Author: admin
ತ್ರಿರಂಗ ಸಂಗಮ ಮುಂಬಯಿ ಸಂಯೋಜನೆಯಲ್ಲಿ ಜೂನ್ 23ರಂದು ಥಾಣೆಯಲ್ಲಿ ‘ಧರ್ಮದೈವ’ ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನ
ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ ಮತ್ತು ನವೀನ್ ಶೆಟ್ಟಿ ಇನ್ನಾ ಬಾಳಿಕೆಯವರ ಮುಂದಾಳತ್ವದಲ್ಲಿ ಕಾರ್ಯ ರೂಪದಲ್ಲಿರುವ ತ್ರಿರಂಗ ಸಂಗಮ ಮುಂಬಯಿಯ ಆಶ್ರಯದಲ್ಲಿ ಇದೇ ಜೂನ್ 23 ರ ಆದಿತ್ಯವಾರದಂದು ಬೆಳಿಗ್ಗೆ ‘ಧರ್ಮದೈವ’ ತುಳು ಚಿತ್ರದ ಪ್ರೀಮಿಯರ್ ಶೋ ಪ್ರದರ್ಶನಗೊಳ್ಳಲಿದೆ. ಯುವ ನಿರ್ಮಾಪಕ ಬಿಳಿಯೂರು ರಾಕೇಶ್ ಭೋಜರಾಜ್ ಶೆಟ್ಟಿ ಬಹಳಷ್ಟು ಶ್ರದ್ಧೆ- ಭಕ್ತಿಯಿಂದ ‘ಧರ್ಮದೈವ’ ಎಂಬ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಹಾಗೆಯೇ ಅವರ ಆಪ್ತಮಿತ್ರ ಆದರ್ಶ್ ಫಿಲಂ ಇನ್ಸ್ಟಿಟ್ಯೂಟ್ ನ ಪದವೀಧರ ನಿತಿನ್ ರೈ ಕುಕ್ಕುವಳ್ಳಿ ತನ್ನದೇ ಕಥೆಯಿಂದ ಕೂಡಿದ ಈ ಧರ್ಮದೈವ ಚಿತ್ರದ ಪೂರ್ಣ ನಿರ್ದೇಶಕರಾಗಿ ಚಿತ್ರಕ್ಕೆ ಜೀವ ಕಲೆಯನ್ನು ತುಂಬಿದ್ದಾರೆ. ಚಿತ್ರ ಕಥೆ, ಸಂಭಾಷಣೆಯನ್ನು ಹಮೀದ್ ಪುತ್ತೂರು ಕೂರ್ನಡ್ಕ ಅಚ್ಚ ತುಳು ಭಾಷೆಗೆ ರೂಪಾಂತರಿಸಿದ್ದಾರೆ. ಅರುಣ್ ರೈ ಕೆದಂಬಾಡಿ ಉತ್ತಮ ಛಾಯಾಗ್ರಹಣದ ಮೂಲಕ ‘ಧರ್ಮದೈವ’ ದ ಮಹಿಮೆ ಪ್ರೇಕ್ಷಕರನ್ನು ಆಕರ್ಷಿಸುವ ರೂಪದಲ್ಲಿ ತನ್ನ ಪ್ರತಿಭೆ ಮತ್ತು ಕೈ ಚಳಕದಿಂದ ಚೆನ್ನಾಗಿ ಮೂಡಿ ಬರುವಂತೆ ಮಾಡಿದ್ದಾರೆ. ಚಿತ್ರದಲ್ಲಿ ದೈವದ ಮಹಿಮೆ,…
ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ವತಿಯಿಂದ ಮಿಜಾರು ಶೋಭಾವನದ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಬಾರಿಯ ಯೋಗ ದಿನಾಚರಣೆ ಧ್ಯೇಯ- ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಅಡಿಯಲ್ಲಿ ಕಾಲೇಜಿನ 400ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗಾಸನ ಮಾಡಿದರು. ಯೋಗ ಪೆÇ್ರೀಟೋಕಾಲ್ ನಿಯಮಾವಳಿ ಅನುಸಾರವಾಗಿ ತಾಡಾಸನ, ವೃಕ್ಷಸಾನ, ತ್ರಿಕೋನಾಸನ, ಅರ್ಧಚಕ್ರಾಸನ, ಇನ್ನಿತರ ಆಸನ ಮಾಡುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಿತು. ವಿದ್ಯಾರ್ಥಿ ಸ್ಫೂರ್ತಿ ಮೊಯ್ಲಿ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಭಾಗದ ವಿದ್ಯಾರ್ಥಿಗಳಿಗೆ ಯೋಗ ದಿನಾಚರಣೆಯ ಪ್ರಯುಕ್ತ ಪೆÇೀಸ್ಟರ್ ತಯಾರಿಕೆ, ವಿಡೀಯೋ ತಯಾರಿಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರಾಂಶುಪಾಲೆ ಡಾ.ವನಿತಾ ಶೆಟ್ಟಿ, ಯೋಗ ವಿಭಾಗದ ಡೀನ್ ಡಾ.ಅರ್ಚನಾ ಇದ್ದರು. ವಿಭಾಗದ ವಿದ್ಯಾರ್ಥಿಗಳು ನೆರೆಹೊರೆಯ ಶಾಲಾ – ಕಾಲೇಜುಗಳಲ್ಲಿ ಕಳೆದ 10 ದಿನಗಳು ಯೋಗ ತರಬೇತಿಯನ್ನು ಉಚಿತವಾಗಿ ನಡೆಸಿಕೊಟ್ಟರು. ಪುರಭವನ: ಆಳ್ವಾಸ್ ಶಿಕ್ಷಣ ಸಂಸ್ಥೆಯ 50 ವಿದ್ಯಾರ್ಥಿಗಳು ಜಿಲ್ಲಾ ಆಯುಧ ವಿಭಾಗವು ಮಂಗಳೂರಿನ…
ಬ್ರಹ್ಮಾವರ, ಜೂನ್ 21: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ “ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” ಎಂಬ ಸಂದೇಶದೊಂದಿಗೆ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಪತಂಜಲಿಯ ಯೋಗ ಶಿಕ್ಷಕಿ ಶಿಲ್ಪಾ ಕೆ. ವಿ ಯವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಮಾತನಾಡಿ ಯೋಗದಿಂದ ಎಲ್ಲಾ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಯೋಗವು ಕಲಿಕೆಯಲ್ಲಿ ಏಕಾಗ್ರತೆಯನ್ನು ಸಾಧಿಸಿ ಜೀವನದಲ್ಲಿ ಯಶಸ್ಸನ್ನು ಪಡೆಯಲು ನೆರವಾಗುತ್ತದೆ ಎಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರು ಭಾರತದ ಯೋಗ ಪರಂಪರೆಗೆ ವಿಶ್ವವೇ ಗೌರವಿಸುತ್ತಿದೆ. ಸ್ವಸ್ಥ ಮನಸ್ಸು ಜೀವನಕ್ಕಾಗಿ ಯೋಗ ಮಾಡೋಣವೆಂದು ಸಂದೇಶ ನೀಡಿದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ವಿದ್ಯಾರ್ಥಿಗಳಿಂದ ಯೋಗಾಭ್ಯಾಸದ ಪ್ರತಿಜ್ಞೆಯನ್ನು ಸ್ವೀಕರಿಸಿ ಮಾತನಾಡಿ ಇಂದು ವಿಶ್ವವೇ ಈ ದಿನವನ್ನು ಆಚರಿಸುತ್ತಿದೆ. ಇದು ಒಂದು ದಿನಕ್ಕೆ ಸೀಮಿತವಾಗಿರದೇ ನಿತ್ಯವೂ ಮಕ್ಕಳೆಲ್ಲರೂ ಯೋಗವನ್ನು ಮಾಡಬೇಕು. ಉತ್ತಮ ಅರೋಗ್ಯಕ್ಕೆ, ನೆಮ್ಮದಿಗೆ ಯೋಗ ಅನಿವಾರ್ಯವೆಂದರು. ಸಂಸ್ಥೆಯ ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅತಿಥಿಗಳ…
ಬಂಟರ ಸಂಘ ಮುಂಬಯಿ ಇದರ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಮತ್ತು ಆಯೋಜನೆಯಲ್ಲಿ ವಿಶ್ವ ಪರಿಸರ ದಿನದ ನಿಮಿತ್ತ ಸಸಿ ನೆಡುವ ಕಾರ್ಯಕ್ರಮ ಹಾಗೂ ವಿಶ್ವ ಯೋಗ ದಿನ ನಿಮಿತ್ತ ಯೋಗ ಗುರುಗಳ ಯೋಗ್ಯ ಮಾರ್ಗದರ್ಶನದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಜೂನ್ 21 ರಂದು ಶುಕ್ರವಾರ ಬೆಳಿಗ್ಗೆ ಪನ್ವೇಲ್ ನ ಜ್ಞಾನಮಯಿ ಮಾಧ್ಯಮಿಕ ವಿದ್ಯಾಲಯದಲ್ಲಿ ಜರಗಲಿದೆ. ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ್ ಶೆಟ್ಟಿ ದಕ್ಷಿಣ್ ಇವರ ಮುಂದಾಳತ್ವದಲ್ಲಿ ಜರಗಲಿರುವ ಈ ಕಾರ್ಯಕ್ರಮದಲ್ಲಿ ಬೆಳಿಗ್ಗೆ ನೆರವೇರಲಿರುವ ವನಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪನ್ವೇಲ್ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಮಾಜಿ ಸಭಾಪತಿ, ನಗರ ಸೇವಕ ಸಂತೋಷ್ ಜಿ. ಶೆಟ್ಟಿಯವರು ಹಾಗೂ ಗೌರವ ಅತಿಥಿಯಾಗಿ ಪನ್ವೇಲ್ ನ ಮಾಜಿ ನಗರ ಸೇವಕಿ ಅನಿತಾ ಎಸ್. ಶೆಟ್ಟಿಯವರು ಉಪಸ್ಥಿತರಿರುವರು. ಈ ಕಾರ್ಯಕ್ರಮದ ನಿಮಿತ್ತ ಸಮಾಜ…
ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ “ಆರಾಟ” ಕನ್ನಡ ಸಿನಿಮಾ ಜೂನ್ 21ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಪಿ.ವಿ.ಆರ್, ಸಿನಿಪೊಲಿಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಸುರತ್ಕಲ್ ಸಿನಿಗ್ಯಾಲಕ್ಸಿ, ಕಾಸರಗೋಡು ಸಿನಿಕೃಷ್ಣ ಮುಂತಾದ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣಲಿದ್ದು ಚಿತ್ರದ ಟೀಸರ್, ಟ್ರೈಲರ್ ಹಾಗೂ 2 ಹಾಡುಗಳನ್ನು ಕನ್ನಡದ ಹೆಸರಾಂತ ಯೂಟ್ಯೂಬ್ ಚಾನೆಲ್ ಆನಂದ್ ಆಡಿಯೋ ಮೂಲಕ ಬಿಡುಗಡೆಗೊಳಿಸಲಾಗಿದ್ದು ಈಗಾಗಲೇ ಜನಮನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ ಎಂದರು. ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿಭಾಗಗಳಾದ ಮುಡಿಪು, ಆನೇಕಲ್ಲು, ಉಪ್ಪಳ, ಮಂಗಲ್ಪಾಡಿ ಹಾಗೂ ಕುಬಣೂರು ಪರಿಸರದಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸುಮಾರು 20 ದಿನಗಳ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದ್ದು ಪಿ.ಎನ್.ಆರ್ ಬ್ಯಾನರ್ ನ ಅಡಿಯಲ್ಲಿ ರಾಘವೇಂದ್ರ ಹೊಳ್ಳ ಟಿ, ರಾಂಪ್ರಸಾದ್…
ಬದಲಾದ ಕಾಲ ಘಟ್ಟದಲ್ಲಿ ಬದಲಾವಣೆಗೆ ಹೊಂದಿಕೊಳ್ಳದೆ ಹೋದರೆ ವ್ಯಕ್ತಿ ಅಪ್ರಸ್ತುತನಾಗುತ್ತಾನೆ. ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಜತೆಗೆ ಕೌಶಲ್ಯ ಅಭಿವೃದ್ಧಿ ಮತ್ತು ತಾಂತ್ರಿಕ ಜ್ಞಾನ ಪಡೆದುಕೊಂಡು ಕ್ಷಮತೆಯನ್ನು ಹೊಂದುವುದು ಯಶಸ್ಸಿಗೆ ಅತ್ಯಗತ್ಯವಾಗಿದೆ ಎಂದು ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಡುಪಿಯ ಅಧ್ಯಕ್ಷ ಬಿ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ ಕಂಪನಿ ಮಂಗಳೂರು ಪ್ರಾಯೋಜಕತ್ವದಲ್ಲಿ ಕುಂತಳನಗರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಉಚಿತ ಕಂಪ್ಯೂಟರ್ ಸಾಕ್ಷರತಾ ತರಬೇತಿಯ 15 ನೇ ಬ್ಯಾಚ್ ನ ವಿದ್ಯಾರ್ಥಿಗಳ ಪ್ರಮಾಣಪತ್ರ ವಿತರಣೆ ಹಾಗೂ 16 ನೇ ಬ್ಯಾಚ್ ನ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿದರು. ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ…
ಪುತ್ತೂರು ತಾಲೂಕು ಬಂಟರ ಸಂಘದ ಮಹಾಸಭೆಯು ಜೂನ್ 22 ರಂದು ಬೆಳಿಗ್ಗೆ 10.30 ರಿಂದ ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಲಿದೆ. ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ ಮಟ್ಟ) ಕಬಡ್ಡಿ ಪಂದ್ಯಾಟದ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮಹಿಳಾ ವಿಭಾಗದಲ್ಲಿ ಉಜಿರೆಯ ಎಸ್ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜುಗಳು ಚಾಂಪಿಯನ್ ಆಗಿವೆ. ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ಅಂಕಣದಲ್ಲಿ ಬುಧವಾರ ನಡೆದ ಪುರುಷರ ಫೈನಲ್ನಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ಮಣಿಸಿದ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಪ್ರಶಸ್ತಿ ಎತ್ತಿ ಹಿಡಿಯಿತು. ಮಹಿಳಾ ವಿಭಾಗದಲ್ಲಿ ಬಾಗಲಕೋಟೆಯ ಸಜ್ಜಲಶ್ರೀ ಇನ್ಸ್ಟಿಟ್ಯೂಟ್ ಆಫ್ ನಸಿರ್ಂಗ್ ಸೈನ್ಸಸ್ ಕಾಲೇಜನ್ನು ಮಣಿಸಿದ ಉಜಿರೆಯ ಎಸ್ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಆತಿಥೇಯ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ…
ವಿದ್ಯಾಗಿರಿ: ಭಾಷಾ ಶಾಸ್ತ್ರದಲ್ಲಿ ಪರಿಣಿತಿ ಹೊಂದಿದಾಗ ಇಂಗ್ಲಿಷ್ ಅಧ್ಯಯನ ಸುಲಲಿತವಾಗುತ್ತದೆ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ. ಪ್ರಸಾದ್ ರಾವ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಇಂಗ್ಲಿಷ್ ವಿಭಾಗದ ವತಿಯಿಂದ ಕಾಲೇಜಿನ ಎ.ವಿ ಹಾಲ್ ನಲ್ಲಿ ಬುಧವಾರ ನಡೆದ ಭಾμÁಶಾಸ್ತ್ರ ವಿಷಯದ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳ ಶಿಕ್ಷಣ ವ್ಯವಸ್ಥೆಯಲ್ಲಿ ತಜ್ಞ ಅಧ್ಯಾಪಕರ ಕೊರತೆ ಇದೆ ಎಂದು ಸಾಮಾನ್ಯವಾಗಿ ಹೇಳುತ್ತಾರೆ. ಆದರೆ ಇದು ಸತ್ಯಕ್ಕೆ ದೂರವಾದ ಮಾತು. ವಿದ್ಯಾರ್ಥಿಗಳು ಜ್ಞಾನದ ಅನ್ವೇಷಣೆಯಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಂಡರೆ, ಅಧ್ಯಾಪಕರೊಂದಿಗೆ ಚರ್ಚಿಸಿದರೆ, ಅಧ್ಯಾಪಕರು ಜ್ಞಾನವನ್ನು ವೃದ್ಧಿಸಿಕೊಳ್ಳಲು ಹೆಚ್ಚು ಶ್ರಮವನ್ನು ವಹಿಸುತ್ತಾರೆ ಎಂದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಆಳ್ವಾಸ್ ಕಾಲೇಜಿನ ಕುಲಸಚಿವ (ಅಕಾಡೆಮಿಕ್ಸ್) ಡಾ.ಟಿ ಕೆ ರವಿಚಂದ್ರನ್ ಸ್ವಾಗತಿಸಿ, ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಪವಿತ್ರ ತೇಜ್ ನಿರೂಪಿಸಿ, ವಂದಿಸಿದರು.
ಬಂಟರ ಸಂಘ ಮುಂಬಯಿ ಹಲವು ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು ಪ್ರಾರಂಭದಿಂದಲೇ ಸಂಘವು ವಿದ್ಯೆಗೆ ಒತ್ತು ನೀಡುತ್ತಾ ಬಂದಿದೆ. ಸಮಾಜದಲ್ಲಿ ಶೈಕ್ಷಣಿಕ ಅಭಿವೃದ್ಧಿ ಬಂಟರ ಸಂಘದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ. ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲಾ ರೀತಿಯ ಸೌಲಭ್ಯಗಳೊಂದಿಗೆ ವಿವಿಧ ರೀತಿಯ ಶಿಕ್ಷಣಕ್ಕೆ ಅವಕಾಶವಿದ್ದು ನಮ್ಮ ಮಕ್ಕಳಿಗೆ ಮಾತ್ರವಲ್ಲದೇ ಇತರ ಸಮಾಜದ ತುಳು ಕನ್ನಡಿಗ ಮಕ್ಕಳಿಗೂ ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ರಿಯಾಯಿತಿ ಇದ್ದು ಸಮಾಜದ ಮಕ್ಕಳಿಗೆ ದೊರೆಯುವ ಈ ವಿಶೇಷ ರಿಯಾಯಿತಿಯ ಸದುಪಯೋಗ ಪಡೆಯಬೇಕು ಎಂದು ಬಂಟರ ಸಂಘ ಮುಂಬಯಿ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ ನುಡಿದರು. ಬಂಟರ ಸಂಘ ಮುಂಬಯಿ ವಸಾಯಿ – ದಹಾಣು ಪ್ರಾದೇಶಿಕ ಸಮಿತಿಯಿಂದ ಜೂನ್ 16 ರಂದು ನಾಲಾಸೋಪಾರ ಪಶ್ಚಿಮದ ಹೋಟೆಲ್ ಗ್ಯಾಲಕ್ಸಿ ಸಭಾಗೃಹದಲ್ಲಿ ಸಂಘದ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ಸಮಾಜದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿಧವೆಯರಿಗೆ ಹಾಗೂ ವಿಕಲ ಚೇತನರಿಗೆ 2024 ರ ಆರ್ಥಿಕ ಸಹಾಯವನ್ನು ವಿತರಿಸಲಾಗಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ…