Author: buntsnews

ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿಶ್ವವಿದ್ಯಾಲಯ ಡಾ| ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಈ ಬಾರಿ ನಡೆಸಲಿರುವ 14ನೇ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – ಚತುರ್ದಶ ಸರಣಿ’ಯು ನವೆಂಬರ್ 22 ರಿಂದ 28 ರವರೆಗೆ ನಿಗದಿಯಾಗಿದೆ. ನಿರಂತರ ಏಳು ದಿನಗಳ ಕಾರ್ಯಕ್ರಮವನ್ನು ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಏರ್ಪಡಿಸಲಾಗಿದೆ. ‘ಸಂಘಟನಾ ಪರ್ವ’ ಎಂಬ ಹೆಸರಿನ ಸಪ್ತಾಹದಲ್ಲಿ ಜಿಲ್ಲೆಯ ವಿವಿಧ ತಂಡಗಳಿಂದ ತಾಳಮದ್ದಳೆ ಕ್ಷೇತ್ರಕ್ಕೆ ಅಪರೂಪವೆನಿಸಿದ ಕೆಲವು ಯಕ್ಷಗಾನ ಪ್ರಸಂಗಗಳು ಪ್ರಸ್ತುತಿಗೊಳ್ಳಲಿವೆ ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಇತ್ತೀಚೆಗೆ ಕದ್ರಿ ಕಂಬಳದ ಗೃಹ ಕಚೇರಿಯಲ್ಲಿ ಜರಗಿದ ಯಕ್ಷಾಂಗಣದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನವೆಂಬರ್ 22 ರಂದು ಆದಿತ್ಯವಾರ ಅಪರಾಹ್ನ ಗಂಟೆ 2ರಿಂದ ತೋರಣ ನಾಂದಿಯಾಗಿ ‘ಬಂಗಾರ್ದ ಉರೆ’…

Read More

ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ, ರೋಟರಿ ಮತ್ತು ಉದ್ಯಮ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ. ಬಿ.ಬಿ ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡಲು, ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ. ಬಿ.ಬಿ ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಕಾಲೇಜು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಡಾ. ಬಿ.ಬಿ ಹೆಗ್ಡೆ ಹಾಗೂ ಸ್ಥಳದಾನ ಮಾಡಿದ ಮಹಾತಾಯಿ ಸೌಕೂರು ಸೇರ್ವೆಗಾರ ಮನೆ ವಿಶಾಲಾಕ್ಷಿ ಬಿ. ಹೆಗ್ಡೆ ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಬಿ.ಎಮ್‌ ಸುಕುಮಾರ್‌ ಶೆಟ್ಟಿ ಹೇಳಿದರು. ಇವರು ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ಡಾ. ಬಿ.ಬಿ ಹೆಗ್ಡೆ ಅವರ ಸಂಸ್ಮರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಸೀತಾರಾಮ ನಕ್ಕತಾಯ ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ| ಡಾ. ಕೆ ಉಮೇಶ್ ಶೆಟ್ಟಿ ಆಶಯ ನುಡಿಗಳ್ನಾಡಿದರು. ಉಪ ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ…

Read More

ಕರಾವಳಿಯ ಜನಪ್ರಿಯ ಶೆಫ್ ಹಾಗೂ ಬಹುಮುಖ ಪ್ರತಿಭೆಯ ಕಲಾವಿದರಾಗಿ ಗುರುತಿಸಿಕೊಂಡಿರುವ ತೋಡಾರ್ ಮೂಲದ ಪ್ರಶಾಂತ್ ಎಂ ಶೆಟ್ಟಿ ಅವರು ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಪ್ರದಾನ ಮಾಡಲಾಗುವ 2026ನೇ ಸಾಲಿನ ಪ್ರತಿಷ್ಠಿತ ‘ಕರುನಾಡ ರತ್ನ’ ಪ್ರಶಸ್ತಿ ಹಾಗೂ ಬಿರುದಿಗೆ ಆಯ್ಕೆಯಾಗಿದ್ದಾರೆ. ಅಡುಗೆ ಕಲೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪ್ರಶಾಂತ್ ಎಂ ಎಸ್ ಅವರು ಕೇವಲ ಶೆಫ್ ಆಗಿ ಮಾತ್ರವಲ್ಲದೆ, ವಿವಿಧ ಕಲಾ ಕ್ಷೇತ್ರಗಳಲ್ಲಿಯೂ ಆಸಕ್ತಿ ಮತ್ತು ಪ್ರತಿಭೆಯನ್ನು ಹೊಂದಿರುವ ಬಹುಮುಖ ವ್ಯಕ್ತಿತ್ವದವರಾಗಿದ್ದಾರೆ. ತಮ್ಮ ವೃತ್ತಿಪರ ಕೌಶಲ್ಯ, ಸೃಜನಶೀಲತೆ ಹಾಗೂ ಕಲಾತ್ಮಕ ಅಭಿರುಚಿಯ ಮೂಲಕ ಕರಾವಳಿ ಭಾಗದಲ್ಲಿ ಜನಪ್ರಿಯತೆ ಗಳಿಸಿರುವುದು ಅವರ ವಿಶೇಷತೆಯಾಗಿದೆ. ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರತಿಭಾವಂತರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಕರ್ನಾಟಕ ಮೀಡಿಯಾ ಕ್ಲಬ್ ವತಿಯಿಂದ ಕನ್ನಡ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಕರುನಾಡ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.…

Read More

ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತ ನಿಧಿ ಕೇಂದ್ರ ಕುಂದಾಪುರ, ಎನ್ಎಸ್ಎಸ್ ಘಟಕಗಳು ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕುಂದಾಪುರದ ಬಂಟರ ಯಾನೆ ನಾಡವರ ಸಂಕೀರ್ಣದ ಎಸ್.ಎಸ್ ಹೆಗ್ಡೆ ಸಭಾಭವನದಲ್ಲಿ ನಡೆಯಿತು. ಕುಂದಾಪುರ ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾದ ಚಿತ್ತರಂಜನ್ ಹೆಗ್ಡೆ ಹರ್ಕೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಕ್ತದಾನ ಅತ್ಯಂತ ಶ್ರೇಷ್ಠವಾದ ಮಾನವೀಯ ಸೇವೆಯಾಗಿದ್ದು, ಒಂದು ಜೀವ ಉಳಿಸುವ ಮೂಲಕ ಮತ್ತೊಂದು ಕುಟುಂಬಕ್ಕೆ ಹೊಸ ಭರವಸೆ ನೀಡಿದಂತಾಗುತ್ತದೆ. ರಕ್ತಕ್ಕೆ ಪರ್ಯಾಯವಾಗಿ ಯಾವುದೇ ಔಷಧಿಯನ್ನು ತಯಾರಿಸಲು ಸಾಧ್ಯವಿಲ್ಲ. ಆದ್ದರಿಂದ ಆರೋಗ್ಯವಂತ ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನ ಜೀವ ಉಳಿಸುವ ಮಹತ್ಕಾರ್ಯ ಎಂದರು. ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ| ಚೇತನ್ ಶೆಟ್ಟಿ…

Read More