Author: admin
ವಿದ್ಯಾಗಿರಿ (ಮೂಡುಬಿದಿರೆ):ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ ‘ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.11 ರಿಂದ ಡಿ. 15ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’30ನೇ ವರ್ಷದ ‘ಅಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಮಂಗಳವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು. ಮುಸ್ಸಂಜೆಯಲ್ಲಿ ಪ್ರಕೃತಿ ರಮಣೀಯ ವಿಶಾಲ ಸಭಾಂಗಣದಲ್ಲಿ ತುಂಬಿದ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಕಾರ್ಯಕ್ರಮ. ಸಾಹಿತ್ಯ ಮತ್ತು ಸಂಸ್ಕೃತಿ ಜೊತೆಯಾಗಿ ಮೇಳೈಸಿದ ಕಾರ್ಯಕ್ರಮ. ನಮ್ಮ ಸಾಂಸ್ಕೃತಿಕ ಸಂಪತ್ತು ಹೆಚ್ಚಾದಾಗ ಮನಸ್ಸು ಅರಳುತ್ತದೆ ಎಲ್ಲರಿಗೂ ಸಂತೋಷ ನೀಡುವ ವ್ಯಕ್ತಿತ್ವವೇ ಆಳ್ವ ಎಂದು ಬಣ್ಣಿಸಿದರು. ಒಳ್ಳೆಯದನ್ನು ಒಪ್ಪಿಕೊಂಡು ಅಪ್ಪಿಕೊಳ್ಳಿ. ಆ ಹಾದಿಯಲ್ಲಿ ಸಮಾಜ, ದೇಶ ಬೆಳೆಯಬೇಕು. ನಾವೂ ಪ್ರಕೃತಿಯನ್ನು, ಹೃದಯವನ್ನು ಅರಳಿಸಬೇಕು ಎಂದರು. ಆಳ್ವಾಸ್ ಕೃಷಿ ಮೇಳ ಕಂಡು ನೀವೂ…
ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ರ್ಷದ ಆಳ್ವಾಸ್ ವಿರಾಸತ್ನ ಮೊದಲ ದಿನವಾದ ಮಂಗಳವಾರ ಉದ್ಘಾಟನೆಯ ಬಳಿಕ ಮೂಡಿಬಂದದ್ದು, ಶ್ರದ್ಧೆ-ಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ. ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಿದಿರೆಯ ನಾಡಿಗೆ ಬಂದಂತೆ ಭಾಸವಾಯಿತು. ಉತ್ತರ ಭಾರತದಿಂದ ಹಿಡಿದು ದಕ್ಷಿಣದ ತುತ್ತ ತುದಿವರೆಗಿನ ವೈವಿಧ್ಯ ಕಲಾಪ್ರಕಾರಗಳೂ ಮಾತ್ರವಲ್ಲ, ಶ್ರೀಲಂಕಾ ಸೇರಿದಂತೆ ನೆರೆಹೊರೆ ರಾಷ್ಟ್ರಗಳ ಸಂಸ್ಕೃತಿ ಶ್ರೀಮಂತಿಕೆಗೆ ಆಳ್ವಾಸ್ ಆವರಣ ಸಾಕ್ಷಿಯಾಯಿತು. ಕರ್ಯಕ್ರಮದಲ್ಲಿ ಸಾನಿಧ್ಯವಿದ್ದ ಮೂಡುಬಿದಿರೆ ಜೈನ ಮಠದ ಭಟ್ಟಾರಕ ಚಾರುಕರ್ತಿ ಪಂಡಿತಾಚರ್ಯರ್ಯ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕೊಂಡೆವೂರು ಯೋಗಾನಂದ ಸ್ವಾಮೀಜಿ, ಕೊಂಡವೂರು, ಮಾಣಿಲ ಮೋಹನದಾಸ ಸ್ವಾಮೀಜಿ ಹಾಗೂ ಕಟೀಲು ದೇವಳದ ಆನುವಂಶಿಕ ಮೊಕ್ತೇಸರ ಲಕ್ಷ್ಮೀ ನಾರಾಯಣ ಅಸ್ರಣ್ಣ ಅವರು ವೇದಿಕೆಯ ಬಲಭಾಗದಲ್ಲಿದ್ದ ರಥದಲ್ಲಿ ದೇವರ ಪ್ರತಿಷ್ಠಾಪನೆ ಮಾಡಿ ಭವ್ಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಿದರು. ನಿಗದಿಯಂತೆ ಕ್ಲುಪ್ತ ಸಮಯಕ್ಕೆ ಆರಂಭಗೊಂಡ ಈ ಭವ್ಯ ಸಾಂಸ್ಕೃತಿಕ ಮೆರವಣಿಗೆಯು ಜಾತ್ರೆಯ ಮೆರುಗನ್ನು ಮೂಡಿಸಿತು. ಇಕ್ಕೆಲೆಗಳಲ್ಲಿ…
ವಿದ್ಯಾಗಿರಿ: ಸೌಹಾರ್ದತೆಯಿಲ್ಲದೆ ಬದುಕಿಗೆ ಅರ್ಥವಿಲ್ಲ. ಪ್ರೀತಿ ಸೌಹಾರ್ದತೆಗಾಗಿ ನಾವು ಜೀವನದುದ್ದಕ್ಕೂ ಶ್ರಮಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಭಾಗಿತ್ವದಲ್ಲಿ ‘೩೦ನೇ ಆಳ್ವಾಸ್ ವಿರಾಸಾತ್’ ಅಂಗವಾಗಿ ನಡೆಯುತ್ತಿರುವ ರಾಜ್ಯ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವದ ಅಂಗವಾಗಿ ರತ್ನಾಕರವರ್ಣಿ ವೇದಿಕೆಯಲ್ಲಿ ಬುಧವಾರ ಅವರು ಉಪನ್ಯಾಸ ನಿಡಿದರು. ಜಾನಪದ ಕಲೆಗಳ ವೈವಿಧ್ಯತೆಯನ್ನು ವಿದ್ಯಾರ್ಥಿಗಳು ಅಪ್ಪಿಕೊಳ್ಳಬೇಕು. ದೇಶದ ಕಲೆಯನ್ನು ಪ್ರೀತಿಸಬೇಕು ಎಂದರು. ಶುಚಿತ್ವವನ್ನು ಬಿಟ್ಟರೆ ಬದುಕೇ ಇಲ್ಲ. ಶುಚಿತ್ವ ಕೇವಲ ಮಾತಿಗೆ, ಬರಹಕ್ಕೆ ಮೀಸಲಾಗಬಾರದು. ನಮ್ಮ ಜೀವನದಲ್ಲಿ ಅಂತರ್ಗತವಾಗಬೇಕು. ಇದರ ಜೊತೆಗೆ ಮಣ್ಣು ಗಾಳಿ ನೀರು ಆಕಾಶವನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಈ ಅಂಶಗಳು…
ಬಲ್ನಾಡು ಗ್ರಾಮ ಅರಣ್ಯ ಸಮಿತಿ ಕಾರ್ಯಕಾರಣಿಗೆ ಮುಂದಿನ ಐದು ವರ್ಷಕ್ಕೆ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ. ಬಲ್ನಾಡು ಗ್ರಾಮದ ಸಾಜ ಸ.ಹಿ.ಪ್ರಾ ಶಾಲೆಯಲ್ಲಿ ನಡೆದ ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಮಿತಿ ಸದಸ್ಯ ಕಾರ್ಯದರ್ಶಿಯಾಗಿ ಉಪವಲಯ ಅರಣ್ಯಾಧಿಕಾರಿ ವೀರಣ್ಣರಿದ್ದು, ಸಮಿತಿಯಲ್ಲಿ 172 ಮಂದಿ ಸದಸ್ಯರ ಪೈಕಿ ಚಂದಪ್ಪ ಪೂಜಾರಿ ಕೆ, ಸುಂದರ ಎಂ, ಕುಟ್ಟಿ ನಲಿಕೆ ಕೆ, ಪ್ರವೀಣಚಂದ್ರ ಆಳ್ವ, ಅಣ್ಣಿ ಪೂಜಾರಿ ಸಾರ್ಯ ಉಷಾ ಸಾಜ, ಕಮಲಾಕ್ಷಿ ಸಾಜ, ವಸಂತಿ ಸಾಜ ನಳಿನಿ ಕೆ, ಕುಸುಮ ಎಂ ಅವರು ನಿರ್ದೇಶಕರಾಗಿ ಆಯ್ಕೆಯಾದರು. ಪುತ್ತೂರು ವಲಯ ಅರಣ್ಯ ಅಧಿಕಾರಿ ಕಿರಣ್ ಬಿ.ಎಂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪುತ್ತೂರು ಹೋಬಳಿಯ ಕಂದಾಯ ನಿರೀಕ್ಷಕ ಕೆ.