Author: admin
ಕುರಿಯ ಮಾಡಾವು ಏಳ್ನಾಡುಗುತ್ತು ಅಮ್ಮಕ್ಕ ತ್ಯಾಂಪಣ್ಣ ರೈ ಸ್ಮರಣಾರ್ಥ ೧೨ ನೇ ವರ್ಷದ ಪುಸ್ತಕ ವಿತರಣೆ, ವಿದ್ಯಾಸಿರಿ ಪುರಸ್ಕಾರ
ಜನ್ಮ ಫೌಂಡೇಶನ್ ಟ್ರಸ್ಟ್ ಪುತ್ತೂರು ಇದರ ನೇತೃತ್ವದಲ್ಲಿ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರಾಥಮಿಕ) ಕೆಯ್ಯೂರು ಇದರ ಸಹಕಾರದೊಂದಿಗೆ ಕುರಿಯ ಮಾಡಾವು ಏಳ್ನಾಡುಗುತ್ತು ಅಮ್ಮಕ್ಕ ತ್ಯಾಂಪಣ್ಣ ರೈ ಸ್ಮರಣಾರ್ಥ ೧೨ ನೇ ವರ್ಷದ ಪುಸ್ತಕ ವಿತರಣೆ ಹಾಗೂ ವಿದ್ಯಾಸಿರಿ ಪುರಸ್ಕಾರ ಜೂ.೧೮ ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇದರ ಪ್ರಾಥಮಿಕ ವಿಭಾಗದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೆಯ್ಯೂರು ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರು ದೀಪ ಬೆಳಗಿಸಿ ಉದ್ಘಾಟಿಸಿ, ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಕೋಶ ಓದು, ದೇಶ ಸುತ್ತು ಎಂಬಂತೆ ಹರ್ಷಕುಮಾರ್ ರೈಯವರು ತಾನು ಕಲಿತ ಶಾಲೆಗೆ ತನ್ನಿಂದ ಸಾಧ್ಯವಾಗುವ ರೀತಿಯಲ್ಲಿ ಸಹಾಯ ಮಾಡುತ್ತಾ ಬಂದಿದ್ದಾರೆ. ಅವರು ನೀಡಿದ ಪುಸ್ತಕಗಳನ್ನು ಸದ್ಭಳಕೆ ಮಾಡಿಕೊಂಡು ಒಳ್ಳೆಯ ವಿದ್ಯಾರ್ಥಿಗಳಾಗಿ ಉತ್ತಮ ಶಿಕ್ಷಣವನ್ನು ಪಡೆಯುವಂತಾಗಿರಿ ಎಂದು ಹೇಳಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷ…
ಹಿಂದೊಂದು ಕಾಲವಿತ್ತು- ಹಿರಿಯರು ಬದುಕಿ ಬಾಳಿದ ಮನೆಯಲ್ಲಿ, ಅವರ ಪಡಿನೆರಳಾಗಿ ಇದ್ದು ದುಡಿಯುತ್ತಾ, ಮದುವೆ ಆಗಿ ಮಕ್ಕಳಾದ ಮೇಲೆ ಅವರ ಬೇಕು ಬೇಡಗಳನ್ನು ಪೂರೈಸಿ, ಅವರ ಜೀವನ ಒಂದು ಹಂತಕ್ಕೆ ಬಂದ ಮೇಲೆ ತಮ್ಮದೇ ಸ್ವಂತ ಮನೆಯಲ್ಲಿ ಕೊನೆಯ ದಿನಗಳನ್ನು ಕಳೆದ ಅದೆಷ್ಟೋ ಜೀವಗಳಿಗೆ ಒಂದು ರೀತಿಯ ಸಂತೃಪ್ತಿಯಿತ್ತು. ಆದರೆ ಈಗ ಕಾಲ ಬದಲಾಗುವುದರೊಂದಿಗೆ ಪರಿಸ್ಥಿತಿಯೂ ಬದಲಾಗಿದೆ; ಜೊತೆಗೆ ಪ್ರಾಯ ಮಾಗುತ್ತಾ ಬರುತ್ತಿದ್ದಂತೆ ಹಿರಿಯರ ನಿರೀಕ್ಷೆಗಳು ಕೂಡಾ. ‘ಇನ್ನು ನಾವು ಮಕ್ಕಳು- ಮೊಮ್ಮಕ್ಕಳೊಂದಿಗೆ ಆರಾಮಾಗಿ ಇರಬಹುದು, ನಮ್ಮ ಜವಾಬ್ದಾರಿ ಮುಗಿಯಿತು. ಮಕ್ಕಳನ್ನು ಬೆಳೆಸಿ, ಓದಿಸಿ, ಅವರ ಕಾಲ ಮೇಲೆ ನಿಲ್ಲುವಂತೆ ಮಾಡಿದ್ದಾಯ್ತು. ಇನ್ನು ಯಾವ ಜವಾಬ್ದಾರಿಯೂ ಇಲ್ಲ. ಕಾಲನ ಕರೆ ಬರುವವರೆಗೆ ದಿನ ಸವೆಸಿದರಾಯಿತು’ ಅಂತ. ಹೌದಾ..!? ಆದರೆ ಮನಸ್ಸಿನ ಬಯಕೆಯಂತೆ ಎಲ್ಲರ ಬದುಕು ನಡೆಯದು. ಕೆಲ ಹಿರಿಯರಿಗೆ ಹೊಸ ಜವಾಬ್ದಾರಿಗಳು ಹೆಗಲಿಗೇರಿವೆ. ‘ಮಕ್ಕಳಿಗೆ ಮದುವೆ ಮಾಡಿಕೊಟ್ಟ ನಂತರ ಮಕ್ಕಳಿಗಾಗಿ ಪಾಲಿಸಬೇಕಾದ ತಮ್ಮ ಕರ್ತವ್ಯಗಳು ಮುಗಿದವು; ಇನ್ನು ಬದುಕು ನಿರಾಳ’ ಎಂದು…
ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ಮೀನಕಳಿಯ ಬೈಕಂಪಾಡಿಯಲ್ಲಿ ಯಕ್ಷನಾಟ್ಯ ತರಬೇತಿ ಆರಂಭ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ಸರಕಾರಿ ಪ್ರೌಢ ಶಾಲೆ, ಮೀನಕಳಿಯ ಬೈಕಂಪಾಡಿಯಲ್ಲಿ 2024- 25 ರ ಸಾಲಿನ ಯಕ್ಷನಾಟ್ಯ ತರಬೇತಿ ಜೂನ್ 19 ರಂದು ಬೆಳಿಗ್ಗೆ 11.00 ಗಂಟೆಗೆ ಉದ್ಘಾಟನೆಗೊಂಡಿತು. ಶ್ಯಾಮ ಕನ್ಸ್ಟ್ರಕ್ಷನ್ಸ್ ನ ಇಂಜಿನಿಯರ್ ಶ್ರೀ ಪ್ರಸಿದ್ಧ ಪಿ. ಇವರು ಕಾರ್ಯಕ್ರಮ ಉದ್ಘಾಟಿಸಿ, ಯಕ್ಷಗಾನ ಎಲ್ಲಾ ಪ್ರಕಾರಗಳಲ್ಲಿಯೂ ಜ್ಞಾನವೃದ್ಧಿಗೆ ಪ್ರಯೋಜನವಾಗುತ್ತದೆ. ಯಕ್ಷಗಾನ ಬರೇ ಕಲೆಗೋಸ್ಕರ ಕಲಿಯುವುದಲ್ಲ. ನಮ್ಮ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಲು ಸದವಕಾಶ ಎಂದು ಹೇಳುತ್ತಾ ಶುಭ ಕೋರಿದರು. ಯಕ್ಷ ಶಿಕ್ಷಣ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳ್ (USA) ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿ ಶ್ರೀ ಶಿವರಾಮ ಪಣಂಬೂರು ಇವರು ಮಾತನಾಡುತ್ತಾ, ಶುದ್ಧ ಕನ್ನಡ ಇಂದಿಗೂ ಉಳಿದಿದೆ ಎಂದಾದರೆ ಅದು ಯಕ್ಷಗಾನದಿಂದ ಮಾತ್ರ. ಅಲ್ಲದೇ ಗುರು ಹಿರಿಯರನ್ನು ಗೌರವದಿಂದ ಕಾಣಲು ಇಂತಹ ಯಕ್ಷ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದರು. ಶಾಲಾ ಮುಖ್ಯೋಪಾಧ್ಯಾಯ ಶ್ರೀ ಲಕ್ಷ್ಮೀನಾರಾಯಣ ಇವರು ಮಾತನಾಡುತ್ತಾ, ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡುವಲ್ಲಿ…
