Author: admin
ಆಳ್ವಾಸ್ ಶಿಕ್ಷಣದ ಪ್ರತಿಷ್ಠಾನ ಆಯೋಜಿಸುವ 30ನೇ ವರ್ಷದ ‘ಆಳ್ವಾಸ್ ವಿರಾಸತ್’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವು ವೈಶಿಷ್ಟ್ಯಪೂರ್ಣ ಮೇಳಗಳ ಜೊತೆಗೆ ಡಿ.10ರಿಂದ 15ರ ವರೆಗೆ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ. 30ನೇ ವರ್ಷದ ವಿರಾಸತ್ ಬಹಳ ಮಹತ್ವಪೂರ್ಣವಾಗಿದ್ದು, ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ವೈಶಿಷ್ಟ್ಯಪೂರ್ಣಗೊಳಿಸಲಾಗಿದೆ. ಸಾಂಸ್ಕøತಿಕ ವೈಭವದ ಜೊತೆಗಿನ ಮೇಳಗಳು, ಕಲಿಕೆ ಹಾಗೂ ಜೀವನೋಲ್ಲಾಸದ ಸೆಲೆಗಳಾಗಿವೆ. ಈ ಬಾರಿ ಸಾಂಘಿಕ ಪ್ರದರ್ಶನಗಳಿಗೆ ಒತ್ತು ನೀಡಲಾಗಿದ್ದು, ವಿವಿಧತೆಯಲ್ಲಿ ಏಕತೆಯ ಅಭಿವ್ಯಕ್ತಿಯಾಗಲಿದೆ. ಡಿ.10ರಿಂದ ಡಿ.14ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮೇಳಗಳಿದ್ದರೆ, ಡಿ.15ರಂದು ಸಂಪೂರ್ಣವಾಗಿ ಮೇಳ ಹಾಗೂ ಪ್ರದರ್ಶನಗಳಿಗೆ ಮೀಸಲಿಡಲಾಗಿದೆ. ಪ್ರವೇಶ ಸಂಪೂರ್ಣ ಉಚಿತವಾಗಿದೆ. ಡಿ.10, ಮಂಗಳವಾರ-ಉದ್ಘಾಟನೆ: ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಡಿ.10ರ ಮಂಗಳವಾರ ಸಂಜೆ 5.30ರಿಂದ 6.30ರ ವರೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸುವರು. ಉಡುಪಿಯ ಜಿ. ಶಂಕರ್…
ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಬೆಂಗಳೂರು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆಸಿದ ಕುಂದಾಪುರ ತಾಲೂಕು ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾವ್ಯ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ರಸ ಪ್ರಶ್ನೆ ಸ್ಪರ್ಧೆಯಲ್ಲಿ ಶ್ರೇಯಸ್ ಮತ್ತು ಮನ್ವಿತ್ ತೃತೀಯ ಸ್ಥಾನ ಪಡೆದಿದ್ದಾರೆ. ಶಾಲೆಯಲ್ಲಿ ನಿರಂತರವಾಗಿ ನಡೆಯುವ ಪಠ್ಯೇತರ ಚಟುವಟಿಕೆಗಳು, ಸಾಂಸ್ಕೃತಿಕ ಸ್ಪರ್ಧೆಗಳು ಮಕ್ಕಳ ಸೃಜನಶೀಲ ಚಿಂತನೆಗೆ, ಕ್ರೀಯಾಶೀಲತೆಗೆ ಸಹಕಾರಿಯಾಗಿದೆ. ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿಗಳಾದ ಭರತ್ ಶೆಟ್ಟಿ, ಮುಖ್ಯ ಶಿಕ್ಷಕ ಪ್ರದೀಪ್, ಶಿಕ್ಷಕ ವೃಂದ ಮತ್ತು ಬೋಧಕೇತರ ಸಿಬ್ಬಂದಿಗಳು ಗೌರವಿಸಿದರು.