ಟಿ.ಗೋಪಾಲ ಚುನಾವಣಾಧಿಕಾರಿಯಾಗಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಒಕ್ಕೂಟವು ಮುಂಬಯಿಯಲ್ಲಿ ಮೂರು ವಿಶ್ವ ಬಂಟರ ಸಮ್ಮಿಲನ, ಉಡುಪಿಯಲ್ಲಿ ಎರಡು ವಿಶ್ವ ಬಂಟರ ಸಮ್ಮಿಲನವನ್ನು ಆಯೋಜಿಸಿ, ಇದೀಗ ಮತ್ತೆ ಮುಂಬಯಿಯಲ್ಲಿ 6ನೇ ವಿಶ್ವ ಬಂಟರ ಸಮಾಗಮವನ್ನು ಬಂಟರ ಭಾವೈಕ್ಯದ ಸಂಕೇತವಾಗಿ ಇಂದು ಆಯೋಜಿಸಿದೆ. ಹಿಂದಿನ ಐದು ಸಮ್ಮಿಲನ ಯಶಸ್ಸಿನ ದ್ಯೋತಕವಾಗಿ, ಮುಂಬಯಿ ಬಂಟರ ಸಂಘದ ಸಂಪೂರ್ಣ ಸಹಕಾರದೊಂದಿಗೆ ಅಭೂತಪೂರ್ವ ಕಾರ್ಯಕ್ರಮವಾಗಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ ಎನ್ನಲು ಹರ್ಷವಾಗುತ್ತಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನುಡಿದರು. ಡಿಸೆಂಬರ್ 7ರಂದು ಶನಿವಾರ ಕುರ್ಲಾ ಪೂರ್ವ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಉದ್ಯಮಿ ಕೆ. ಡಿ ಶೆಟ್ಟಿಯವರ ಪ್ರಾಯೋಜಕತ್ವದ ದಡ್ಡಂಗಡಿ ಚೆಲ್ಲಡ್ಕ ಭವಾನಿ ದೇರಣ್ಣ ಶೆಟ್ಟಿ ವೇದಿಕೆಯಲ್ಲಿ ಬಂಟರ ಸಂಘದ ಸಂಪೂರ್ಣ ಸಹಕಾರದೊಂದಿಗೆ ಜರಗಿದ ವಿಶ್ವ ಬಂಟರ ಸಮಾಗಮ- 2024 ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಜಾಗತಿಕ ಬಂಟರ ಸಂಘಗಳ…
ಈ ಹಿಂದೆ ಯುಎಇಯಲ್ಲಿ ದಾಖಲೆ ಪ್ರದರ್ಶನ ಕಂಡ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರದ ತಂಡ ಇದೀಗ ಮತ್ತೊಮ್ಮೆ ಕರವಾಳಿಯ ತುಳುವರ, ತುಳು ಅಭಿಮಾನಿಗಳ ಮನಸೂರಗೈಯುವ ಚಿತ್ರದೊಂದಿಗೆ ಅರಬ್ ದೇಶಕ್ಕೆ ಕಾಲಿರಿಸಿದ್ದಾರೆ. ‘ಮಿಡಲ್ ಕ್ಲಾಸ್ ಫ್ಯಾಮಿಲಿ’ ಎಂಬ ಕೌಟುಂಬಿಕ ನವಿರು ಹಾಸ್ಯಮಯ ಸನ್ನಿವೇಶದ ಮಾರ್ಮಿಕ ಚಿತ್ರ ವೀಕ್ಷಕರ ನಡುವೆ ಗಮನ ಸೆಳೆಯಲು ಸಜ್ಜಾಗಿದೆ. ಈ ಚಿತ್ರದ ಯುಎಇಯ ಪ್ರೀಮಿಯರ್ ಪ್ರದರ್ಶನದ ಪೊಸ್ಟರ್ ಬಿಡುಗಡೆ, ವಿಡಿಯೋ ಸಾಂಗ್ ಮತ್ತು ಟಿಕೆಟ್ ಬಿಡುಗಡೆ ಕಾರ್ಯಕ್ರಮ ಡಿಸೆಂಬರ್ 8 ರಂದು ದುಬೈಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಚಿತ್ರ ನಿರ್ಮಾಪಕರಾದ ಹರೀಶ್ ಶೇರಿಗಾರ್, ಹರೀಶ್ ಬಂಗೆರ, ಆತ್ಮಾನಂದ ರೈ, ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಿನೇಶ್ ಶೆಟ್ಟಿ ಕೊಟ್ಟಿಂಜ, ಬ್ರಾಹ್ಮಣ ಸಮಾಜದ ಸುಧಾಕರ ರಾವ್ ಪೇಜಾವರ, ಉದ್ಯಮಿಗಳಾದ ಬು.ಅಬ್ದುಲ್ಲ, ಗುಣಶೀಲ್ ಶೆಟ್ಟಿ, ರಮಾನಂದ ಶೆಟ್ಟಿ, ಸಂದೀಪ್ ರೈ ನಂಜೆ, ಡಾ. ರಶ್ಮಿ, ಕರ್ನಾಟಕ ಸಂಘ…