ವಿದ್ಯಾಗಿರಿ: ನಿಮ್ಮ ವ್ಯಕ್ತಿತ್ವ ಹಾಗೂ ಕೌಶಲಗಳ ಮೂಲಕವೇ ಸಮಾಜಕ್ಕೆ ಪರಿಚಿತರಾಗಿ ಎಂದು ಆಳ್ವಾಸ್ ಕಾಲೇಜಿನ ಕುಲಸಚಿವ (ಅಕಾಡೆಮಿಕ್ಸ್) ಡಾ ಟಿ. ಕೆ. ರವೀಂದ್ರನ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಚಾರ ಸಂಕಿರಣ ಸಭಾಂಗಣದಲ್ಲಿ ಪದವಿ ಸಮಾಜ ಕಾರ್ಯ ವಿಭಾಗದ ಸ್ಪಟಿಕ ವಿದ್ಯಾರ್ಥಿ ವೇದಿಕೆಯ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ದೊಡ್ಡದಾಗಿ ಕನಸು ಕಾಣಬೇಕು. ಇದರಿಂದ ಉನ್ನತ ಸಾಧನೆ ಮಾಡಲು ಸಾಧ್ಯ. ವರ್ತಮಾನದಲ್ಲಿ ಜಗತ್ತು ಒಂದು ಪುಟ್ಟ ಹಳ್ಳಿ ಆಗಿದೆ. ಅವಕಾಶಗಳು ವಿಸ್ತಾರಗೊಂಡಿದ್ದು, ಸ್ಪರ್ಧೆ ಹೆಚ್ಚಿದೆ ಎಂದರು. ಸಮಾಜ ಕಾರ್ಯದ ವಿದ್ಯಾರ್ಥಿಗಳಿಗೆ ಅವಕಾಶಗಳ ಕೊರತೆ ಬರಲು ಸಾಧ್ಯವಿಲ್ಲ. ಈ ವೃತ್ತಿಯೂ ನೀಡುವ ಸಂತೃಪ್ತಿ ಬೇರೆ ಕಡೆಯೂ ಸಿಗಲು ಸಾಧ್ಯವಿಲ್ಲ ಎಂದು ಹೇಳಿದರು. ವಿದ್ಯಾರ್ಥಿ ಜೀವನದ ಮಹತ್ವ ತಿಳಿಯುವುದು ಕಾಲೇಜಿನಿಂದ ಹೊರ ಹೋದ ಮೇಲೆ. ನಿಜವಾದ ಜೀವನ ಪ್ರಾರಂಭವಾಗುವುದು ನೀವು ವಿದ್ಯಾಭ್ಯಾಸ ಮುಗಿಸಿದ ನಂತರ. ವಿದ್ಯಾರ್ಥಿ ಜೀವನದಲ್ಲಿ ಕೆಲವರು ತಮ್ಮ ತಪ್ಪುಗಳಿಗೆ ಕಾಲೇಜನ್ನು ದೂರುತ್ತಾರೆ. ಆದರೆ ವೃತ್ತಿ ಜೀವನದಲ್ಲಿ ನಿಮ್ಮ ತಪ್ಪುಗಳಿಗೆ…
ಮೂಡುಬಿದಿರೆ: ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಪದಕ ವಿಜೇತ, ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್ನ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮಂಗಳವಾರ ವಿದ್ಯಾಗಿರಿಯಲ್ಲಿ ಅಭಿನಂದಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್ನ ಗೌರವಾಧ್ಯಕ್ಷ ಡಾ ಎಂ ಮೋಹನ್ ಆಳ್ವ ಮಾತನಾಡಿ, ನಮ್ಮ ದೇಶದಲ್ಲಿ ಪರಿಚಿತ ಆಟವಾಗಿ, ಆದರೆ ಈ ಭಾಗದಲ್ಲಿ ಅಷ್ಟೊಂದು ಖ್ಯಾತಿಗೆ ಬಾರದ ಕ್ರೀಡೆಯನ್ನು, ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್, ಕಳೆದ ಐದು ವರ್ಷಗಳ ಸತತ ಪರಿಶ್ರಮದಿಂದಾಗಿ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ನಿರ್ಮಾಣ ಮಾಡಿದೆ ಎಂದು ಹರ್ಷ ವ್ಯಕ್ತ ಪಡಿಸಿದರು. ಮಾನವ ಸಂಪತ್ತಿನ ಸರಿಯಾದ ಬಳಕೆಯಿಂದ ದೇಶದ ಸಮೃದ್ಧಿ ಸಾಧ್ಯ. ಮುಂದುವರಿದ ಯಾವ ದೇಶದಲ್ಲೂ ನಮ್ಮಲ್ಲಿರುವಷ್ಟು ಯುವ ಶಕ್ತಿಯಿಲ್ಲ. ಈ ಯುವ ಶಕ್ತಿಯ ಸರಿಯಾದ ಸದ್ಭಳಕೆ ಮುಖ್ಯ. ನಮ್ಮನ್ನಾಳುವ ಸರ್ಕಾರಗಳು ಇದರೆಡೆಗೆ ಗಮನವಹಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಜೋಡಿಸಿಕೊಳ್ಳಬೇಕು.…
ವಿದ್ಯಾಗಿರಿ (ಮೂಡುಬಿದಿರೆ): ಕಾಲೇಜು ಮಟ್ಟದಲ್ಲಿ ಕ್ರೀಡೆಗೆ ಪ್ರಾಮುಖ್ಯತೆಯನ್ನು ನೀಡಿದರೆ ಮಾತ್ರ ದೇಶದಲ್ಲಿ ಕ್ರೀಡೆ ಬೆಳೆಯಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ ಹೇಳಿದರು. ಇಲ್ಲಿರುವ ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸ್ಮಾರಕ ಶೆಟ್ಟಿ ಸಭಾಂಗಣದಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಆತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ) ಮಟ್ಟದ ಪುರುಷರ ಮತ್ತು ಮಹಿಳಾ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಅವರು ಮಾತನಾಡಿದರು. ಕ್ರೀಡೆಯನ್ನು ಬೆಳೆಸುವಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕೊಡುಗೆ ಅಪಾರ. ಸರ್ಕಾರದ ನೆರವಿಲ್ಲದೆಯೂ ಆಳ್ವಾಸ್ ಸಂಸ್ಥೆ ಕ್ರೀಡಾಪಟುಗಳ ಬೆಳವಣಿಗೆಗೆ ಶ್ರಮ ಪಡುತ್ತಿದೆ. ಈ ಮಾದರಿ ದೇಶದಲ್ಲೇ ಮೊದಲು ಎಂದರು. ಮುಂದಿನ ದಿನಗಳಲ್ಲಿ ನಮ್ಮ ಫೆಡರೇಶನ್ ಕಪ್ ಅನ್ನು ಆಳ್ವಾಸ್ನಲ್ಲೆ ನಡೆಸಲಾಗುವುದು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವೈದ್ಯಕೀಯ ವಿದ್ಯಾರ್ಥಿಗಳು ದೇಶಿಯ ಕ್ರೀಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸಂತೋಷ…
ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ ಸೋಮವಾರ ನಗರದ ಪುರಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ನ ಸಿಎಂಡಿ ಕೆ.