ಮಿಜಾರು: ಮಂಗಳೂರಿನ ಸಸಿಹಿತ್ಲುವಿನಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಸ್ಪರ್ಧಿಸಿದ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಜನಪದ ನೃತ್ಯ (ಡೊಳ್ಳು- ಪ್ರಥಮ), ಜನಪದ ನೃತ್ಯ (ಏಕವ್ಯಕ್ತಿ) ಪ್ರಥಮ, ಕತೆ ಬರೆಯುವುದು- ಪ್ರಥಮ ಮತ್ತು ದ್ವಿತೀಯ, ಭಾಷಣ ಕಲೆ -ಪ್ರಥಮ, ಕವಿತೆ ಬರೆಯುವುದು – ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿದ್ದಾರೆ. ಪ್ರಥಮ ಬಹುಮಾನ ವಿಜೇತರು ರಾಜ್ಯಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ ಆಳ್ವ ಅಭಿನಂದಿಸಿದ್ದಾರೆ.
ಉಳ್ಳಾಲ (ಮಂಗಳೂರು): ಮನುಷ್ಯನ ಅನೇಕ ದುರಾಸೆಯ ಫಲವೇ ಹವಾಮಾನ ವೈಪರೀತ್ಯಕ್ಕೆ ಮೂಲ ಕಾರಣ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿನ ಮುಂದುವರಿದ ಅಧ್ಯಯನಗಳ ರಾಷ್ಟ್ರೀಯ ಸಂಸ್ಥೆ (ಎನ್ಐಎಎಸ್)ಯ ಇಸ್ರೋ ಮುಖ್ಯ ಪ್ರಾಧ್ಯಾಪಕ ಡಾ. ಪಿ. ಜಿ. ದಿವಾಕರ್ ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಎನ್ಐಎಎಸ್ ಜಂಟಿ ಆಶ್ರಯದಲ್ಲಿ ಉಳ್ಳಾಲದ ಬಿಎಂ ಶಾಲೆಯಲ್ಲಿ ಹಮ್ಮಿಕೊಂಡ ‘ವಿದ್ಯಾರ್ಥಿ- ವಿಜ್ಞಾನಿ’ ಕಾರ್ಯಕ್ರಮದಲ್ಲಿ ಬುಧವಾರ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯು ತೀವ್ರ ಸಮಸ್ಯೆಯಾಗಿ ಬೆಳೆಯುತ್ತಿದೆ. ಅದರಲ್ಲೂ ,ಕರಾವಳಿ ಭಾಗದ ಜನರಿಗೆ ವಾತಾವರಣದಲ್ಲಾಗುವ ತೀವ್ರ ಮಾರ್ಪಾಡುಗಳು ಬಹುಬೇಗನೇ ತಿಳಿಯುವುದರಿಂದ, ಈ ಯೋಜನೆಯು ಇಲ್ಲಿನ ಜನರಿಗೆ ಅತಿಹೆಚ್ಚು ಪೂರಕವಾಗಲಿದೆ ಎಂದರು. ವಿದ್ಯಾರ್ಥಿಗಳಿಗೆ ವಿಜ್ಞಾನದ ಕಡೆಗೆ ಆಸಕ್ತಿ ಹೆಚ್ಚಿಸಿ , ಪರಿಣಾಮಕಾರಿ ವಿಜ್ಞಾನಿಗಳನ್ನಾಗಿ ಮಾಡಲು ಎನ್ಐಎಎಸ್ ಆಯೋಜಿಸಿರುವ ‘ಕರಾವಳಿ ಭಾಗದ ಹವಾಮಾನ ಬದಲಾವಣೆ’ಯ ಅಧ್ಯಯನ ಯೋಜನೆಯು ಸಹಕರಿಯಾಗಲಿದೆ ಎಂದು ಹೇಳಿದರು. ವೈಜ್ಞಾನಿಕ ಶಿಕ್ಷಣದ ಮೂಲಕ ಯುವ ಜನಾಂಗದಲ್ಲಿ ವಿಜ್ಞಾನ ಮತ್ತು ಅನ್ವೇಷಣೆಯತ್ತ ಒಲವು ಮೂಡಿಸುವುದು ಬಹಳ ಅವಶ್ಯಕ…
ವಿದ್ಯಾರ್ಥಿಗಳು ಮಾನವೀಯ ಮತ್ತು ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಹೋಗಬೇಕು. ವಿದ್ಯಾರ್ಥಿ ಜೀವನ ವ್ಯಕ್ತಿತ್ವ ರೂಪಿಸುವ ಕಾಲವಾಗಿದೆ. ನಮ್ಮ ಯಶಸ್ವಿಗೆ ತ್ಯಾಗ, ಶ್ರದ್ದೆ, ಪರಿಶ್ರಮ, ಅವಶ್ಯವಾಗಿದೆ. ಶ್ರೇಷ್ಠ ವ್ಯಕ್ತಿಗಳಾಗಳು ಸ್ವಯಂ ಮೌಲ್ಯಮಾಪನ ಮಾಡುವ ಚಾಕಚಕ್ಯತೆ ನಮ್ಮಲ್ಲಿರಬೇಕು. ನಮ್ಮ ಜೀವನದ ಘಟ್ಟದಲ್ಲಿ ಕಷ್ಟ ಬಂದಾಗ ಕುಗ್ಗದೆ ಮರಳಿ ಯಶಸ್ಸು ಗಳಿಸುವ ಜ್ಞಾನ ಮತ್ತು ಪ್ರಯತ್ನ ನಮ್ಮಲ್ಲಿರಬೇಕು. ಪರ್ವತದಂತಹ ದೊಡ್ಡ ಸಮಸ್ಯೆಗಳು ಎದುರಾದಾಗ ಸಕರಾತ್ಮಕವಾಗಿ ಮನಸ್ಸಿನ ಹಿಡಿತ ಹಿಗ್ಗಿಸಿಕೊಂಡು ಯಾವುದೇ ಘನ ಕಾರ್ಯವು ಸಣ್ಣದಾಗಿ ತೆಗೆದುಕೊಂಡು ಯಶಸ್ಸನ್ನು ಸಾಧಿಸಬಹುದು. ಭಗವಂತನು ಅನುಗ್ರಹಿಸಿದ ಜೀವನವನ್ನು ಸದಚಾರದಿಂದ ಸಂಪನ್ನಗೊಳಿಸಬೇಕು. ಆಧ್ಯಾತ್ಮ ಕೂಡಾ ನಮ್ಮ ಜೀವನದ ಅವಿಭಾಜ್ಯ ಅಂಗ. ಸಂಸ್ಕಾರಯುತವಾದ ಜೀವನ, ಉದ್ಯಮ ನಡೆಸುವ ಜೊತೆಯಲ್ಲಿ ನಮ್ಮ ಧರ್ಮ ಸಂಸ್ಕ್ರತಿಯನ್ನು ಮರೆಯಬಾರದು. ಲೌಕಿಕ ಜಗತ್ತಿನಲ್ಲಿ ತಾನು ಗಳಿಸಿದ ಶ್ರೀಮಂತಿಕೆಯನ್ನು ನಾನು, ನನ್ನದು, ನನ್ನಿಂದ ಎನ್ನುವ ಅಜ್ಞಾನವನ್ನು ತೆಗೆದು ಹಾಕಿ ದಾನದ ಮೂಲಕ ಪರಿಶುದ್ದತೆಯಿಂದ ಬಳಸಿದಾಗ ಬದುಕಿನ ನಿಜಾರ್ಥವು ಬರುತ್ತದೆ ಎಂದು ಪುಣೆಯ ಖ್ಯಾತ ಕೈಗಾರಿಕೋದ್ಯಮಿ, ಸುಯಾಶ್ ಗ್ರೂಪ್ ಆಫ್ ಕಂಪನೀಸ್…
ಸಂಸ್ಕಾರವಿಲ್ಲದ ಶಿಕ್ಷಣ ಅಸಂಪೂರ್ಣ. ಮಕ್ಕಳು ಚಾರಿತ್ರ್ಯವಂತರಾಗಲು ಗುಣವಂತರಾಗಲು, ಸಂಸ್ಕಾರವಂತರಾಗಲು ಮನೆಯಲ್ಲಿನ ನಮ್ಮ ಧರ್ಮ ಸಂಸ್ಕ್ರತಿ ಏನಿದೆಯೋ ಅದರ ಅರಿವನ್ನು ತಿಳಿಸಿಕೊಡುವ ಜೊತೆಯಲ್ಲಿ ಧರ್ಮದ ಜ್ಞಾನ, ಪ್ರಜ್ಞೆಯನ್ನು ಮೂಡಿಸಬೇಕು. ದತ್ತಾತ್ರೇಯ ಅವತಾರ ಎಂದರೆ ಅದು ಜ್ಞಾನದ ಅವತಾರ. ಭಗವಂತನ ಪ್ರಾರ್ಥನೆ ದಿನನಿತ್ಯದ ನಿರಂತರ ಕಾರ್ಯವಾಗಬೇಕು. ನಿರಂತರ ಗುರುಸ್ಮರಣೆಯೊಂದಿಗೆ ಸೇವಾ ಕಾರ್ಯಗಳು ನಡೆಯಲಿ. ಜ್ಞಾನದಿಂದ ಆದರ್ಶ ಜೀವನ ಮೌಲ್ಯ ಸಂಸ್ಕಾರಯುತವಾದ ಜೀವನ ಸಾದ್ಯ. ಇಂದು ಸನಾತನ ಹಿಂದೂ ಧರ್ಮ ರಕ್ಷಣೆ ಮತ್ತು ದೇಶ ರಕ್ಷಣೆ ಆಗಬೇಕಾದ ಅನಿವಾರ್ಯತೆ ಇದೆ. ಜಾತೀಯತೆಯನ್ನು ಮರೆತು, ಧರ್ಮ ಪಾಲನೆ, ದೇಶಪ್ರೇಮ ಮೂಡಿಸುವ ಘನ ಕಾರ್ಯ ಆಗಲಿ. ಅಧ್ಯಾತ್ಮಕತೆಯಿಂದ ನಮ್ಮ ಜೀವನ ನೆಮ್ಮದಿ ಸಮತೋಲನ ಸಾದ್ಯ ಎಂದು ಒಡಿಯೂರು ಶ್ರೀ ಗುರುದೇವ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಜಿಯವರು ಆಶೀರ್ವಚನ ನೀಡಿದರು. ಡಿಸೆಂಬರ್ 1 ರಂದು ಪುಣೆಯ ಬಾಣೇರ್ ನಲ್ಲಿರುವ ಬಂಟರ ಭವನದ ಓಣಿಮಜಲು ಜಗನ್ನಾಥ್ ಶೆಟ್ಟಿ ಸಾಂಸ್ಕ್ರತಿಕ ಕೇಂದ್ರದಲ್ಲಿ ಜರಗಿದ ಪುಣೆ ಶ್ರೀ ಗುರುದೇವ ಸೇವಾ ಬಳಗ ಮತ್ತು…
ವಿದ್ಯಾಗಿರಿ : ‘ಸಿನಿಮಾ ಕ್ಷೇತ್ರದಲ್ಲಿ ಬರವಣಿಗೆ ಬಹುಮುಖ್ಯವಾಗಿದ್ದು, ಬರಹಗಾರರಿಗೆ ಹೆಚ್ಚಿನ ಬೇಡಿಕೆ ಇದೆ. ಸಿನಿಮಾ ಕ್ಷೇತ್ರ ಪ್ರವೇಶಿಸಲು ಇಚ್ಛಿಸುವ ವಿದ್ಯಾರ್ಥಿಗಳು ಬರವಣಿಗೆಯನ್ನು ಉನ್ನತೀಕರಿಸಿಕೊಳ್ಳಬೇಕು’ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ರಮಾನಂದ ನಾಯಕ್ (ಪರಮ್ ಭಾರಧ್ವಜ್) ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಪತ್ರೀಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸೋಮವಾರ ಆಳ್ವಾಸ್ ಫಿಲಂ ಸೊಸೈಟಿ ಹಮ್ಮಿಕೊಂಡ ‘ಸ್ಕ್ರಿಪ್ಟಿಂಗ್ ಸಿನಿಮಾ’ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ‘ಸಿನಿಮಾ ನಿರ್ಮಾಣದಲ್ಲಿ ಕಲ್ಪನೆ, ಬರವಣಿಗೆ, ಸಂಕಲನ, ಚಿತ್ರೀಕರಣ ಸೇರಿದಂತೆ ಎಲ್ಲ ವಿಭಾಗಗಳೂ ಮುಖ್ಯ. ಅವುಗಳ ನಡುವೆ ಉತ್ತಮ ಹೊಂದಾಣಿಕೆ ಹಾಗೂ ಸಮತೋಲನ ಇದ್ದಾಗ ಮಾತ್ರ ಒಳ್ಳೆಯ ಸಿನಿಮಾ ಬರಲು ಸಾಧ್ಯ’ ಎಂದರು. ಕಲಿಕೆಯಲ್ಲಿ ಮೇಲು-ಕೀಳು ಎಂಬುದು ಇಲ್ಲ. ಸಣ್ಣವರು, ದೊಡ್ಡವರು, ಸಮಾನ ಮನಸ್ಕರು ಸೇರಿದಂತೆ ಎಲ್ಲರಿಂದಲೂ ಕಲಿಯಬೇಕು ಎಂದರು. ತಾವು ಬರೆದು ನಿರ್ಮಿಸಿದ ಆಲ್ಪಂ ಹಾಡುಗಳನ್ನು ಪ್ರದರ್ಶಿಸಿದ ಅವರು, ಕಿರುಚಿತ್ರ, ಆಲ್ಪಂ ಹಾಡು, ಸಿನಿಮಾ ಹಾಡು, ಸಂಭಾಷಣೆ ಇತ್ಯಾದಿಗಳ ರಚನೆ…
ವಿದ್ಯಾಗಿರಿ: ‘ಆಲಿಸುವ ಹಾಗೂ ಚರ್ಚಿಸಿ ನಿರ್ಧರಿಸುವ ಮನೋಭಾವವೇ ಯಶಸ್ಸು ಕಾಣುವ ಮಾರ್ಗ’ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಮೌಲ್ಯಮಾಪನ) ಡಾ.ಎನ್.ಪಿ. ನಾರಾಯಣ ಶೆಟ್ಟಿ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನಲ್ಲಿ ಮಂಗಳವಾರ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ‘ಅಭಿವ್ಯಕ್ತಿ’ ವಿದ್ಯಾರ್ಥಿ ವೇದಿಕೆಯ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಪತ್ರಿಕೋದ್ಯಮದಲ್ಲಿ ಯಶಸ್ಸು ಕಾಣಲು ಸಂಯಮದ ಆಲಿಸುವ ಮನೋಭಾವ ಬಹುಮುಖ್ಯ. ಯಾವುದೇ ಕಾರ್ಯಕ್ರಮ ಯೋಜಿಸುವ ಮೊದಲು ಸಾಕಷ್ಟು ಚರ್ಚೆ ನಡೆಸಬೇಕು. ಹಿರಿಯರು- ಕಿರಿಯರು ಎನ್ನದೇ ಸಲಹೆ -ಸೂಚನೆಗಳನ್ನು ಸ್ವೀಕರಿಸಿಕೊಂಡು ನಿರ್ಧಾರಕ್ಕೆ ಬರಬೇಕು ಎಂದರು. ಭಾಷೆಯ ಮೇಲಿನ ಹಿಡಿತ ಹಾಗೂ ತಂತ್ರಜ್ಞಾನದ ಸ್ಪರ್ಶ ಇಂದಿನ ಮಾಧ್ಯಮ ಜಗತ್ತಿಗೆ ಅನಿವಾರ್ಯ ಎಂದ ಅವರು, ಜ್ಞಾನ ಮತ್ತು ಅಭಿವ್ಯಕ್ತಿ ಪತ್ರಿಕೋದ್ಯಮದ ಎರಡು ಕಣ್ಣುಗಳು ಎಂದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ‘ನಾವು ಏನು ಆಗಿಲ್ಲವೋ, ಆ ವ್ಯಕ್ತಿತ್ವವನ್ನು ನಮ್ಮೊಳಗೆ ರೂಪಿಸುವುದೇ ಕಲಿಕೆ. ಅದು ನಮ್ಮ ವ್ಯಕ್ತಿತ್ವದ ಉನ್ನತೀಕರಣ ಆಗಿರಬೇಕು’ ಎಂದರು.…
25 ವರ್ಷಗಳ ಸಾರ್ಥಕ ಸಂಭ್ರಮದಲ್ಲಿರುವ ಕರ್ನಾಟಕ ಸಂಘ ಕತಾರ್ 69 ನೇ ಕನ್ನಡ ರಾಜ್ಯೋತ್ಸವ, ರಜತ ಸಂಭ್ರಮವನ್ನು ನವೆಂಬರ್ 15, 2024 ರಂದು ಆಲ್ ವಕ್ರದಲ್ಲಿರುವ ಡಿಪಿಎಸ್ ಆಡಿಟೋರಿಯಂನಲ್ಲಿ ಐತಿಹಾಸಿಕಾಗಿ ಆಯೋಜಿಸಿತು. ಕತಾರ್ ಹಾಗು ಕರುನಾಡಿನ ಗಣ್ಯ ಮಾನ್ಯರು, ಕತಾರ್ ಕನ್ನಡಿಗರ ಉಪಸ್ಥಿಯಲ್ಲಿ, ಕನ್ನಡ ನಾಡು, ನುಡಿ, ಕಲೆ, ಸಂಸ್ಕೃತಿ, ಪರಂಪರೆ, ಪ್ರತಿಷ್ಠೆಯನ್ನು ಬೆಳಗಿಸುವ ರೀತಿಯಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕರ್ನಾಟಕದ ಶ್ರೀಮಂತ ಜಾನಪದ ಕಲೆ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವಂತಹ ವೈಭವದ ರಜತ ಶೋಭಾಯಾತ್ರೆ, ಅದರಲ್ಲಿ ಯಕ್ಷಗಾನ, ವೀರಗಾಸೆ, ಡೊಳ್ಳು ಕುಣಿತ, ಹುಲಿವೇಷ, ಕೀಲು ಕುದುರೆ, ಜೊತೆಗೆ ವಿವಿಧತೆಯಲ್ಲಿ ಏಕತೆಯ ವಿಶ್ವರೂಪವಾಗಿರುವ ಭಾರತದ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾಗಿರುವ ತಮಿಳುನಾಡಿನ ಜಲ್ಲಿಕಟ್ಟು ಎತ್ತಿನ ವೇಷಗಳ ಜೊತೆಗೆ ಮುಖ್ಯ ಅತಿಥಿಗಳಾದ ಕತಾರ್ ನ ಭಾರತೀಯ ರಾಯಭಾರಿ ಎಚ್ ಇ ವಿಪುಲ್, ವಿಶೇಷ ಅತಿಥಿಗಳಾದ ಡಾ. ಗುರುರಾಜ್ ಕರ್ಜಗಿ, ಜನಪ್ರಿಯ ನಟ ರಮೇಶ್ ಅರವಿಂದ್, ಕಾರ್ಗಿಲ್ ಯುದ್ಧ ವೀರ ಕ್ಯಾ.