ್ ಲಿ. ನ ಮಹಾಪ್ರಬಂಧಕ ಅಶೋಕ್ ಕುಮಾರ್ ಶೆಟ್ಟಿ, ಕೈಪುಂಜಾಲು ವಿದ್ಯಾಸಾಗರ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ರಮೇಶ್ ಆರ್. ಪೂಜಾರಿ ಚೆಸ್ ಕಾಯಿಯನ್ನು…
ಮಾಲಿನಿ ಶೆಟ್ಟಿ ಇನ್ನಂಜೆ ಅವರು ಶಂಕರಪುರ ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದಾರೆ. ಕಾಪು ಪರಿಸರದಲ್ಲಿ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರುವ ಮಾಲಿನಿ ಶೆಟ್ಟಿಯವರು ಇನ್ನಂಜೆ ಯುವತಿ ಮಂಡಲ ಇದರ ಪೂರ್ವ ಅಧ್ಯಕ್ಷೆಯಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇನ್ನಂಜೆ ಒಕ್ಕೂಟದ ಮಾಜಿ ಅಧ್ಯಕ್ಷೆಯಾಗಿ, ಕಾಪು ಬಂಟರ ಸಂಘ ಇದರ ಸದಸ್ಯೆಯಾಗಿ, ರೋಟರ್ಯಾಕ್ಟ್ ಕ್ವೀನ್ ಆಗಿ ಮೂಡಿ ಬಂದ ಇವರು 2018-19 ರಲ್ಲಿ ರೋಟರ್ಯಾಕ್ಟ್ ಡಿಸ್ಟ್ರಿಕ್ಟ್ -3182 ರ ಮೊದಲ ಮಹಿಳಾ ಜಿಲ್ಲಾ ಪ್ರತಿನಿಧಿಯಾಗಿ (ಡಿ ಆರ್ ಆರ್) ಸುಮಾರು 42 ಕ್ಲಬ್ ಗಳನ್ನು ಮಾಡಿ ಯಶಸ್ವಿ ಪರಿಚಯ ಕಾನ್ಫರೆನ್ಸ್ ಮಾಡಿದ ಹೆಗ್ಗಳಿಕೆ ಇವರದ್ದು. 2015 ರಲ್ಲಿ ರಾಜಕೀಯ ಜೀವನಕ್ಕೆ ಕಾಲಿಟ್ಟ ಇವರು ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯರಾಗಿ, 5 ವರ್ಷ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು ಪ್ರಸ್ತುತ ಇನ್ನಂಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. 2023 ರಲ್ಲಿ ಜೇಸಿಐ ಶಂಕರಪುರ ಜಾಸ್ಮಿನ್ ನ ಬೆಳ್ಳಿ ಹಬ್ಬದ…
ಯಕ್ಷಗಾನ ಮತ್ತು ಯಕ್ಷಗಾನ ತಾಳಮದ್ದಳೆ ಕ್ಷೇತ್ರವು ಉಳಿಯಬೇಕು, ಬೆಳೆಯಬೇಕು, ಹೊಸ ಹೊಸ ಕಲಾವಿದರು ಈ ರಂಗದಲ್ಲಿ ಸೃಷ್ಟಿಯಾಗಬೇಕು ಎನ್ನುವ ಉದ್ದೇಶವನ್ನಿರಿಸಿಕೊಂಡು ಮುಂಬಯಿ ನಗರದಾದ್ಯಂತ ಅಲ್ಲಲ್ಲಿ ಯಕ್ಷಗಾನ ಆಸಕ್ತರಿಗಾಗಿ ಶಿಬಿರವನ್ನು ಆಯೋಜಿಸಿ ಈ ಮೂಲಕ ಯುವ ಜನಾಂಗಕ್ಕೆ ಯಕ್ಷಗಾನ ಬಗ್ಗೆ ತಿಳುವಳಿಕೆ ಮತ್ತು ದೀಕ್ಷೆಯನ್ನು ನೀಡುತ್ತಾ ಬಂದಿರುವುದೇ ಅಲ್ಲದೇ ನಗರದ ಅನೇಕ ನಾಮಾಂಕಿತ ಕಲಾಪೋಷಕ ಗಣ್ಯ ಕನ್ನಡಿಗ ಉದ್ಯಮಿಗಳಿಗೂ, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳಿಗೂ ಯಕ್ಷಗಾನ ದೀಕ್ಷೆಯನ್ನು ನೀಡಿ ಅವರೆಲ್ಲರೂ ಕಲಾವಿದರ ಸಾಲಿನಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ ಹಿರಿತನ ಯಕ್ಷಗುರು ಬಾಲಕೃಷ್ಣ ಶೆಟ್ಟಿಯವರಿಗೆ ಹಾಗೂ ಅವರ ಸಂಚಾಲಕತ್ವದಲ್ಲಿ ಕಳೆದ ಸುಮಾರು 23 ವರ್ಷಗಳಿಂದ ಕಾರ್ಯರೂಪದಲ್ಲಿರುವ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿಗೆ ಸಲ್ಲುವಂತಿದೆ. ಅದೇ ರೀತಿ ತವರೂರ ಅನೇಕ ಪ್ರಸಿದ್ಧ ನಾಮಾಂಕಿತ ಹಾಗೂ ಪ್ರತಿಭೆ ಇದ್ದರೂ ಸೂಕ್ತ ವೇದಿಕೆಯ ಮತ್ತು ಅವಕಾಶದ ಕೊರತೆ ಅನುಭವಿಸುತ್ತಿರುವ ತೆರೆಯ ಮರೆಯ ಯುವ ಪ್ರತಿಭಾವಂತ ಕಲಾಕಾರರನ್ನು ಆಯ್ದು ಅವರನ್ನು ತವರೂರಿನಿಂದ ಮುಂಬಯಿ ಮಹಾನಗರಕ್ಕೆ ಆಹ್ವಾನಿಸಿ, ಅವರ ಪ್ರತಿಭೆಯನ್ನು ಅನಾವರಣಗೊಳಿಸಲು ಯೋಗ್ಯ…
ವಿದ್ಯಾಗಿರಿ: ‘ಸಾಹಿತಿಕ ಕಥನದ ನಿರೂಪಣೆ ಮತ್ತು ಸಿನಿಮಾದ ನಿರೂಪಣೆಯು ವಿಭಿನ್ನ’ ಎಂದು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಇಂಗ್ಲೀಷ್ ವಿಭಾಗದ ಸಹಪ್ರಾಧ್ಯಾಪಕ ಸಾತ್ವಿಕ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ‘ಆಳ್ವಾಸ್ ಸಿನಿಮಾ ಸಮಾಜ’ದ ಆಶ್ರಯದಲ್ಲಿ ಮಂಗಳವಾರ ನಡೆದ ‘ನಿರೂಪಣಾ ತಲ್ಲೀನತೆ’ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸಿನಿಮಾಕ್ಕೆ ನಿರ್ದಿಷ್ಟ ಕತೆ ಮುಖ್ಯವಾಗುವುದಿಲ್ಲ. ಸಿನಿಮಾ ನಿರೂಪಣೆಯ ಕಥನ ಶೈಲಿಯೇ ಪ್ರಮುಖವಾಗುತ್ತದೆ. ಸಾಹಿತ್ಯಿಕ ಭಾಷೆ ಹಾಗೂ ಸಿನಿಮಾ ಭಾಷೆಗಳೆರಡೂ ವಿಭಿನ್ನ ಎಂದು ಪ್ರಾತ್ಯಕ್ಷಿಕೆ ಸಹಿತ ವಿವರಿಸಿದರು. ಪ್ರತಿ ಸಿನಿಮಾವೂ ನೋಡುಗನ ದೃಷ್ಟಿಕೋನದಲ್ಲಿ ಬೇರೆ ಬೇರೆ ಅರ್ಥ ಕಲ್ಪಿಸಬಹುದು. ಆದರೆ, ಯಶಸ್ವಿ ನಿರ್ದೇಶಕನೊಬ್ಬ ತನ್ನ ಕಥಾ ಹಂದರವನ್ನು ಪರಿಣಾಮಕಾರಿಯಾಗಿ ನೋಡುಗರಿಗೆ ತಲುಪಿಸಿದಾಗ ಯಶಸ್ವಿ ಎನಿಸಿಕೊಳ್ಳುತ್ತಾನೆ ಎಂದರು. ಸಾಮಾನ್ಯ ವೀಕ್ಷಣೆಯಿಂದ ಸಿನಿಮಾ ಸೂಕ್ಷ್ಮತೆಗಳನ್ನು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ಸಿನಿಮಾವನ್ನು ಇತರ ಮಾಧ್ಯಮಕ್ಕೆ ಬದಲಾಯಿಸಿದರೆ ಸ್ವಾರಸ್ಯ ಕಳೆದುಕೊಳ್ಳುವ ಸಾಧ್ಯತೆ ಇದೆ. ಸಿನಿಮಾಗಳು ವಿಭಿನ್ನ ವಿಚಾರಗಳ ಸಮೀಕರಣ ಎಂದರು. ಸಿನಿಮಾ ಎಂದರೇನು? ಸಿನಿಮಾವನ್ನು ನೋಡುವುದು ಹೇಗೆ?…
ಮೂಡುಬಿದಿರೆ: ದೇಶದ 142 ಕೋಟಿ ಜನಸಂಖ್ಯೆಯಲ್ಲಿ 50 ಕೋಟಿಯ ವರೆಗೆ ವಿದ್ಯಾರ್ಥಿಗಳು ಇರುವುದು ನಮ್ಮ ಭಾಗ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಜಿಲ್ಲಾ ಆಯುಕ್ತ ಡಾ. ಎಂ ಮೋಹನ ಆಳ್ವ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಮೂಡುಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಬುಧವಾರ ನಡೆದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳ ಸಮಾಲೋಚನಾ ಕಾರ್ಯಾಗಾರದಲ್ಲಿ ಅವರುಮಾತನಾಡಿದರು. ವಿದ್ಯಾರ್ಥಿಗಳ ವಿದ್ಯೆ ಹಾಗೂ ಬುದ್ಧಿಯನ್ನು ಬೆಳೆಸುವುದರ ಜೊತೆಗೆ ಒಂದು ಒಳ್ಳೆಯ ಮನಸ್ಸನ್ನು ಕಟ್ಟುವ ಅವಶ್ಯಕತೆ ಇದೆ. ಇದನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ನೆರವೇರಿಸಲು ಸಾಧ್ಯ ಎಂದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಇರುವ ಅವಕಾಶಗಳು ಅಪಾರ. ಸ್ಕೌಟ್ಸ್ ಮತ್ತು ಗೈಡ್ಸ್ ನ ಚಟುವಟಿಕೆಗಳು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಪಸರಿಸಬೇಕು ಎಂದರು. ಜಿಲ್ಲೆಯ…
ಸಂತ ಫಿಲೋಮಿನಾ ಕಾಲೇಜಿನ ಯಕ್ಷಕಲಾ ಕೇಂದ್ರ ಹಾಗೂ ದೇಶಭಕ್ತ ಎನ್.ಎಸ್. ಕಿಲ್ಲೆ ಪ್ರತಿಷ್ಠಾನಗಳ ಸಹಯೋಗದೊಂದಿಗೆ ‘ಫಿಲೋ ಯಕ್ಷಾಮೃತ’ ಪ್ರಮಾಣ ಪತ್ರ ಪ್ರದಾನ ಕಾರ್ಯಕ್ರಮವು ಇತ್ತೀಚೆಗೆ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಭಾಭವನದಲ್ಲಿ ನಡೆಯಿತು. ಯಕ್ಷಾಮೃತ ಸರ್ಟಿಫಿಕೇಟ್ ಕೋರ್ಸ್ ನಲುವತ್ತು ಗಂಟೆಗಳ ಪಠ್ಯವನ್ನು ಹೊಂದಿದ್ದು, ಲಿಖಿತ ಮತ್ತು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ವಂದನೀಯ ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ ‘ಕಲೆಯು ವಿಶ್ವ ಮಾನ್ಯ. ಅದು ಜಾತಿ ಅಂತಸ್ತುಗಳ ಪರಿಧಿಯನ್ನು ಮೀರಿ ಪ್ರತಿಭಾ ಸಂಪನ್ನರಾದ ಸರ್ವರಿಗೂ ಒಲಿಯುವ ವಿಶೇಷ ವಿದ್ಯೆ. ಅದಕ್ಕೆ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಬೆಳಗಿಸುವ ಅಪೂರ್ವ ಶಕ್ತಿ ಇದೆ’ ಎಂದರು. ಯಕ್ಷಗಾನ ರಂಗ ಪ್ರಯೋಗ ಕಲೆಯ ಸರ್ಟಿಫಿಕೇಟ್ ಕೋರ್ಸ್ ‘ಯಕ್ಷಾಮೃತ’ ದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು. ದೇಶಭಕ್ತ ಎನ್.ಎಸ್. ಕಿಲ್ಲೆ ಪ್ರತಿಷ್ಠಾನದ ಅಧ್ಯಕ್ಷ ಕಡಮಜಲು ಸುಭಾಷ್ ರೈ ಅವರು ಪ್ರಮಾಣ ಪತ್ರ ವಿತರಣೆ ಮಾಡಿ,…