ಎಂ. ಶೆಟ್ಟಿ ಮದ್ಯಗುತ್ತು ಅವರು, “ಸಮಾಜ ಕಲ್ಯಾಣ ಕಾರ್ಯಕ್ರಮಗಳು ಅವಿರತವಾಗಿ ನಡೆಯಲಿ. ಇದಕ್ಕೆ ನಾವೆಲ್ಲರೂ ತುಂಬು ಮನಸ್ಸಿನಿಂದ ಸಹಕಾರ ನೀಡಬೇಕಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಉದ್ಯಮ ಸ್ಥಾಪನೆಗೆ ಆಡಳಿತ ನಡೆಸುವವರ ಸಹಕಾರ ಅಗತ್ಯ ಬೇಕು. ಇದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಉದ್ಯಮಿಗಳು ತಮ್ಮ ತಾಯ್ನಾಡಿನಲ್ಲೇ ಉದ್ಯಮ ಸ್ಥಾಪನೆಗೆ ಮುಂದಾಗಲಿದ್ದಾರೆ” ಎಂದರು. ಒಕ್ಕೂಟದ ಮಹಾದಾನಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ, “ಐಕಳ ಹರೀಶ್ ಶೆಟ್ಟಿ ಅವರು ಸಮಾಜಮುಖಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು. ಇನ್ನೂ ಮುಂದಿನ ದಿನಗಳಲ್ಲೂ ಸಂಘಟನೆ ಇದೇ ರೀತಿ ಅರ್ಥಪೂರ್ಣ ಕಾರ್ಯಕ್ರಮ ಕೈಗೊಳ್ಳಲಿ”…
ಮೂಡುಬಿದಿರೆ: ಶಿಸ್ತು, ಸಮಯಪ್ರಜ್ಞೆ, ಸೃಜನಶೀಲತೆ, ಕ್ರೀಡಾಮನೋಭಾವ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಅಪಾರ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತರಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ.ಎಂ ಮೋಹನ ಆಳ್ವ ಹೇಳಿದರು. ನಗರದ ಸ್ವರಾಜ್ ಮೈದಾನದ ಸ್ಕೌಟ್ಸ್ – ಗೈಡ್ಸ್ ಕನ್ನಡ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ,), ಮೂಡುಬಿದಿರೆ ಸಹಯೋಗದಲ್ಲಿ ನಡೆದ 2023-24 ಸಾಲಿನ ಎಸ್ಸಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಪ್ರತಿಭಾನ್ವಿತ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್ ರೆಂಜರ್ಸ್ಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣದ ಪಠ್ಯ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳು ಶೈಕ್ಷಣಿಕ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿರುವುದು ಅಭಿನಂದನಾರ್ಹ ಎಂದರು. ಸ್ಕೌಟ್ ಮತ್ತು ಗೈಡ್ಸ್ ವಿಧ್ಯಾರ್ಥಿಗಳಿಗೆ ಸೇವಾ ಮನೋಭಾವ,…