ನವೀನ್ ನಾಗಪ್ಪ ಅವರನ್ನು ಸಂಘದ…
ಗೆಲ್ಲುವ ಪ್ರಕರಣಗಳ ಸಂಖ್ಯೆಯ ಆಧಾರದಲ್ಲಿ ವಕೀಲರ ಯಶಸ್ಸನ್ನು ಅಳೆಯಲಾಗುವುದಿಲ್ಲ. ಅವರುಗಳು ಸಮಾಜಕ್ಕೆ ನೀಡಿದ ಕೊಡುಗೆಯು ಮುಖ್ಯ. ಬಡವರು, ದಮನಿತರ ಪರವಾಗಿ ನ್ಯಾಯಕ್ಕಾಗಿ ಸ್ವಾರ್ಥವಿಲ್ಲದೇ ಹೋರಾಡಿದವನೇ ನಿಜವಾಗಿಯೂ ಯಶ್ವಸಿ ವಕೀಲ. ಈ ಮಾತುಗಳನ್ನು ಕರಿಕೋಟು ಹಾಕಿದ ಆರಂಭದ ದಿನಗಳಲ್ಲಿ ನನ್ನ ಗುರುಗಳು ನನಗೆ ಹೇಳುತ್ತಿದ್ದ ನೆನಪು. ಅನೇಕರಿಗೆ ಇಂದಿಗೂ ನ್ಯಾಯವಾದಿ ಹಾಗೂ ವಕೀಲ ವೃತ್ತಿಯ ಬಗೆಗೆ ತಪ್ಪು ಕಲ್ಪನೆಗಳಿರುವುದು ನಗ್ನ ಸತ್ಯ. ಇವೆಲ್ಲದರ ಜೊತೆಗೆ ಕಾನೂನು ಕ್ಷೇತ್ರದ ಆಳ, ಅಗಲ, ಅವಕಾಶಗಳ ಬಗೆಗೆ ಸಾರ್ವಜನಿಕರಿಗೆ, ಯುವಪೀಳಿಗೆಯ ವಕೀಲರಿಗೆ, ವಕೀಲರಾಗಲು ಕನಸು ಕಾಣುತ್ತಿರುವ ಹೊಸ ಪ್ರತಿಭೆಗಳಿಗೆ ಒಂದಷ್ಟು ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸುವ ಪ್ರಯತ್ನ ನನ್ನದು. ಅರ್ಪಿಸಿಕೊಳ್ಳಿ. ತಾನು ಮಾಡುವ ವೃತ್ತಿಯನ್ನು ಪ್ರೀತಿಸಿ, ಶ್ರದ್ದೆ, ಭಕ್ತಿಯಿಂದ ಪರಿಪಕ್ವತೆಯೊಂದಿಗೆ ದುಡಿದರೇ ವೃತ್ತಿಗೆ ನೀಡುವ ಗೌರವ. ಅಂತೆಯೇ ವೃತ್ತಿ ಧರ್ಮವನ್ನು ಯಥಾವತ್ ಪಾಲಿಸಬೇಕು. ನ್ಯಾಯವಾದಿಗಳು ವೃತ್ತಿ ಧರ್ಮವನ್ನು ಪಾಲಿಸುವುದರ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನು ತೋರುತ್ತಾರೆ. ಅನೇಕ ಸಂದರ್ಭಗಳಲ್ಲಿ ವಕೀಲರು ಮಾಡುವ ಸೇವೆಯೂ ಸಮಾಜದ ಕಣ್ಣಿಗೆ ಕಾಣುವುದಿಲ್ಲ.…