ವಿದ್ಯಾಗಿರಿ (ಮೂಡುಬಿದಿರೆ): ‘ಕರಾವಳಿಯ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ) ಯುವಜನತೆ ಕೃಷಿ ವಿಮುಖರಾಗುತ್ತಿದ್ದು, ಮಣ್ಣಿನೆಡೆಗೆ ಅವರನ್ನು ಸೆಳೆಯುವ ಇಂತಹ ಕಾರ್ಯಕ್ರಮಗಳು ಆದರ್ಶ ಮತ್ತು ಅನುಕರಣೀಯ’ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ. ಜಗದೀಶ್ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಡಿ.11 ರಿಂದ ಡಿ. 15ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’30ನೇ ವರ್ಷದ ಅಳ್ವಾಸ್ ವಿರಾಸತ್’ ಅಂಗವಾಗಿ ಹಮ್ಮಿಕೊಂಡ ಅನ್ವೇಷಣಾತ್ಮಕ ಶತಾಯುಷಿ ಕೃಷಿಕ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಕೃಷಿಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳಗಳ ಉದ್ಘಾಟನೆಯಲ್ಲಿ ಅವರು ಮಾತನಾಡಿದರು. ಕೃಷಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುತ್ತಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿ ವರ್ಷ 500 ಎಕರೆ ಹಡಿಲು ಭೂಮಿಯನ್ನು…
ಯಕ್ಷಗಾನದ ವಾಚಿಕ ವಿಭಾಗವಾದ ತಾಳಮದ್ದಳೆಯಲ್ಲಿ ಆಡುವ ಕನ್ನಡ ಭಾಷೆ ಶುದ್ಧ ಸ್ವರೂಪದಲ್ಲಿದ್ದು ಅದು ಇತರ ಕಲಾಪ್ರಕಾರಗಳಿಗೆ ಮಾದರಿಯೆನಿಸಿದೆ. ಈ ದಿಶೆಯಲ್ಲಿ ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯು ಕರ್ನಾಟಕ ಯಕ್ಷ ಭಾರತಿ (ರಿ.) ಪುತ್ತೂರು ಸಹಯೋಗದಲ್ಲಿ ಕಳೆದ 11 ವರ್ಷಗಳಿಂದ ಮಂಗಳೂರಿನಲ್ಲಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ನಡೆಸುತ್ತಿರುವ ಯಕ್ಷಗಾನ ತಾಳಮದ್ದಳೆ ಸಪ್ತಾಹವನ್ನು ನಿಜಾರ್ಥದಲ್ಲಿ ಕನ್ನಡದ ನುಡಿ ಹಬ್ಬವಾಗಿ ಆಯೋಜಿಸುತ್ತಾ ಬಂದಿದೆ. ಅದರಂತೆ ಈ ವರ್ಷವೂ ನವೆಂಬರ 11ರಿಂದ 19ರವರೆಗೆ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ನಡೆದ 12 ನೇ ವರ್ಷದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2024’ ವಿಭಿನ್ನ ಸ್ವರೂಪದಿಂದ ಗಮನ ಸೆಳೆಯಿತು. ಸಾಮಾನ್ಯವಾಗಿ ತಾಳಮದ್ದಳೆಯ ದೊಡ್ಡ ಕೂಟಗಳಲ್ಲಿ ಭಾಗವಹಿಸುವ ಜನಪ್ರಿಯ ಅರ್ಥಧಾರಿಗಳನ್ನೇ ಒಟ್ಟುಗೂಡಿಸಿ ಸಪ್ತಾಹಗಳನ್ನು ನಡೆಸುವುದು ವಾಡಿಕೆ. ಅದೇ ಪುನರಾವರ್ತನೆಯಾಗುವುದೂ ಇದೆ. ಯಕ್ಷಾಂಗಣವು ಈ ಹಳೆಯ ದಾರಿಯನ್ನು ಸ್ವಲ್ಪ ಬದಲಾಯಿಸಿ ಈಗಾಗಲೇ ಸ್ಥಾಪಿತರಾದ ಅರ್ಥಧಾರಿಗಳ ಜೊತೆಗೆ ಅಲ್ಲಲ್ಲಿ ಸಂಘ ಸಂಸ್ಥೆಗಳಲ್ಲಿ ಅರ್ಥ ಹೇಳುವ…
ಕಾರ್ತಿಕ್ ಶೆಟ್ಟಿ ಮಜಿಬೈಲುರವರ ಸಾಮಾಜಿಕ ಸೇವೆಯನ್ನು ಗುರುತಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಡಿಸೆಂಬರ್ 7 ರಂದು ಮುಂಬಯಿಯ ಕುರ್ಲಾದ ಬಂಟರ ಭವನದಲ್ಲಿ ನಡೆದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಪ್ರವೀಣ್ ಭೋಜ ಶೆಟ್ಟಿಯವರ ನೇತೃತ್ವದ ಮುಂಬಯಿ ಬಂಟರ ಸಂಘದ ಸಹಯೋಗದೊಂದಿಗೆ ಜರಗಿದ ‘ವಿಶ್ವ ಬಂಟರ ಸಮಾಗಮ-2024’ ಕಾರ್ಯಕ್ರಮದಲ್ಲಿ ಅದ್ದೂರಿಯಾಗಿ ಗೌರವಿಸಲಾಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಹಾದಾನಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬೋಜ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಜತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಮಹಾ ಪೋಷಕರು, ನಿರ್ದೇಶಕರು ಉಪಸ್ಥಿತರಿದ್ದರು. ಕರ್ನೂರು ಮೋಹನ್ ರೈ ಮತ್ತು ಅಶೋಕ್ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.
ಉಡುಪಿ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಕ್ರಿಯೆಟಿವ್ ಪಿ.ಯು.ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ಕಾಲೇಜುಗಳ ಮೈಸೂರು ವಿಭಾಗೀಯ ಮಟ್ಟದ ವತಿಯಿಂದ ಡಿಸೆಂಬರ್ 9ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ದ್ವಿತೀಯ ಸ್ಥಾನವನ್ನು ಹಾಗೂ ಪ್ರಥಮ ವಿಜ್ಞಾನ ವಿಭಾಗದ ಜಾಹ್ನವಿ ಜೆ. ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ಇವರಿಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭಹಾರೈಸಿದ್ದಾರೆ.