ಆತ್ಮಶಕ್ತಿ, ಮನೋಬಲದಿಂದ ಮುನ್ನುಗ್ಗಿದರೆ, ಭವಿಷ್ಯದಲ್ಲಿ ಮಹತ್ತರ ಸಾಧನೆ ಸಾಧಿಸಬಹುದು. ವಿದ್ಯೆಯ ಜೊತೆಗೆ ಛಲ ಹಾಗೂ ಆತ್ಮಸ್ಥೈರ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಹೇಳಿದರು. ಅವರು ಮಂಗಳವಾರ (ಜೂನ್18) ರಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರ ಮಾರ್ಗದರ್ಶನದಲ್ಲಿ ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಸರೆ ಚಾರಿಟೇಬಲ್ ಟ್ರಸ್ಟ್ ವಂಡ್ಸೆ,, ಮತ್ತು ದೀಪಾ ಜ್ಯೋತಿ ನೆಟ್ವರ್ಕ್ ಆಫ್ ಪಾಸಿಟಿವ್ ಪೀಪಲ್ಸ್ ಉಡುಪಿ, ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಶೇಷ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ಹಾಗೂ ಬ್ಯಾಗ್ ವಿತರಿಸಲಾಯಿತು. ದೀಪ ಜ್ಯೋತಿ…
2023 ರ ಆಗಸ್ಟ್ 11ರಂದು ಕರಾವಳಿಯಾದ್ಯಂತ ಬಿಡುಗಡೆಗೊಂಡು ಸಾರ್ವಜನಿಕರ ಶ್ಲಾಘನೆಗೆ ಒಳಗಾಗಿ ಉತ್ತಮ ಪ್ರದರ್ಶನ ನೀಡಿದ ಶಿವಧ್ವಜ್ ಶೆಟ್ಟಿ ನಿರ್ದೇಶನದ ಕಲಾತ್ಮಕ ‘ಕೊರಮ್ಮ’ ತುಳು ಚಲನಚಿತ್ರ ಉತ್ತಮ ಚಲನಚಿತ್ರ, ಉತ್ತಮ ನಟ ಹಾಗೂ ಉತ್ತಮ ನಿರ್ದೇಶಕ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಜೂನ್ 16 ರಂದು ಮುಲ್ಕಿ ಸುಂದರರಾಮ್ ಶೆಟ್ಟಿ ಕನ್ವೆನ್ಷನ್ ಸೆಂಟರ್ ನಲ್ಲಿ ಗಣ್ಯರು, ತುಳು ಚಿತ್ರರಂಗದ ನಟ, ನಟಿಯರು, ನಿರ್ಮಾಪಕರು, ನಿರ್ದೇಶಕರು, ಗಾಯಕರು, ತಾಂತ್ರಿಕ ವರ್ಗದವರೆಲ್ಲರ ಉಪಸ್ಥಿತಿಯಲ್ಲಿ ನೃತ್ಯ, ಮನೋರಂಜನೆ, ಸಂಗೀತ ಮುಂತಾದ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮದೊಂದಿಗೆ ನಡೆದ ‘ಕೋಸ್ಟಲ್ ಫಿಲ್ಮ್ ಅವಾರ್ಡ್ -2024’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉತ್ತಮ ನಿರ್ದೇಶಕ ಪ್ರಶಸ್ತಿಯನ್ನು ಶಿವಧ್ವಜ್ ಶೆಟ್ಟಿ, ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ನಿರ್ಮಾಪಕರಾದ ಈಶ್ವರಿದಾಸ್ ಶೆಟ್ಟಿ ಮತ್ತು ಅಡ್ಯಾರ್ ಮಾಧವ ನಾಯಕ್ ಹಾಗೂ ಉತ್ತಮ ನಟ ಪ್ರಶಸ್ತಿಯನ್ನು ಮೋಹನ್ ಶೆಣೈ ಸ್ವೀಕರಿಸಿದರು. ಕೆನಡ, ಆಸ್ಟ್ರೇಲಿಯದಲ್ಲಿ ಪ್ರದರ್ಶನ ಕಂಡ ಚಿತ್ರ ಸದ್ಯದಲ್ಲೇ ಮುಂಬಯಿ ಹಾಗೂ ದುಬಾಯಿಯಲ್ಲಿ ಪ್ರದರ್ಶನಗೊಳ್ಳಲಿದೆ. ಪ್ರದರ್ಶನ ಕಂಡಲ್ಲೆಲ್ಲಾ…